Home namma chikmagalur chikamagalur ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ಗೋಹತ್ಯೆ ನಿಷೇಧ ಕಾಯ್ದೆಗೆ ತಿದ್ದುಪಡಿ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಪಿಸಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಆಜಾದ್ ಪಾರ್ಕ್‌ನಲ್ಲಿ ಜಮಾಯಿಸಿದ ಕಾರ್ಯಕರ್ತರು, ಭಿತ್ತಿಪತ್ರಗಳನ್ನು ಹಿಡಿದು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಬಳಿಕ ಮಾತನಾಡಿದ ವಿಶ್ವ ಹಿಂದೂ ಪರಿಷತ್ ಜಿಲ್ಲಾ ಘಟಕದ ಕಾರ್ಯದರ್ಶಿ ರಂಗನಾಥ್, ‘ಮುಖ್ಯಮಂತ್ರಿಯಾಗಿ ಎರಡು ಬಾರಿ ಅಧಿಕಾರ ನಡೆಸಿದ ಸಿದ್ದರಾಮಯ್ಯ ಅವರು ಹಿಂದುತ್ವ ಮತ್ತು ಹಿಂದೂ ಸಮಾಜಕ್ಕಾಗಿ ಏನನ್ನೂ ಮಾಡಲಿಲ್ಲ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅವರ ಅವಧಿಯಲ್ಲಿ ಜಾರಿಗೆ ತಂದಿರುವ ಎಲ್ಲಾ ಯೋಜನೆಗಳು ಮುಸ್ಲಿಮರ ಪರವಾಗಿವೆ. ಶಾದಿಭಾಗ್ಯ ಸೇರಿ ಎಲ್ಲಾ ಭಾಗ್ಯ ಯೋಜನೆಗಳು ಅವರಿಗಾಗಿಯೇ ಜಾರಿಗೆ ತರಲಾಗಿದೆ ಎಂದು ಆರೋಪಿಸಿದರು.

ಅಂಬೇಡ್ಕರ್ ರಚಿಸಿರುವ ಮೂಲ ಸಂವಿಧಾನವನ್ನು ರಕ್ಷಣೆ ಮಾಡುತ್ತಿಲ್ಲ. ಬದಲಾಗಿ ಕಾಂಗ್ರೆಸ್ ತಿದ್ದುಪಡಿ ಮಾಡಿರುವ ಜಾತ್ಯತೀತ ಲೇಪನದ ಸಂವಿಧಾನ ರಕ್ಷಣೆ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಗೋಹತ್ಯೆ ನಿಷೇಧದ ವಿರುದ್ಧವಾಗಿ ಮತ್ತು ಗೋವುಗಳನ್ನು ಹತ್ಯೆ ಮಾಡುವವರ ಪರವಾದ ಕಾನೂನು ತಿದ್ದುಪಡಿ ತರಬಾರದು. ಸದನದಲ್ಲಿ ಈ ಮಸೂದೆ ಮಂಡಿಸಬಾರದು ಎಂದು ಒತ್ತಾಯಿಸಿದರು.

ಮುಖಂಡ ಶ್ಯಾಮ್ ವಿ.ಗೌಡ ಮಾತನಾಡಿ, ‘ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ತರಲಾಗಿದೆ. ಗೋವುಗಳನ್ನು ಸಾಗಣೆ ಮಾಡುವಾಗ ಕೆಲ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ಕಾಯ್ದೆಯಲ್ಲಿ ತಿಳಿಸಲಾಗಿದೆ. ಅವುಗಳನ್ನು ಬದಲಾವಣೆ ಮಾಡಿದರೆ ಗೋಹತ್ಯೆ ಮತ್ತೆ ನಿರಾತಂಕವಾಗಿ ನಡೆಯಲಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಿರುವ ಕಾಯ್ದೆ ಪ್ರಕಾರ ಗೋವುಗಳನ್ನು ಎಲ್ಲಿಂದ ತರಲಾಗುತ್ತಿದೆ, ಸಾಗಣೆ ಮಾಡುವ ವಾಹನಗಳ ದಾಖಲೆ ತೋರಿಸುವುದು ಕಡ್ಡಾಯ. ಈ ನಿಯಮಗಳನ್ನು ಸಡಿಲಗೊಳಿಸಿ ಕಾಯ್ದೆಗೆ ತಿದ್ದುಪಡಿ ತಂದರೆ ಗೋವುಗಳ ಅಕ್ರಮ ಸಾಗಣೆ ಮತ್ತು ಹತ್ಯೆ ತಡೆಯಲು ಆಗುವುದಿಲ್ಲ. ಗೋಹತ್ಯೆ ಮಾಡುವ ಕಟುಕರಿಗೆ ಸಹಾಯ ಮಾಡಲು ಸರ್ಕಾರ ಉಮೇದಿನಲ್ಲಿದೆ ಎಂದು ಆರೋಪಿಸಿದರು.

ಬಿಜೆಪಿ ಜಿಲ್ಲಾ ಘಟಕದ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ, ನಗರ ಘಟಕದ ಅಧ್ಯಕ್ಷ ಪುಷ್ಪರಾಜ್, ಮಹಿಳಾ ಮೋರ್ಚಾ ಅಧ್ಯಕ್ಷೆ ಜಸಂತಾ ಅನಿಲ್‌ಕುಮಾರ್, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಸಂತೋಷ್‌ ಕೋಟ್ಯಾನ್ ಭಾಗವಹಿಸಿದ್ದರು.

Protest against amendment to cow slaughter ban act

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...