Home Latest News ರಾಷ್ಟ್ರಕಂಡ ಅಪರೂಪದ ಜನನಾಯಕಿ ಇಂದಿರಾಗಾಂಧಿ
Latest NewschikamagalurHomenamma chikmagalur

ರಾಷ್ಟ್ರಕಂಡ ಅಪರೂಪದ ಜನನಾಯಕಿ ಇಂದಿರಾಗಾಂಧಿ

Share
Share

ಚಿಕ್ಕಮಗಳೂರು: ದೇಶಕ ಆರ್ಥಿಕತೆ ಗಟ್ಟಿಗೊಳಿಸಿ, ಹೂಳುವವನಿಗೆ ಭೂ ಒಡೆಯ ನೆಂಬ ಕಾನೂನು ಜಾರಿಗೊಳಿಸಿ, ರೈತರ ಬೆನ್ನೆಲುಬಾಗಿ ನಿಂತ ಮಾಜಿ ಪ್ರಧಾನಿ ಇಂದಿರಾಗಾಂಧಿಯವರು ರಾಷ್ಟ್ರ ಕಂಡ ಅಪರೂಪ ಜನನಾಯಕಿ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಇಂದಿರಾಗಾಂಧಿ ಬಡಾವಣೆಯಲ್ಲಿ ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದಿಂದ ಬುಧವಾರ ಆ ಯೋಜಿಸಿದ್ಧ ಮಾಜಿ ಪ್ರಧಾನಿ ದಿ|| ಇಂದಿರಾಗಾಂಧಿಯವರ ೧೦೮ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ದೇಶ ಹಾಗೂ ನಾಡಿನಲ್ಲಿ ಕಾಂಗ್ರೆಸ್ ಆಡಳಿತವು ಬಡವರು, ಶೋಷಿತರು ಹಾಗೂ ಹಿಂದುಳಿದವರ ಶ್ರೇ ಯೋಭಿವದ್ದಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿದೆ. ರಾಷ್ಟ್ರದಲ್ಲಿ ಸುಮಾರು ೧೬ ವರ್ಷಗಳ ಕಾಲ ಆಡಳಿತ ನಡೆಸಿದ ಇಂದಿರಾಗಾಂಧಿಯವರು ಉಕ್ಕಿನ ಮಹಿಳೆಯೆಂದೇ ಪ್ರಸಿದ್ಧಿ ಪಡೆದುಕೊಂಡವರು ಎಂದರು.

ಅಂದು ಪ್ರಧಾನಿಯಾಗಿದ್ಧ ಇಂದಿರಾಗಾಂಧಿ ಪಾಕಿಸ್ತಾದ ವಿರುದ್ಧ ಯುದ್ದಸಾರಿ ವಿಜಯ ಸಾಧಿಸಿದಲ್ಲ ದೇ, ಚೀನಾ ವಿರುದ್ಧ ಧೃಢ ನಿರ್ಧಾರ ಕೈಗೊಂಡು ಗಟ್ಟಿತನ ಮೆರೆದವರು. ಅಲ್ಲಿಂದ ಇಲ್ಲಿಯತನಕ ಕಾಂಗ್ರೆಸ್ ಸರ್ಕಾರ ಆ ನಿಲುವಿನಲ್ಲೇ ಅಧಿಕಾರ ನಡೆಸಿದೆ. ಇಂದು ನಿವೇಶನ ರಹಿತ ಗ್ರಾಮಾಂತರ ನಿವಾಸಿಗಳಿಗೆ ಹಕ್ಕು ಪತ್ರ ವಿತರಿಸಿ ಹಿರಿಯರ ಮಾರ್ಗದಲ್ಲಿ ಆಡಳಿತ ನಡೆಸುತ್ತಿದೆ ಎಂದು ಹೇಳಿದರು.

ಜಿಲ್ಲೆಯಲ್ಲೂ ಸಹ ರೈಲ್ವೆ, ಬಸ್ ನಿಲ್ದಾಣ, ಕುಡಿಯುವ ನೀರಿನ ವ್ಯವಸ್ಥೆ ಸೇರಿದಂತೆ ಜನತೆಯ ಮೂಲ ಸೌಕರ್ಯಕ್ಕೆ ಕಾಂಗ್ರೆಸ್ ಕೊಡುಗೆ ಅಪಾರವಿದೆ. ದೇಶದ ಏಳಿಗೆಗೆ ಇಂದಿರಾಗಾಂಧಿಯವರು ಭವಿಷ್ಯದ ಹಾದಿ ಸುಗಮಗೊಳಿಸಲು ತಮ್ಮ ಸಂಪೂರ್ಣ ಜೀವನವನ್ನು ದೇಶಕ್ಕಾಗಿ ಮುಡಿಪಿಟ್ಟವರು ಎಂದರೆ ತಪ್ಪಾಗುವು ದಿಲ್ಲ ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಶಬಾನ ಸುಲ್ತಾನ ಮಾತನಾಡಿ ಚಿಕ್ಕಮಗಳೂರು ಇಂದಿರಾ ಗಾಂಧಿ ಅವರಿಗೆ ಮರುಜನ್ಮವಿತ್ತ ಕ್ಷೇತ್ರ. ಈ ಭಾಗದಲ್ಲಿ ನೆಚ್ಚಿನ ಶಾಸಕರ ನೇತೃತ್ವದಲ್ಲಿ ಬಡವರ ಮೂಲನಿವಾ ಸಿಗಳಿಗೆ ಹಕ್ಕುಪತ್ರ ವಿತರಿಸುವ ಕಾರ್ಯ ಪ್ರಗತಿಯಲ್ಲಿದೆ. ಅಲ್ಲದೇ ನೆಮ್ಮದಿ ಬದುಕಿಗೆ ರಾಜ್ಯ ಸರ್ಕಾರ ಗ್ಯಾ ರಂಟಿ ಯೋಜನೆ ಜಾರಿಗೊಳಿಸಿ ಸ್ಪಂದಿಸುತ್ತಿದೆ ಎಂದು ಹೇಳಿದರು.

