Home Latest News ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಕ
Latest NewschikamagalurHome

ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಆಡಳಿತಾಧಿಕಾರಿ ನೇಮಕ

Share
Share
ಚಿಕ್ಕಮಗಳೂರು: ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾಕ್ಕೆ ಆಡಳಿತಾಧಿಕಾರಿಯಾಗಿ ಅಪರ ಜಿಲ್ಲಾಧಿಕಾರಿ ನಾರಾಯಣರಡ್ಡಿ ಕನಕರಡ್ಡಿ ಅವರನ್ನು ನೇಮಿಸಿ ರಾಜ್ಯ ಧಾರ್ಮಿಕ ಪರಿಷತ್ತು ಹಾಗೂ ಆಯುಕ್ತರು ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆ ಆದೇಶ ಹೊರಡಿಸಿದೆ.
ದತ್ತಪೀಠ ವ್ಯವಸ್ಥಾಪನಾ ಸಮಿತಿ ಅಧಿಕಾರಾವಧಿ ಮುಗಿದ ಹಿನ್ನಲೆಯಲ್ಲಿ ಆಡಳಿತಾಧಿಕಾರಿ ನೇಮಿಸಿ ಆದೇಶ ಹೊರಡಿಸಿದ್ದು, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ದತ್ತಪೀಠ ವ್ಯವಸ್ಥಾಪನಾ ಸಮಿತಿಯನ್ನು ರಚಿಸಲಾಗಿತ್ತು. ಏಕಪಕ್ಷೀಯವಾಗಿ ಸಮಿತಿ ರಚಿಸಲಾಗಿದೆ ಎಂದು ಆಕ್ಷೇಪಗಳು ವ್ಯಕ್ತವಾಗಿದ್ದವು.
ಸಮಿತಿ ಬದಲಾವಣೆ ಮಾಡಬೇಕೆಂಬ ಆಗ್ರವೂ ಕೇಳಿ ಬಂದಿತ್ತು.ಪ್ರವರ್ಗ ಎ ಶ್ರೇಣಿಗೆ ಸೇರ್ಪಡೆಗೊಳ್ಳುವ ಶ್ರೀಗುರು ದತ್ತಾತ್ರೇಯ ಬಾಬಾಬುಡನ್‌ ದರ್ಗಾಕ್ಕೆ ಮೂರು ವರ್ಷಗಳ ಅವಧಿಗೆ ವ್ಯವಸ್ಥಾಪನಾ ಸಮಿತಿ ರಚಿಸಲಾಗಿತ್ತು. ವ್ಯವಸ್ಥಾಪನಾ ಸಮಿತಿ ಅವಧಿ ಮುಗಿದಿದ್ದು, ದೇವಸ್ಥಾನ ದೈನಂದಿನ ಆಡಳಿತ ನಿರ್ವಹಣೆ ಹಿತಾದೃಷ್ಟಿಯಿಂದ ಆಡಳಿತಾಧಿಕಾರಿಯನ್ನು ನೇಮಕ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
Administrator appointed for Bababudan Swamy Dargah of Guru Dattatreya
Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...