Home namma chikmagalur ಸುಲಿಗೆ ಪ್ರಕರಣ: ಇಬ್ಬರು ಆಪಾದಿತರಿಗೆ 5 ವರ್ಷ ಕಠಿಣ ಸಜೆ
namma chikmagalurchikamagalurHomeLatest News

ಸುಲಿಗೆ ಪ್ರಕರಣ: ಇಬ್ಬರು ಆಪಾದಿತರಿಗೆ 5 ವರ್ಷ ಕಠಿಣ ಸಜೆ

Share
Share

ಚಿಕ್ಕಮಗಳೂರು:  ಮೋಟಾರ್ ಬೈಕ್‌ನಲ್ಲಿ ತೆರಳುತ್ತಿದ್ದವರನ್ನು ದೂಡಿ ಬೀಳಿಸಿ ಚಿನ್ನಾಭರಣ ಕಸಿದು ಸುಲಿಗೆ ನಡೆಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಇಬ್ಬರು ಆರೋಪಿಗಳಿಗೆ ಐದು ವರ್ಷಗಳ ಕಠಿಣ ಸಜೆ ಹಾಗೂ ದಂಡ ವಿಧಿಸಿ ತೀರ್ಪು ನೀಡಿದೆ.

ಕಡೂರು ತಾಲ್ಲೂಕು ಬುಕ್ಕಸಾಗರ ಕೊರಚರಹಟ್ಟಿಯ ಸಂತೋಷ್ ಹಾಗೂ ಹಾಲೇಶ ಎಂಬುವವರೇ ಶಿಕ್ಷೆಗೆ ಒಳಗಾದವರು. ಈ ಘಟನೆ ನಡೆದಿರುವುದು ೨೦೧೨ರ ಜೂನ್ ೪ ರಂದು. ಕಡೂರು ತಾಲ್ಲೂಕು ಸಖರಾಯಪಟ್ಟಣ ಸಮೀಪದ ಸ್ವಾಮಿಕಟ್ಟೆ ನಿವಾಸಿ ಸುಧಾ ಎಂಬುವವರು ತಮ್ಮ ಪತಿ ಶೇಖರ್ ಅವರೊಂದಿಗೆ ಕರಡಿಗವಿ ಮಠಕ್ಕೆ ತೆರಳಿ ತಮ್ಮ ಮಗುವಿನ ಮುಡಿ (ತಲೆಕೂಡಲು) ತೆಗೆಸಿಕೊಂಡು ತೆಗೆಸಿಕೊಂಡು ಅಂದು ಮಧ್ಯಾಹ್ನ ೨.೩೦ರ ಸುಮಾರಿಗೆ ಮಗುವಿನೊಂದಿಗೆ ಬೈಕ್‌ನಲ್ಲಿ ಮರಳುತ್ತಿದ್ದಾಗ ಶೇಖರ್ ಅವರನ್ನು ತಳ್ಳಿ ಬೈಕ್ ಅನ್ನು ದೂಡಿ ರಸ್ತೆಯ ಮೇಲೆ ಬೀಳಿಸಿದ್ದು, ಆರೋಪಿ ಸಂತೋಷ್ ಮಗುವನ್ನೆತ್ತಿಕೊಂಡು ಚಾಕು ತೋರಿಸಿ ಹೆದರಿಸಿದ್ದ ಎನ್ನಲಾಗಿದೆ. ಈ ಸಂದರ್ಭದಲ್ಲಿ ಹಾಲೇಶನು ಸುಧಾ ಅವರ ಕೊರಳಿನಲ್ಲಿದ್ದ ಬಂಗಾರದ ಮಾಂಗಲ್ಯ ಸರ, ಒಂದು ಬಂಗಾರದ ನೆಕ್ಲೇಸ್, ಮೊಬೈಲ್ ಹಾಗೂ ಬೈಕ್‌ನ ಕೀಯನ್ನು ಕಸಿದಿದ್ದರೆನ್ನಲಾಗಿದೆ. ಇನ್ನೋರ್ವ ಪ್ರಸನ್ನ ಬೈಕ್‌ನಲ್ಲಿದ್ದ ಶೇಖರ್ ಅವರನ್ನು ತಳ್ಳಿದ್ದ ಎನ್ನಲಾಗಿದೆ.

ಈ ಬಗ್ಗೆ ಸುಧಾ ಅವರು ನೀಡಿದ ದೂರಿನ ಮೇರೆಗೆ ಸಖರಾಯಪಟ್ಟಣ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಬಗ್ಗೆ ಕಡೂರು ಸರ್ಕಲ್ ವೃತ್ತ ನಿರೀಕ್ಷಕರಾದ ಬಾಲಚಂದ್ರಗೌಡವರು ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರಾದ ಭಾನುಮತಿ ಬಿ.ಸಿ. ಅವರು ಅಭಿಯೋಜನೆ ಸಾಕ್ಷಿದಾರರ ವಿಚಾರಣೆಯಿಂದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನವೆಂಬರ್ ೧೯ ರಂದು ಆಪಾದಿತರಾದ ಸಂತೋಷ್ ಮತ್ತು ಹಾಲೇಶ ಅವರಿಗೆ ೫ ವರ್ಷಗಳ ಕಠಿಣ ಸಜೆ ಹಾಗೂ ತಲಾ ೨೫ ಸಾವಿರ ರೂ. ದಂಡ ವಿಧಿಸಿದ್ದಾರೆ. ದಂಡ ತೆರಲು ತಪ್ಪಿದಲ್ಲಿ ಮತ್ತೆ ಆರು ತಿಂಗಳು ಸಾದಾ ಶಿಕ್ಷೆ ಅನುಭವಿಸುವಂತೆ ತೀರ್ಪಿನಲ್ಲಿ ತಿಳಿಸಿದ್ದಾರೆ. ಇನ್ನೋರ್ವ ಆರೋಪಿ ಪ್ರಸನ್ನ ಸಾವಿಗೀಡಾಗಿದ್ದಾನೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸಖರಾಯಪಟ್ಟಣ ಠಾಣೆಯ ಎ.ಎಸ್.ಐ. ದೇವೇಂದ್ರಕುಮಾರ್ ಅವರು ಸಾಕ್ಷಿದಾರರನ್ನು ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರುಪಡಿಸಿದ್ದರು. ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕರಾದ ಹೆಚ್.ಎಸ್.ಲೋಹಿತಾಶ್ವಚಾರ್ ಅವರು ವಾದ ಮಂಡಿಸಿದ್ದರು.

Extortion case: Two accused get 5 years rigorous imprisonment

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...