Home namma chikmagalur chikamagalur ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಬಗ್ಗೆ ಸಚಿವರ ಭರವಸೆ
chikamagalurHomeLatest Newsnamma chikmagalur

ಸ್ಥಳದಲ್ಲೇ ಪರಿಹಾರ ಕಲ್ಪಿಸುವ ಬಗ್ಗೆ ಸಚಿವರ ಭರವಸೆ

Share
Share
ಚಿಕ್ಕಮಗಳೂರು: ರಾಜ್ಯದ ಎಲ್ಲ ಜಿಲ್ಲೆಗಳ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನಸಂಪರ್ಕ ಸಭೆಗಳನ್ನು ನಡೆಸಿ ಪರಿಹಾರ ಕಲ್ಪಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ ಪ್ರತೀ ಜಿಲ್ಲೆಯಲ್ಲಿ ಜನಸಂಪರ್ಕ ಸಭೆ ನಡೆಸಲಾಗುತ್ತಿದ್ದು, ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಲು ಕ್ರಮ ವಹಿಸಲಾಗುತ್ತಿದೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರು ತಿಳಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ವತಿಯಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ಆಯೋಜಿಸಿದ್ದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ರಾಜಧಾನಿಗೆ ಬರುವ ಬದಲು ಆಯಾ ಜಿಲ್ಲೆ ಹಾಗೂ ತಾಲ್ಲೂಕು
ಮಟ್ಟದಲ್ಲಿ ಜನರ ಸಮಸ್ಯೆಗಳನ್ನು ಆಲಿಸಿ ಸಮಸ್ಯೆಗಳ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು. ಜಿಲ್ಲೆಯಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದ ಸಮಸ್ಯೆಗಳು ಹೆಚ್ಚಾಗಿದ್ದು, ಅವೆಲ್ಲಕ್ಕೂ ಅಧಿಕಾರಿಗಳ ಮೂಲಕ ಅಗತ್ಯ ಕ್ರಮ ಕೈಗೊಂಡು ಪರಿಹಾರ ಒದಗಿಸಲಾಗುವುದು ಎಂದರು.
ಶಾಸಕ ಹೆಚ್.ಡಿ.ತಮ್ಮಯ್ಯ ಮಾತನಾಡಿ, ತಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಜನರ ಬಳಿಗೆ ಸರ್ಕಾರವೇ ತೆರಳಿ ಜನರ ಸಮಸ್ಯೆಗಳನ್ನು ಅರಿತು ಬಗೆಹರಿಸಬೇಕು ಎಂಬ ಪರಿಕಲ್ಪನೆಯಲ್ಲಿ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ನಿರ್ದೇಶನದಂತೆ ಈ ಸಭೆ ನಡೆಸಲಾಗುತ್ತಿದೆ. ನಮ್ಮ ಜಿಲ್ಲೆಯಲ್ಲಿ ಈಗಾಗಲೇ ೪ ರಿಂದ ೬ ಬಾರಿ ಜನಸಂಪರ್ಕ ಸಭೆಗಳನ್ನು ಯಶಸ್ವಿಯಾಗಿ ನಡೆಸಿರುವ ಕೀರ್ತಿ ನಮ್ಮ ಉಸ್ತುವಾರಿ ಸಚಿವರಿಗೆ ಸಲ್ಲುತ್ತದೆ ಎಂದರು.
ಪಂಚ ಗ್ಯಾರಂಟಿ ಯೋಜನೆಗಳನ್ನು ರಾಜ್ಯದಲ್ಲಿ ಸಮರ್ಪಕವಾಗಿ ಫಲಾನುಭವಿಗಳಿಗೆ ತಲುಪಿಸಲಾಗಿದ್ದು, ರಾಜ್ಯದಲ್ಲೇ ನಮ್ಮ ಜಿಲ್ಲೆ ಪ್ರಥಮ ಸ್ಥಾನದಲ್ಲಿದೆ. ಸುಮಾರು ೨,೦೧೨ ಕೋಟಿ ರೂ. ಈ ಐದು ಗ್ಯಾರಂಟಿ ಯೋಜನೆಗಳಿಗೆ ಈ ಜಿಲ್ಲೆಯಲ್ಲಿ ವಿನಿಯೋಗವಾಗುತ್ತಿದೆ ಎಂದು ಇದೇ ಸಂದರ್ಭದಲ್ಲಿ ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಪ್ರಾಸ್ತಾವಿಕ ಮಾತನಾಡಿ, ಕಳೆದ ಎರಡೂವರೆ ವರ್ಷದಲ್ಲಿ ಜನತಾ ದರ್ಶನ ಕಾರ್ಯಕ್ರಮಗಳನ್ನು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ನಡೆಸಲಾಗಿದೆ. ಅದರಲ್ಲಿ ಒಟ್ಟು ನಾವು ೮೨೯ ಅರ್ಜಿಗಳನ್ನು ಸ್ವೀಕರಿಸಿದ್ದೇವೆ. ಅವುಗಳಲ್ಲಿ ೪೯೬ ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಆ ಪೈಕಿ ಶೇ.