Home namma chikmagalur 1.30 ಕೋಟಿ ರೂ ವೆಚ್ಚದಲ್ಲಿ ಕಲ್ಯಾಣ ನಗರದ ಪಾರ್ಕ್ ಸಮಗ್ರ ಅಭಿವೃದ್ಧಿ
namma chikmagalurchikamagalurHomeLatest News

1.30 ಕೋಟಿ ರೂ ವೆಚ್ಚದಲ್ಲಿ ಕಲ್ಯಾಣ ನಗರದ ಪಾರ್ಕ್ ಸಮಗ್ರ ಅಭಿವೃದ್ಧಿ

Share
Share

ಚಿಕ್ಕಮಗಳೂರು: ಆರ್ಥಿಕವಾಗಿ ಅಭಿವೃದ್ಧಿಗೆ ಅನುದಾನ ಕ್ರೂಢೀಕರಿಸಬೇಕೆಂಬ ಉದ್ದೇಶದೊಂದಿಗೆ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರವನ್ನು ಆರ್ಥಿಕ ಸದೃಢಗೊಳಿಸಿದ್ದರ ಫಲವಾಗಿ ರಸ್ತೆ, ಪಾರ್ಕ್ ಅಭಿವೃದ್ಧಿಗೆ ಮುಂದಾಗಿರುವುದಾಗಿ ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

ಅವರು ಇಂದು ೧.೩೦ ಕೋಟಿ ರೂ. ವೆಚ್ಚದಲ್ಲಿ ಕಲ್ಯಾಣ ನಗರದ ಹಿರೇಮಗಳೂರು ವಸತಿ ಬಡಾವಣೆಯ ಗಣಪತಿ ದೇವಸ್ಥಾನದ ೬೦ ಅಡಿ ರಸ್ತೆಯ ಪಶ್ಚಿಮ ಭಾಗದ ಉದ್ಯಾನವನದ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದರು.

ಈ ಬಡಾವಣೆಯಲ್ಲಿ ಸ್ವಚ್ಚತೆ ದೃಷ್ಟಿಯಿಂದ ಮನೆ ಮನೆ ಕಸ ಸಂಗ್ರಹಣೆ ಮಾಡಬೇಕು, ಈ ಪಾರ್ಕ್ ಮತ್ತು ರಸ್ತೆಯನ್ನು ಸಮಗ್ರವಾಗಿ ಡಾಂಬರೀಕರಣಗೊಳಿಸಿ ಮುಂದಿನ ಮಾ.೩೧ ರೊಳಗೆ ಶಾಶ್ವತ ಗುಣಮಟ್ಟದ ಕಾಮಗಾರಿಯನ್ನು ಕೈಗೊಂಡು ಪೂರ್ಣಗೊಳಿಸಬೇಕೆಂದು ಗುತ್ತಿಗೆದಾರರು ಮತ್ತು ಇಂಜಿನಿಯರ್‌ಗೆ ಸೂಚನೆ ನೀಡಿದರು.

ಸಮಗ್ರ ಅಭಿವೃದ್ಧಿಪಡಿಸಬೇಕೆಂಬ ಗುರಿಯೊಂದಿಗೆ ಈಗಾಗಲೇ ಈ ಬಡಾವಣೆಯನ್ನು ನಗರಸಭೆಗೆ ಹಸ್ತಾಂತರಿಸಲಾಗಿದ್ದು, ಅದಕ್ಕೂ ಮುನ್ನ ಈ ವಾರ್ಡಿನ ಎಲ್ಲಾ ರಸ್ತೆಗಳನ್ನು ಆದ್ಯತೆ ಮೇರೆಗೆ ಡಾಂಬರೀಕರಣ ಮಾಡಬೇಕೆಂಬ ಬಗ್ಗೆ ನಗರಾಭಿವೃದ್ಧಿ ಪ್ರಾಧಿಕಾರದ ಅನುಮೋದನೆ ಪಡೆದು ಕಾಮಗಾರಿ ಆರಂಭಿಸಲಾಗಿದೆ ಎಂದರು.

ನಗರಸಭೆಯಲ್ಲಿ ಈಗಾಗಲೇ ೧೨೮ ಪಾರ್ಕ್‌ಗಳನ್ನು ಗುರ್ತಿಸಿ ಪುಸ್ತಕ ಸಿದ್ದಪಡಿಸಲಾಗಿದ್ದು, ಇದರಲ್ಲಿ ಒತ್ತುವರಿಯಾಗಿರುವ ಪಾರ್ಕ್‌ಗಳನ್ನು ಕೂಡಲೇ ತೆರವುಗೊಳಿಸಲು ಅಧಿಕಾರಿಗಳು ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೂಚಿಸಿದರು.

ನನ್ನನ್ನು ರಾಜಕೀಯವಾಗಿ ಸಸಿ ನೆಟ್ಟವರು ಹಿರೇಮಗಳೂರಿನ ಗ್ರಾಮಸ್ಥರು. ಅದಕ್ಕೆ ನೀರೆರೆದು ಪೋಷಿಸಿದವರು ಚಿಕ್ಕಕುರುಬರಹಳ್ಳಿ, ದೊಡ್ಡಕುರುಬರಹಳ್ಳಿ, ಸಿಡಿಎ ಲೇಔಟ್, ನರಿಗುಡ್ಡನಹಳ್ಳಿ, ಆಶ್ರಯ ಬಡಾವಣೆಯ ಜನ. ನಗರಸಭೆಗೆ ಆಯ್ಕೆಮಾಡಿದ ಪರಿಣಾಮ ಕಲ್ಯಾಣ ನಗರದ ರಸ್ತೆಗಳು ಡಾಂಬರೀಕರಣಗೊಳಿಸಲಾಗುತ್ತಿದೆ ಎಂದು ಸ್ಮರಿಸಿದರು.

ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಯಾಜ್ ಅಹಮದ್ ಮಾತನಾಡಿ, ಕಲ್ಯಾಣ ನಗರ ಬಸವೇಶ್ವರ ನಗರದಲ್ಲಿ ಇರುವ ಪಾರ್ಕ್‌ನ್ನು ಅತ್ಯಾಧುನಿಕ ಮಾದರಿಯಲ್ಲಿ ನಿರ್ಮಾಣ ಮಾಡಲು ಶಾಸಕ ಹೆಚ್.ಡಿ. ತಮ್ಮಯ್ಯನವರು ಮುಂದಾಗಿರುವುದು ಶ್ಲಾಘನೀಯ, ಈ ನಿಟ್ಟಿನಲ್ಲಿ ಟೆಂಡರ್ ಆಗಿ ಕಾಮಗಾರಿ ಆರಂಭಿಸಲು ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದರು.

ಕಂಚಿನ ಕಟ್ಟೆ ಕೆರೆ ಅಭಿವೃದ್ಧಿಗೆ ಮುಂದಿನ ದಿನಗಳಲ್ಲಿ ಗುದ್ದಲಿ ಪೂಜೆ ನೆರವೇರಿಸಿ ದೊಡ್ಡಮಟ್ಟದಲ್ಲಿ ಅಭಿವೃದ್ಧಿಪಡಿಸಲು ಗುರಿಹೊಂದಲಾಗಿದೆ ಎಂದು ಹೇಳಿದರು.

ನಗರಸಭಾಧ್ಯಕ್ಷೆ ಶೀಲಾದಿನೇಶ್ ಮಾತನಾಡಿ, ನಗರದ ೩೫ ವಾರ್ಡ್‌ಗಳಲ್ಲಿಯೂ ಇದೇ ಮಾದರಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರ ಪಾರ್ಕ್‌ಗಳನ್ನು ಅಭಿವೃದ್ಧಿಪಡಿಸಲು ಸಹಕರಿಸಬೇಕೆಂದು ವಿನಂತಿಸಿದರು.

ನಗರಸಭೆ ಇಂಜಿನಿಯರ್ ಲೋಕೇಶ್ ಮಾತನಾಡಿ, ಈ ಪಾರ್ಕ್‌ನ್ನು ಅತ್ಯಾಧುನಿಕ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ತೀರ್ಮಾನಿಸಲಾಗಿದ್ದು, ವಾಕ್ ಮಾಡುವವರಿಗೆ ಅನುಕೂಲವಾಗುವಂತೆ ಅಲ್ಲಲ್ಲಿ ಬೇಂಚ್ ನಿರ್ಮಾಣ, ಆಯ್ದ ಮರಗಳ ಬಳಿ ಸುತ್ತ ಕಟ್ಟೆ ಕಟ್ಟಿ ನಾಗರೀಕರು ಕುಳಿತುಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದರು.

ವಿದ್ಯುತ್ ದೀಪಗಳ ಅಳವಡಿಕೆ, ಮಕ್ಕಳ ಆಟಿಕೆ ವಸ್ತುಗಳು ಹಾನಿಯಾಗಿದ್ದು, ಹೊಸದಾಗಿ ನಿರ್ಮಿಸುತ್ತೇವೆ, ಜೊತೆಗೆ ಜಿಮ್ ವಸ್ತುಗಳು, ರೈನ್ ವಾಟರ್ ಹಾರ್ವೆಸ್ಟ್‌ಗೆ ಅವಕಾಶ ನೀಡಲಾಗಿದ್ದು, ಟ್ರೈನ್ ಟ್ಯ್ರಾಕ್ ಅಳವಡಿಸಲು ಗುರಿಹೊಂದಲಾಗಿದೆ ಎಂದರು.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷೆ ಲಲಿತಾರವಿನಾಯ್ಕ್, ಸದಸ್ಯರಾದ ಅರುಣ್ ಕುಮಾರ್, ವರಸಿದ್ದಿ ವೇಣುಗೋಪಾಲ್, ಎ.ಸಿ. ಕುಮಾರಗೌಡ, ಪರಮೇಶ್‌ರಾಜ್ ಅರಸ್, ಲಕ್ಷ್ಮಣ್, ಸಿಡಿಎ ನಾಮಿನಿ ಸದಸ್ಯರಾದ ರಾಘವೇಂದ್ರ, ಸುದೀಪ್, ಆಶಾಸುರೇಶ್, ಆಯುಕ್ತರಾದ ನಾಗರತ್ನ, ಪೌರಾಯುಕ್ತ ಬಿ.ಸಿ. ಬಸವರಾಜ್ ಮತ್ತಿತರರು ಉಪಸ್ಥಿತರಿದ್ದರು

Kalyana Nagar Park Comprehensive Development at a cost of Rs 1.30 crore

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...