ಇದೇ ವೇಳೆ ಇಂದಿರಗಾಂಧಿ ಜನ್ಮದಿನದ ಪ್ರಯುಕ್ತ ಬಡಾವಣೆಯ ನಿವಾಸಿಗಳಿಗೆ ಹಣ್ಣು, ಸಿಹಿ ವಿತರಿಸ ಲಾಯಿತು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಎ.ವಿ.ಗಾಯತ್ರಿ ಶಾಂತೇಗೌಡ, ನಗರಸಭೆ ಸದಸ್ಯರಾದ ಮುನೀರ್ ಅಹ್ಮದ್, ಖಲಂಧರ್, ಮಾಜಿ ಸದಸ್ಯೆ ಸುರೇಖಾ ಸಂಪತ್, ಜಿಲ್ಲಾ ಮಹಿಳಾ ಘಟಕ ಉಪಾಧ್ಯಕ್ಷರಾದ ಮಲ್ಲಿಕಾದೇವಿ, ನೇತ್ರಾವತಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಮುಖಂಡ ರುಗಳಾದ ಕುಸುಮ, ರಾಮಚಂದ್ರ, ಅನ್ಸರ್‌ಆಲಿ, ಪ್ರಸಾದ್ ಅಮೀನ್, ಜಯಂತಿ, ಹಿರೇಗೌಜ ಶಿವು ಮತ್ತಿತರರು ಹಾಜರಿದ್ದರು.

Indira Gandhi a rare people’s leader the nation has seen

Share

Leave a comment

Leave a Reply

Your email address will not be published. Required fields are marked *

Don't Miss

ವೈದ್ಯರ ಬೇಜವಾಬ್ದಾರಿತನಕ್ಕೆ ಮೂರು ತಿಂಗಳ ಹಸುಗೂಸು ಸಾವು

ಚಿಕ್ಕಮಗಳೂರು: ವೈದ್ಯರ ಬೇಜವಾಬ್ದಾರಿತನ ಹಾಗೂ ನಿರ್ಲಕ್ಷ್ಯದ ಆರೋಪಕ್ಕೆ ಮೂರು ತಿಂಗಳ ಹಸುಗೂಸೊಂದು ಬಲಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಸರ್ಕಾರಿ ಜಿಲ್ಲಾ ಹೆರಿಗೆ ಆಸ್ಪತ್ರೆಯಲ್ಲಿ ನಡೆದಿದೆ. ಸರಿಯಾದ ಸಮಯಕ್ಕೆ ಸೂಕ್ತ ಚಿಕಿತ್ಸೆ ನೀಡದೆ...

ಜಿಲ್ಲೆಯಾದ್ಯಂತ ಮೊಹರಂ ಹಬ್ಬ ಆಚರಣೆ

ಚಿಕ್ಕಮಗಳೂರು: ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಮೊಹರಂ ಹಬ್ಬವನ್ನು ಮುಸ್ಲಿಮರು ಜಿಲ್ಲೆಯಾದ್ಯಂತ ಶುಕ್ರವಾರ ಶ್ರದ್ದಾಭಕ್ತಿಯಿಂದ ಆಚರಿಸಿದರು. ಕಳೆದ ಎರಡು ದಿನಗಳಿಂದ ಉಪವಾಸವಿದ್ದ ಭಕ್ತರು ನಗರದ ಬಡಾವಣೆಗಳ ವಿವಿಧ ಮಸೀದಿಗಳಿಗೆ ಬೆಳಿಗ್ಗೆಯೇ ತೆರಳಿ...

Related Articles

ನೀವು ಬೆಳಿಗ್ಗೆ ಕಸ ಗುಡಿಸದಿದ್ದರೆ ದೇಶವೇ ನಡೆಯಲ್ಲ ಧೈರ್ಯವಾಗಿ ಹಕ್ಕು ಕೇಳಿ

ಚಿಕ್ಕಮಗಳೂರು:  “ನೀವು ಬೆಳಿಗ್ಗೆ ಎದ್ದು ಕಸ ಗುಡಿಸದಿದ್ದರೆ ಈ ದೇಶದ ಯಾವುದೇ ನಗರ, ಪಟ್ಟಣ, ಊರುಗಳು...

ಸರ್ಕಾರಿ ಕಚೇರಿಗಳಲ್ಲಿ ಇ-ಆಫೀಸ್ ಮೂಲಕವೇ ವ್ಯವಹರಿಸಿ

ಚಿಕ್ಕಮಗಳೂರು: ಪ್ರತೀ ಕಚೇರಿಗಳಲ್ಲೂ ಇ-ಆಫೀಸ್ ಮೂಲಕವೇ ಪತ್ರ ಹಾಗೂ ಕಡತಗಳನ್ನು ನಿರ್ವಹಿಸುವಂತೆ ಸರ್ಕಾರದ ಅಪರ ಮುಖ್ಯ...

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....