Home namma chikmagalur `ಸಣ್ಣ ಕೈಗಾರಿಕೆಗಳಿಂದ ಆರ್ಥಿಕ ಅಭಿವೃದ್ಧಿ ಜೊತೆಗೆ ಉದ್ಯೋಗ ಸೃಷ್ಟಿ’
namma chikmagalurchikamagalurHomeLatest News

`ಸಣ್ಣ ಕೈಗಾರಿಕೆಗಳಿಂದ ಆರ್ಥಿಕ ಅಭಿವೃದ್ಧಿ ಜೊತೆಗೆ ಉದ್ಯೋಗ ಸೃಷ್ಟಿ’

Share
Share

ಚಿಕ್ಕಮಗಳೂರು: : ಸಣ್ಣ ಕೈಗಾರಿಕೆಗಳ ಸ್ಥಾಪನೆಯಿಂದ ಆರ್ಥಿಕ ಅಭಿವೃದ್ಧಿಯ ಜೊತೆಗೆ ಉದ್ಯೋಗ ಸೃಷ್ಟಿಗೂ ನೆರವಾಗುತ್ತದೆ ಎಂದು ಜಿಲ್ಲಾ ಕೈಗಾರಿಕಾ ಕೇಂದ್ರದ ಪ್ರಭಾರ ಜಂಟಿ ನಿರ್ದೇಶಕ ಸಿ.ಎಂ.ಮಹೇಶ್ ಕುಮಾರ್ ಹೇಳಿದರು.

ಇಂದು ನಗರದ ಆದ್ರಿಕಾ ಹೋಟೆಲ್‌ನಲ್ಲಿ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಸಹಯೋಗದಲ್ಲಿ ಎಂ.ಎಸ್.ಎಂ.ಇ,.ಗಳ ಕಾರ್ಯಕ್ಷಮತೆಯನ್ನು ಹೆಚ್ಚಿಸುವುದು ಮತ್ತು ವೇಗಗೊಳಿಸುವ ಯೋಜನೆಯಡಿ ಲೀನ್ ಯೋಜನೆ ಮತ್ತು ಝಡ್.ಇ.ಡಿ. ಕುರಿತು ಒಂದು ದಿನದ ಅರಿವು ಮೂಡಿಸುವ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಸಣ್ಣ ಕೈಗಾರಿಕೆಗಳ ಸ್ಥಾಪನೆಗೆ ಸರ್ಕಾರ ಪ್ರೋತ್ಸಾಹ ನೀಡುತ್ತಿದ್ದು, ಕಾಸಿಯಾ ಸೇರಿದಂತೆ ವಿವಿಧ ಕೈಗಾರಿಕಾ ಸಂಸ್ಥೆಗಳ ಸಮಸ್ಯೆಗಳನ್ನು ಸರ್ಕಾರದ ಇತಿಮಿತಿಯಲ್ಲಿ ಪರಿಹರಿಸಲು ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆದಾರರಿಗೆ ರಫ್ತು ಕುರಿತು ತರಬೇತಿ ಸಹ ನೀಡಿ ಪ್ರೋತ್ಸಾಹಿಸಲಾಗುತ್ತಿದೆ ಎಂದು ಹೇಳಿದರು.

