Home namma chikmagalur chikamagalur ಬಿಸಗ್ನಿ ಮಠ ಸಮೀಪದ ಮದ್ಯದಂಗಡಿ ತೆರವಿಗೆ ಸಚಿವರ ಸೂಚನೆ
chikamagalurHomeLatest Newsnamma chikmagalur

ಬಿಸಗ್ನಿ ಮಠ ಸಮೀಪದ ಮದ್ಯದಂಗಡಿ ತೆರವಿಗೆ ಸಚಿವರ ಸೂಚನೆ

Share
Share

ಚಿಕ್ಕಮಗಳೂರು: ಮಾರ್ಗದ ಅತ್ತಿಗುಂಡಿ ಬಿಸಗ್ನಿ ಮಠ ಸಮೀಪ ಮದ ಮಾರಾಟದ ಅಂಗಡಿಯನ್ನು ಸಂಬಂಧಪಟ್ಟ ಅಧಿಕಾರಿಗಳು ಸ್ಥಳ ಪರಿಶೀಲಿಸಿ ಅದನ್ನು ಮುಚ್ಚಲು ಕ್ರಮ ಕೈಗೊಳ್ಳುವಂತೆ ಎಂದು ರಾಜ್ಯ ಇಂಧನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ನಡೆದ ಜನ ಸಂಪರ್ಕ ಸಭೆಯಲ್ಲಿ ಗ್ರಾಮಸ್ಥರ ಪರವಾಗಿ ಸುರೇಂದ್ರ ಅವರು ಮಾತನಾಡಿ, ಮಠವಿರುವ ಸ್ಥಳದಲ್ಲಿ ಆಕ್ರಮವಾಗಿ ಮದ ಮಾರಾಟ ಮಾಡುತ್ತಿರುವುದರಿಂದ ಮಠದಲ್ಲಿ ಪೂಜೆ ಮಾಡಲು ಅಡೆತಡೆಯಾಗುತ್ತಿದೆ. ಅದನ್ನು ತೆರವುಗೊಳಿಸುವಂತೆ ಸೂಚಿಸಿದರೂ ಅಧಿಕಾರಿಗಳು ಅದರ ಬಗ್ಗೆ ಗಮನಹರಿಸುತ್ತಿಲ್ಲ ಎಂದು ದೂರಿದರು.

ಅಕ್ರಮವಾಗಿ ಈ ಮದ್ಯದಂಗಡಿಯನ್ನು ತೆರೆದಿದ್ದರೆ ಕೂಡಲೇ ಮುಚ್ಚಿಸುವಂತೆ, ಒಂದು ವೇಳೆ ಪರವಾನಗಿ ಪಡೆದಿದ್ದರೂ ಪರವಾನಗಿಯನ್ನು ರದ್ದುಪಡಿಸುವಂತೆ ನಿರ್ದೇಶನ ನೀಡಿದರು. ಅಲ್ಲದೆ, ತಮ್ಮ ಊರಿಗೆ ಸಮಯಕ್ಕೆ ಸರಿಯಾಗಿ ಬಸ್ಸಿನ ವ್ಯವಸ್ಥೆ ಇಲ್ಲದೇ ಇರುವುದರಿಂದ ಶಾಲಾ ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಓಡಾಡಲು ಸಮಸ್ಯೆಯಾಗುತ್ತಿದೆ ಎಂದು ನಿವೇದಿಸಿಕೊಂಡರು. ಇದಕ್ಕೆ ಸ್ಪಂದಿಸಿದ ಸಚಿವರು, ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಗೌಡನಹಳ್ಳಿ ಗ್ರಾಮದ ಲೋಕೇಶ್ ಎಂಬುವರು ಕಳೆದು ಐದು ವರ್ಷಗಳಿಂದಲೂ ತಮ್ಮ ಊರಿಗೆ ನ್ಯಾಯಬೆಲೆ ಅಂಗಡಿ ಇಲ್ಲದೆ ಇರುವುದರಿಂದ ಪಡಿತರ ಪಡೆಯಲು ಪಕ್ಕದ ಊರಿನ ನ್ಯಾಯಬೆಲೆ ಅಂಗಡಿಗೆ ತೆರಳಬೇಕಾಗಿದ್ದು, ಪಡಿತರ ಪಡೆಯಲು ಹೋದ ಸಂದರ್ಭದಲ್ಲಿ ನ್ಯಾಯಬೆಲೆ ಅಂಗಡಿ ತೆರೆದಿರುವುದಿಲ್ಲ ಇಲ್ಲವೆ ಸರ್ವರ್ ಸಮಸ್ಯೆಯಿಂದ ತೊಂದರೆಯಾಗುತ್ತಿದೆ. ನಮ್ಮ ಊರಿಗೆ ನೂತನವಾಗಿ ನ್ಯಾಯಬೆಲೆ ಅಂಗಡಿಯನ್ನು ತೆರೆಯಲು ಅವಕಾಶ ಮಾಡಿಕೊಡಬೇಕೆಂದು ಕೋರಿದರು.

ಜಿಲ್ಲಾಧಿಕಾರಿಗಳು ಮಾತನಾಡಿ, ಇದುವರೆಗೂ ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಯಾವುದೇ ಅವಕಾಶವಿರಲಿಲ್ಲ ಹಾಗೂ ಉಪಕೇಂದ್ರ ನೀಡಲು ಕೆಲವೊಂದು ನಿರ್ಬಂಧವಿರುವುದರಿಂದ ತಮ್ಮ ವ್ಯಾಪ್ತಿಯಲ್ಲಿ ಕಾರ್ಡ್‌ದಾರರ ಸಂಖ್ಯೆಯನ್ನು ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಶೀಲನೆ ಮಾಡಿಸಲಾಗುತ್ತದೆ. ಅನಂತರ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.

ಅದೇ ರೀತಿ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರ ಸಮ್ಮುಖದಲ್ಲಿ ಸಮಸ್ಯೆಗಳ ಬಗ್ಗೆ ಅಲವತ್ತುಕೊಂಡರು. ಒಟ್ಟು ೧೨೩ ದೂರು ಅರ್ಜಿಗಳು ಸ್ವೀಕೃತಗೊಂಡಿದ್ದು, ಇವುಗಳಲ್ಲಿ ೬೦ ಅರ್ಜಿದಾರರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಸಚಿವರ ಮುಂದೆ ನಿವೇದಿಸಿಕೊಂಡರು. ಸಚಿವರು ಅವರ ಸಮಸ್ಯೆಗಳಿಗೆ ಸ್ಪಂದಿಸಿ ಸಂಬಂಧಿಸಿದ ಅಧಿಕಾರಿಗಳು ತುರ್ತು ಕ್ರಮ ವಹಿಸಿ ಎಂದು ಸೂಚಿಸಿದರು.

Minister orders vacating liquor shop near Bisagni Mutt

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...