Home namma chikmagalur ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಬೀದಿನಾಯಿಗಳನ್ನು ಸೂಕ್ತ ಸ್ಥಳಕ್ಕೆ ಬಿಡಲು ಕ್ರಮ
namma chikmagalurchikamagalurHomeLatest News

ಸಂತಾನಹರಣ ಶಸ್ತ್ರಚಿಕಿತ್ಸೆಗೆ ಒಳಪಡಿಸಿ ಬೀದಿನಾಯಿಗಳನ್ನು ಸೂಕ್ತ ಸ್ಥಳಕ್ಕೆ ಬಿಡಲು ಕ್ರಮ

Share
????????????????????????????????????
Share

ಚಿಕ್ಕಮಗಳೂರು: ಯಾವುದೇ ಸಂಸ್ಥೆಗಳ ಆವರಣದಲ್ಲಿ ಕಂಡು ಬರುವ ಪ್ರತಿಯೊಂದು ಬೀದಿ ನಾಯಿಗಳನ್ನು ಸಂತಾನಹರಣ ಚಿಕಿತ್ಸೆಗೆ ಒಳಪಡಿಸಿ ಅವುಗಳನ್ನು ಗೊತ್ತುಪಡಿಸಿದ ಪ್ರದೇಶಗಳಿಗೆ ಸ್ಥಳಾಂತರಿಸಬೇಕು; ಸಾರ್ವಜನಿಕ ಹಿತದೃಷ್ಟಿಯಿಂದ ಅಧಿಕಾರಿಗಳು ತಮ್ಮ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು.

ಇಂದು ನಗರದ ಜಿಲ್ಲಾ ಪಂಚಾಯಿತಿ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮಾನ್ಯ ಸರ್ವೋಚ್ಚ ನ್ಯಾಯಾಲಯವು ನೀಡಿರುವ ಆದೇಶಗಳ ಅನುಷ್ಠಾನ ಕುರಿತ ಸಭೆಯ ಅಧ್ಯಕ್ಚತೆ ವಹಿಸಿ ಅವರು ಮಾತನಾಡಿ ಸ್ವಚ್ಛತೆ ಮತ್ತು ನಾಯಿ ಪ್ರವೇಶ ತಡೆಗಟ್ಟುವಿಕೆಗೆ ನೋಡಲ್ ಅಧಿಕಾರಿಯನ್ನು ನೇಮಿಸಿ ಪ್ರವೇಶ ದ್ವಾರದಲ್ಲಿ ಸಂಪರ್ಕ ವಿವರ  ಪ್ರದರ್ಶಿಸಿ ಮತ್ತು ಸ್ಥಳೀಯ ಸಂಸ್ಥೆಗೆ ತಿಳಿಸಬೇಕು.

ಶಿಕ್ಷಣ ಇಲಾಖೆಯು ಆರೋಗ್ಯ ಇಲಾಖೆ ಹಾಗೂ ಪಶುಪಾಲನಾ ಇಲಾಖೆಯ ಸಹಯೋಗದೊಂದಿಗೆ ಶಾಲಾ ಕಾಲೇಜು ಹಾಗೂ ವಸತಿ ಶಾಲೆಗಳಲ್ಲಿ ರೇಬಿಸ್ ರೋಗದ ಕುರಿತು ಅರಿವು ಮೂಡಿಸಬೇಕು ಎಂದ ಅವರು, ನಾಯಿ ಕಡಿತಕ್ಕೆ ಪ್ರಥಮ ಚಿಕಿತ್ಸೆ ಒದಗಿಸುವ ಬಗ್ಗೆ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಗಳಿಗೆ ಜಾಗೃತಿ ಮೂಡಿಸುವಂತೆ ಸೂಚಿಸಿದರು.

