Home namma chikmagalur ಸಿದ್ದರಾಮಯ್ಯನವರನ್ನು ಮುಂದುವರೆಸುವಂತೆ ದೇವಸ್ಥಾನದಲ್ಲಿ ಪ್ರಾರ್ಥನೆ
namma chikmagalurHomeLatest News

ಸಿದ್ದರಾಮಯ್ಯನವರನ್ನು ಮುಂದುವರೆಸುವಂತೆ ದೇವಸ್ಥಾನದಲ್ಲಿ ಪ್ರಾರ್ಥನೆ

Share
????????????????????????????????????
Share

ಚಿಕ್ಕಮಗಳೂರು:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಲ್ಲಿ ಮುಂದುವರೆಸುವಂತೆ ಸಿದ್ದರಾಮಯ್ಯ ಅಭಿಮಾನಿ ಬಳಗದಿಂದ ಗಣಪತಿ ದೇವಸ್ಥಾನದಲ್ಲಿ ತೆಂಗಿನಕಾಯಿ ಒಡೆಯುವ ಮೂಲಕ ಪ್ರಾರ್ಥನೆ ಸಲ್ಲಿಸಿದರು.

ಇಂದು ಬಳಗದ ಪ್ರಧಾನ ಕಾರ್ಯದರ್ಶಿ ಪುನೀತ್ ಕೆಂಪನಹಳ್ಳಿ ಮಾತನಾಡಿ, ಅಹಿಂದ ವರ್ಗದ ಬಲದಿಂದ ಕಾಂಗ್ರೆಸ್ ಪಕ್ಷ ಬಹುಮತ ಪಡೆದು ಅಧಿಕಾರ ನಡೆಸಲು ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿಯಾಗಿ ಆಯ್ಕೆಮಾಡಿ ಕಳೆದ ಎರಡೂವರೆ ವರ್ಷಗಳ ಕಾಲ ಜನಪರ ಆಡಳಿತ ನೀಡುತ್ತಿರುವ ಮುಖ್ಯಮಂತ್ರಿಗಳನ್ನು ಅಧಿಕಾರದಿಂದ ಇಳಿಸುವ ಹುನ್ನಾರ ನಡೆಸುತ್ತಿರುವುದನ್ನು ಖಂಡಿಸಿದರು.

ಜಿಲ್ಲೆಯ ಐದೂ ಶಾಸಕರ ಗೆಲುವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವರ್ಚಸ್ಸು, ಅಹಿಂದ ಸಂಘಟನೆಯ ಸತತ ಹೋರಾಟ ಕಾರಣವಾಗಿದ್ದು, ಈ ಸಂಬಂಧ ಶಾಸಕರುಗಳು ಸಿದ್ದು ಪರವಾಗಿ ಹೇಳಿಕೆ ನೀಡದಿರುವ ಬಗ್ಗೆ ವಿಷಾಧ ವ್ಯಕ್ತಪಡಿಸಿದರು.

ಅಹಿಂದ ವರ್ಗ ಜಾಗೃತವಾದರೆ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದಲ್ಲಿ ಮಾಜಿ ಶಾಸಕರನ್ನಾಗಿ ಮಾಡಿರುವ ಉದಾಹರಣೆಗಳಿವೆ. ಇದು ಸ್ಪಷ್ಟ ನಿದರ್ಶನವಾಗಿದ್ದು, ಐದು ವರ್ಷಗಳ ಪೂರ್ಣಾವಧಿಯನ್ನು ಸಿದ್ದರಾಮಯ್ಯನವರು ಪೂರ್ಣಗೊಳಿಸಬೇಕೆಂದು ದೇವರಲ್ಲಿ ಪ್ರಾರ್ಥಿಸಿದ್ದೇವೆ ಎಂದರು.

ಅಹಿಂದ ಕಾರ್ಯದರ್ಶಿ ಎನ್.ಡಿ. ಚಂದ್ರಪ್ಪ ಮಾತನಾಡಿ, ಮುಂದಿನ ಗ್ರಾ.ಪಂ, ತಾ.ಪಂ, ಜಿ.ಪಂ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ಪಟ್ಟಣ ಪಂಚಾಯಿತಿ ಮುಂತಾದ ಸ್ಥಳೀಯ ಸಂಸ್ಥೆಯ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯನವರ ರಾಜೀನಾಮೆ ಪಡೆದರೆ ಅಹಿಂದ ಮತಗಳು ವಿಭಜನೆಯಾಗುತ್ತವೆ ಎಂದು ಹೇಳಿದರು.

ಈಗಾಗಲೆ ವೀರಪ್ಪ ಮೊಯ್ಲಿ, ಎಸ್. ಬಂಗಾರಪ್ಪ ಈಗ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷ ದೇಶದಲ್ಲಿ ಸಂಕಷ್ಟದಲ್ಲಿದ್ದು, ಕರ್ನಾಟಕ ಸೇರಿ ಮೂರು ರಾಜ್ಯಗಳಲ್ಲಿ ಅಧಿಕಾರ ಹಿಡಿದಿದೆ. ಜನಪರ ಆಡಳಿತ ನೀಡುತ್ತಿರುವ ಸಿದ್ದರಾಮಯ್ಯನವರು ಅಧಿಕಾರದಲ್ಲಿ ಮುಂದುವರೆಸಬೇಕೆಂದು ಒತ್ತಾಯಿಸಿದರು.

ಪಂಚ ಗ್ಯಾರಂಟಿ ಯೋಜನೆಗಳ ಮೂಲಕ ಬಡವರ ಬದುಕಿನ ಬಗ್ಗೆ ಶ್ರಮಿಸುತ್ತಿರುವ ಸಿದ್ದರಾಮಯ್ಯನವರನ್ನು ಅಧಿಕಾರದಿಂದ ಇಳಿಸುವ ಕುರಿತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರು ಸೂಕ್ತ ಕಾಲದಲ್ಲಿ ಸರಿಯಾದ ನಿರ್ಧಾರ ಮಾಡುವ ಮೂಲಕ ಹಿಂದುಳಿದ ವರ್ಗಕ್ಕೆ ನ್ಯಾಯ ಒದಗಿಸಬೇಕೆಂದು ಮನವಿ ಮಾಡಿದರು.

ಕುರುಬ ಸಮುದಾಯ ಸುಳ್ಳು ಹೇಳುವುದಿಲ್ಲ, ನುಡಿದಂತೆ ನಡೆಯುವ ಸಮಾಜದ ಆದರ್ಶವಾಗಿದ್ದು, ಮಾತಿಗೆ ತಪ್ಪದ ಸಿದ್ದರಾಮಯ್ಯನವರು ವಚನ ಭ್ರಷ್ಟರಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ಈ ಸಂದರ್ಭದಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗದ ಮುಖಂಡರಾದ ಶಿವರಾಂ, ನಿಂಗೇಗೌಡ, ಧರ್ಮಪ್ಪ, ಡಿ.ಪಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

Prayers at the temple to continue Siddaramaiah

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...