೨೭ ರಷ್ಟು ಅರ್ಜಿಗಳನ್ನು ಸಕಾರಾತ್ಮಕವಾಗಿ ಇತ್ಯರ್ಥಪಡಿಸಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿಗಳ ಜನತಾದರ್ಶನ ಕಾರ್ಯಕ್ರಮದಲ್ಲೂ ಈ ಜಿಲ್ಲೆಯ ೪೯ ಅರ್ಜಿಗಳು ಸ್ವೀಕೃತಿಯಾಗಿವೆ. ಉಳಿದಂತೆ ಶಾಸಕರುಗಳು ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಜನತಾ ದರ್ಶನ ಮತ್ತು ಸಮ್ಮೇಳನಗಳನ್ನು ನಡೆಸಿದ್ದಾರೆ. ಅಲ್ಲದೆ, ಜಿಲ್ಲಾ ಪಂಚಾಯಿತಿಯಿಂದ ಗ್ರಾ.ಪಂ. ಮಟ್ಟದಲ್ಲಿ ಸಾರ್ವಜನಿಕ ಅಹವಾಲು ಸ್ವೀಕಾರಕ್ಕೆ ಸಂಬಂಧಿಸಿದಂತೆ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಕಳೆದ ಒಂದು ವರ್ಷದಲ್ಲಿ ನಮ್ಮ ಜಿಲ್ಲೆಯಲ್ಲಿ ೮,೯೨,೨೯೦ ಅರ್ಜಿಗಳು ಸ್ವೀಕೃತಿಯಾಗಿವೆ. ಸುಮಾರು ಶೇ.೧೦ ರಿಂದ ೧೨ ರಷ್ಟು ಅರ್ಜಿಗಳನ್ನು ಇತ್ಯರ್ಥಪಡಿಸಲು ಸಾಧ್ಯವಾಗಿಲ್ಲ. ಇದಕ್ಕೆ ತಂತ್ರಾಂಶದಲ್ಲಿನ ಸಮಸ್ಯೆಗಳು ಕಾರಣವಾಗಿದೆ. ಅದನ್ನು ಸರಿಪಡಿಸಲು ಈಗ ಕ್ರಮ ಕೈಗೊಳ್ಳಲಾಗುತ್ತಿದೆ. ನಮ್ಮಲ್ಲಿ ೯೪ ಸಾವಿರ ಪೌತಿ ಖಾತೆಗಳಿದ್ದವು. ಅವುಗಳಲ್ಲಿ ಇದುವರೆಗೆ ೨೨ ಸಾವಿರ ಅರ್ಜಿಗಳನ್ನು ವಿಲೇವಾರಿ ಮಾಡಲಾಗುತ್ತಿದೆ. ಪ್ರಾದೇಶಿಕ ಸಾರಿಗೆ ಇಲಾಖೆ, ಸರ್ವೇ ಇಲಾಖೆಗೆ ಸಂಬಂಧಿಸಿದಂತೆ ಹಲವು ಸಮಸ್ಯೆಗಳ ಇತ್ಯರ್ಥಕ್ಕೆ ಕೈಗೊಂಡಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು.
ಇದಲ್ಲದೆ ತಂತ್ರಾಂಶಗಳನ್ನು ಸದ್ಭಳಕೆ ಮಾಡಿಕೊಂಡು ಪ್ರತಿಯೊಂದು ಅರ್ಜಿಯನ್ನು ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಇವುಗಳಲ್ಲಿ ಶೇ.೫೮ ರಷ್ಟು ಅರ್ಜಿಗಳು ಕಂದಾಯ ಇಲಾಖೆಗೆ ಸಂಬಂಧಿಸಿದ್ದಾಗಿವೆ. ಅವುಗಳಲ್ಲಿ ಪೋಡಿ ಪ್ರಕರಣಗಳು, ದಾರಿಗೆ ಸಂಬಂಧಿಸಿದ ಅರ್ಜಿಗಳು, ಆರ್‌ಟಿಸಿ ಸರಿಪಡಿಸುವಿಕೆ ಪ್ರಕರಣಗಳು ಪ್ರಮುಖವಾದವು ಎಂದರು.
ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಟಿ.ಡಿ.ರಾಜೇಗೌಡ, ಶಾಸಕ ಜಿ.ಹೆಚ್.ಶ್ರೀನಿವಾಸ್, ಮೆಸ್ಕಾಂ ಅಧ್ಯಕ್ಷರು ಹಾಗೂ ವಿಧಾನ ಪರಿಷತ್ ಸದಸ್ಯರೂ ಆದ ಹರೀಶ್ ಕುಮಾರ್, ಭದ್ರಾ ಕಾಡಾ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್, ಕ.ರಾ.ಕೃಷಿ ಉತ್ಪನ್ನ ಸಂಸ್ಕರಣೆ ಮತ್ತು ರಫ್ತು ನಿಗಮದ ಅಧ್ಯಕ್ಷರಾದ ಬಿ.ಹೆಚ್.ಹರೀಶ್, ಜಿ.ಪಂ. ಕಾರ್ಯ ನಿರ್ವಹಣಾಧಿಕಾರಿ ಹೆಚ್.ಎಸ್.ಕೀರ್ತನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕರಡ್ಡಿ, ಜಿಲ್ಲಾಮಟ್ಟ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.
Minister promises to provide relief on the spot
Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...