Home namma chikmagalur chikamagalur ಡಿ. 20ರಿಂದ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಶತಮಾನೋತ್ಸವ
chikamagalurHomeLatest Newsnamma chikmagalur

ಡಿ. 20ರಿಂದ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಶತಮಾನೋತ್ಸವ

Share
Share

ಚಿಕ್ಕಮಗಳೂರು: ದೇಶದ ಏಕೈಕ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಇದೀಗ ಶತಮಾನೋತ್ಸವದ ಹೊಸ್ತಿಲಿನಲ್ಲಿದೆ. ೧೯೨೫ರಲ್ಲಿ ಬಾಳೆಹೊನ್ನೂರು ಸಮೀಪದ ಸೀಗೋಡಿನಲ್ಲಿ ಆರಂಭಗೊಂಡಿರುವ ಸಂಸ್ಥೆ ನೂರು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಡಿ. ೨೦ರಿಂದ ೨೨ರವರೆಗೆ ಶತಮಾನೋತ್ಸವ ಕಾರ್ಯಕ್ರಮವನ್ನು ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಗಿದೆ ಎಂದು ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ ತಿಳಿಸಿದರು.

ನಗರದ ಕಾಫಿ ಮಂಡಳಿಯ ಮ್ಯೂಸಿಯಂನ ಸಭಾಂಗಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ೭ ಲಕ್ಷ ಟನ್‌ಗಳ ಅದ್ಭುತ ಭವಿಷ್ಯಕ್ಕೆ ೭ ಚಿನ್ನದ ಬೀಜಗಳು ಎಂಬ ಧ್ಯೇಯದೊಂದಿಗೆ ಶತಮಾನೋತ್ಸವ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಪ್ರಸ್ತುತ ಭಾರತದಲ್ಲಿ ೩.೬೭ ಲಕ್ಷ ಟನ್ ಕಾಫಿ ಉತ್ಪಾದನೆ ಮಾಡಲಾಗುತ್ತಿದೆ. ಆದರೆ ನಮ್ಮ ಗುರಿ ಇರುವುದು ವಾರ್ಷಿಕವಾಗಿ ಭಾರತದಲ್ಲಿ ಕನಿಷ್ಟ ೭ ಲಕ್ಷ ಟನ್ ಕಾಫಿ ಉತ್ಪಾದನೆ ಮಾಡಬೇಕು ಎಂಬುದಾಗಿದೆ. ಇದೇ ಹಿನ್ನೆಲೆಯಲ್ಲಿ ೭ ಲಕ್ಷ ಟನ್‌ಗಳ ಅದ್ಭುತ ಭವಿಷ್ಯಕ್ಕೆ ೭ ಚಿನ್ನದ ಬೀಜಗಳು ಎಂಬ ಧ್ಯೇಯ ಅಳವಡಿಸಿಕೊಳ್ಳಲಾಗಿದೆ. ಶತಮಾನೋತ್ಸವ ಕಾರ್ಯಕ್ರಮದಲ್ಲಿಯೂ ಇದೇ ವಿಷಯವಾಗಿ ವಿವಿಧ ಗೋಷ್ಠಿಯಗಳಲ್ಲಿ ಚರ್ಚೆ ನಡೆಯಲಿದೆ ಎಂದು ವಿವರಿಸಿದರು.

ಸಿಸಿಆರ್‌ಐ ಶತಮಾನೋತ್ಸವ ಕಾರ್ಯಕ್ರಮದ ವೇಳೆ ಎರಡು ಪ್ರಮುಖ ಕಾಫಿ ತಳಿಗಳನ್ನು ಪರಿಚಯಿಸಲಾಗುತ್ತದೆ. ಎರಡೂ ಅರೇಬಿಕಾ ತಳಿಗಳಾಗಿದ್ದು, ಇದರಲ್ಲಿ ಒಂದು ಬೋರರ್ ನಿರೋಧಕವಾಗಿದೆ. ಇದಲ್ಲದೆ ಕಾಫಿ ಇಳುವರಿ ಹೆಚ್ಚಿಸುವ ಕುರಿತು ಸಂಶೋಧನೆ ನಡೆದಿವೆ. ಈ ಬಗ್ಗೆಯೂ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಚರ್ಚೆ ನಡೆಯಲಿದೆ ಎಂದು ಮಾಹಿತಿ ನೀಡಿದರು.