ಲೀನ್ ಯೋಜನೆ ಮತ್ತು ಝಡ್.ಇ.ಡಿ. ಹಾಗೂ ರಫ್ತು ಯೋಜನೆಗಳಿಂದ ವಿವಿಧ ಸೌಲಭ್ಯಗಳನ್ನು ಪಡೆದು ವ್ಯಾಪಾರ ಮತ್ತು ಸಂಘ-ಸಂಸ್ಥೆಗಳ ಜೊತೆ ಸೇರಿ ಯುವಕರು ನವ ಉದ್ಯಮವನ್ನು ಆರಂಭಿಸಿ ಉದ್ಯಮಶೀಲತೆ ಬೆಳೆಸಿಕೊಳ್ಳಬೇಕು ಎಂದ ಅವರು, ಸರ್ಕಾರ ಕೈಗಾರಿಕೆಗೆ ಸಂಬಂಧಿಸಿದ ವಿವಿಧ ಚಟುವಟಿಕೆ ಕೈಗೊಳ್ಳುವುದರಿಂದ ಯುವಕರು ಉದ್ಯಮ ಸ್ಥಾಪಿಸಲು ಒಂದು ಉತ್ತಮ ಅವಕಾವಾಗುತ್ತದೆ. ರೈತರು, ಕಾಲೇಜು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಉದ್ಯಮಶೀಲತೆಯನ್ನು ಬೆಳೆಸಿಕೊಳ್ಳಬೇಕು. ಸರ್ಕಾರದಿಂದ ಸಣ್ಣ ಗುಡಿ ಕೈಗಾರಿಕೆ ಸ್ಥಾಪಿಸಲು ಸಬ್ಸಿಡಿ ವ್ಯವಸ್ಥೆ ಇದ್ದು, ಇದರ ಸೌಲಭ್ಯ ಪಡೆದು ನಿರುದ್ಯೋಗಿಗಳಿಗೆ ಕೆಲಸವನ್ನು ನೀಡಬೇಕು ಎಂದು ಹೇಳಿದರು.

ಕಾಸಿಯ ಅಧ್ಯಕ್ಷ ಬಿ.ಆರ್.ಗಣೇಶ್‌ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಮ್ಮ ದೇಶದಲ್ಲಿ ಅತೀ ಹೆಚ್ಚಾಗಿ ಕಂಡು ಬರುವ ಸಣ್ಣ ಕೈಗಾರಿಕೆಗಳು ರೈತರಿಂದ ಬೆಳವಣಿಗೆಯಾಗಿವೆ ಮತ್ತು ಉದ್ಯಮಗಳು ಕೂಡ ಅವರಿಂದಲೇ ಬೆಳೆಯುತ್ತಿವೆ ಎಂದು ಹೇಳಿದರು.

ಅಭಿವೃದ್ಧಿಯಲ್ಲಿ ಕೃಷಿ ಮತ್ತು ಕೈಗಾರಿಕೆಗಳು ಪ್ರಧಾನ ಪಾತ್ರ ವಹಿಸುತ್ತವೆ. ಸಣ್ಣ ಪ್ರಮಾಣದ ಕೈಗಾರಿಕೆಗಳಿಂದ ಗ್ರಾಮೀಣ ಜನರಿಗೆ ಉದ್ಯೋಗ ಸಿಗುತ್ತದೆ. ವಿದ್ಯಾರ್ಥಿಗಳು ಮತ್ತು ಉದ್ಯಮದಾರರು ಸಾಧನೆ ಮಾಡಲು ಈ ಯೋಜನೆಯು ಉತ್ತಮವಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಮಹೇಶ್ ಎಚ್.ಎನ್, ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ ನಿರ್ದೇಶಕ ಶ್ರೀಪ್ರಸಾದ್ ಕೃಷ್ಣತ್ ಶೇಟ್, ಜಿಲ್ಲಾ ಪಂಚಾಯತ್ ಗ್ರಾಮೀಣ ಕೈಗಾರಿಕೆ ಉಪನಿರ್ದೇಶಕ ಎನ್.ಚಂದ್ರಶೇಖರ್, ಕೆ,ಎಸ್,ಎಫ್,ಸಿ. ಶಾಖಾ ವ್ಯವಸ್ಥಾಪಕಿ ಪ್ರಮೀಳಾ ಹೆಚ್,ಗ್ರಾಮೀಣ ಜಂಟಿ ಕಾರ್ಯದರ್ಶಿ ದಿನೇಶ್ ಕುಮಾರ್ ವಿ, ಪ್ಯಾನಲ್ ಅಧ್ಯಕ್ಷ ಸುಭಾಷ್ ಚಂದ್ರ ಭಟ್, ವಿದ್ಯಾರ್ಥಿಗಳು ಮುಂತಾದವರು ಉಪಸ್ಥಿತರಿದ್ದರು.

`Small industries contribute to economic development and job creation’

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...