ಶಾಲಾ ಆವರಣ, ಅಂಗನವಾಡಿ ಆವರಣ, ಕ್ರೀಡಾ ಸಂಕೀರ್ಣ ಮತ್ತು ಕ್ರೀಡಾಂಗಣಗಳಲ್ಲಿ ಬೀದಿ ನಾಯಿಗಳ ಪ್ರವೇಶಿಸದಂತೆ ಎಚ್ಚರಿಕೆ ವಹಿಸಬೇಕು. ಭದ್ರತಾ ಸಿಬ್ಬಂದಿಯನ್ನು ನಿಯೋಜಿಸುವಂತೆ ತಿಳಿಸಿದ ಅವರು, ಬೇಲಿ, ಗಡಿ ಗೋಡೆಗಳು, ದ್ವಾರಗಳು ಮತ್ತು ಬೀದಿ ನಾಯಿಗಳ ಪ್ರವೇಶವನ್ನು ತಡೆಗಟ್ಟಲು ಕೈಗೊಂಡಿರುವ ಕ್ರಮಗಳ ಕುರಿತು ಖಚಿತಪಡಿಸಿಕೊಂಡು ವರದಿ ನೀಡಬೇಕು. ಎಲ್ಲಾ ಕಡೆಗಳಲ್ಲಿ ರೇಬಿಸ್ ವಿರೋಧಿ ಲಸಿಕೆ ಮತ್ತು ಇಮ್ಯುನೊಗ್ಲೋಬಿನ್‌ನ ಕಡ್ಡಾಯ ದಾಸ್ತಾನು ಇರುವಂತೆ ನೋಡಿಕೊಳ್ಳಬೇಕು. ರಾಷ್ಟ್ರೀಯ, ರಾಜ್ಯ ಹೆದ್ದಾರಿಗಳು ಮತ್ತು ನಗರ ಪ್ರದೇಶಗಳಲ್ಲಿ ಬಿಡಾಡಿ ದನಗಳು ಮತ್ತು ಬೀದಿ ಪ್ರಾಣಿಗಳನ್ನು ಗಮನಿಸಿ ಅವುಗಳನ್ನು ರಕ್ಷಿಸಿ ಗೊತ್ತುಪಡಿಸಿದ ಸ್ಥಳಗಳಿಗೆ ಸ್ಥಳಾಂತರಿಸುವಂತೆ ತಿಳಿಸಿದರು.

ಬಸ್ ನಿಲ್ದಾಣದಲ್ಲಿರುವ ಅಂಗಡಿಗಳ ಮಾಲೀಕರು ಮತ್ತು ಸಾರ್ವಜನಿಕರು ತಿಂಡಿ ಪ್ಯಾಕೇಟ್ ಮುಂತಾದವುಗಳನ್ನು ಕಸದ ಬುಟ್ಟಿಗೆ ಹಾಕಬೇಕು. ಜೊತೆಗೆ ಶಾಲೆಯಲ್ಲಿ ನೀಡುವ ಬಿಸಿ ಊಟವನ್ನು ವಿದ್ಯಾರ್ಥಿಗಳು ಎಸೆಯುವುದರಿಂದ ಶಾಲೆ ಆವರಣಗಳಲ್ಲಿ ಬೀದಿ ನಾಯಿಗಳು ಹೆಚ್ಚಾಗಿರಲು ಕಾರಣ. ಈ ಬಗ್ಗೆ ಶಿಕ್ಷಣ ಇಲಾಖೆ ಅಧಿಕಾರಿಗಳು ಗಮನ ಹರಿಸಿ ಪರ್ಯಾಯ ವ್ಯವಸ್ಥೆ ಕಲ್ಪಿಸಲು ಹೇಳಿದರು.

ಬೀದಿ ನಾಯಿಗಳಿಗೆ ಎಲ್ಲಿ ಬೇಕೆಂದರಲ್ಲಿ ಆಹಾರವನ್ನು ನೀಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ಕಸ ಸಂಗ್ರಹಣೆ ಇರುವ ಸ್ಥಳದಲ್ಲಿ ಬೀದಿ ನಾಯಿಗಳು ಇರುವುದು ಹೆಚ್ಚು, ರಸ್ತೆಯಲ್ಲಿರುವ ಕಸವನ್ನು ಆದಷ್ಟು ಬೇಗ ವಿಲೇವಾರಿ ಮಾಡುವಂತೆ ತಿಳಿಸಿದ ಅವರು. ಜನರಿಗೆ ಬೀದಿ ನಾಯಿಗಳ ಹಾವಳಿ ತಡೆಗಟ್ಟುವ ಸಂಬಂಧ ಅರಿವು ಮೂಡಿಸಬೇಕು. ಕಸವನ್ನು ಎಲ್ಲೆಂದರಲ್ಲಿ ಎಸೆಯದೆ ಕಸದ ವಾಹನಕ್ಕೆ ಹಾಕಲು ಸಾರ್ವಜನಿಕರಿಗೆ ತಿಳಿ ಹೇಳಬೇಕು ಎಂದರು.

ಸಭೆಯಲ್ಲಿ ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದ ಸಿ.ಟಿ.ಜಯಕುಮಾರ್, ಪಶುಪಾಲನಾ ಇಲಾಖೆಯ ಉಪನಿರ್ದೇಶಕ ಸಡಾ.ಮಹೇಶ್, ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Steps to sterilize stray dogs and release them to appropriate places

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...