ಬಾಳೆಹೊನ್ನೂರಿನ ಸಮೀಪ ಇರುವ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ ಆವರಣದಲ್ಲಿ ನಡೆಯಲಿರುವ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕನಿಷ್ಟ ೫೦ ಸಾವಿರ ಜನ ಭಾಗವಹಿಸುವ ನಿರೀಕ್ಷೆಯಿದೆ. ಕರ್ನಾಟಕ ಮಾತ್ರವಲ್ಲದೆ ಆಂಧ್ರ ಪ್ರದೇಶ, ಕೇರಳ, ತಮಿಳುನಾಡು ಸೇರಿದಂತೆ ಕಾಫಿ ಬೆಳೆಯುವ ಪ್ರದೇಶಗಳ ಕಾಫಿ ಬೆಳೆಗಾರರು ಭಾಗವಹಿಸಲಿದ್ದಾರೆ. ಇಲ್ಲಿ ಹಲವು ಗೋಷ್ಠಿಗಳು ನಡೆಯಲಿದ್ದು, ಸ್ಥಳಾವಕಾಶದ ಕೊರತೆ ಹಿನ್ನೆಲೆಯಲ್ಲಿ ನಿಗದಿತ ಸಂಖ್ಯೆಯ ಬೆಳೆಗಾರರಷ್ಟೇ ಗೋಷ್ಠಿಯಲ್ಲಿ ಭಾಗಿಯಾಗಲಿದ್ದಾರೆ. ಉಳಿದಂತೆ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕನಿಷ್ಟ ೫೦ ಸಾವಿರ ಜನರು ಭಾಗವಹಿಸುವ ನಿರೀಕ್ಷೆಯಿದೆ. ಕಾಫಿ ಬೆಳೆಗಾರರು ತಮ್ಮ ಕುಟುಂಬದೊAದಿಗೆ ಆಗಮಿಸಿದಲ್ಲಿ ಕಾರ್ಯಕ್ರಮ ಇನ್ನಷ್ಟು ಯಶಸ್ವಿಯಾಗಲಿದೆ ಎಂದರು.

ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗುವಂತೆ ಕೇಂದ್ರ ವಾಣಿಜ್ಯ ಸಚಿವರಿಗೆ ಹಾಗೂ ಪ್ರಹ್ಲಾದ್ ಜೋಷಿ ಅವರಿಗೆ ಮನವಿ ಮಾಡಿದ್ದೇವೆ. ಇದಲ್ಲದೆ ರಾಜ್ಯದ ಇಂಧನ ಸಚಿವರು ಹಾಗೂ ಕಾಫಿ ಬೆಳೆಗಾರರೂ ಆಗಿರುವ ಕೆ.ಜೆ.ಜಾರ್ಜ್ ಅವರು ಶತಮಾನೋತ್ಸವದಲ್ಲಿ ಭಾಗಿಯಾಗಲಿದ್ದಾರೆ. ಇದಲ್ಲದೆ ರಾಜ್ಯದ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರಿಗೂ ಆಹ್ವಾನ ನೀಡಿದ್ದೇವೆ. ಅರಣ್ಯ ಸಚಿವ ಸಮ್ಮುಖದಲ್ಲೇ ವನ್ಯಜೀವಿ ಹಾಗೂ ಮಾನವ ಸಂಘರ್ಷದ ಗೋಷ್ಠಿ ನಡೆಸುವ ಇರಾದೆಯಿದೆ ಎಂದು ವಿವರಿಸಿದರು.

ಭಾರತೀಯ ಕಾಫಿ ಮಂಡಳಿ ಸಿಇಒ ಕೂರ್ಮ ರಾವ್ ಮಾತನಾಡಿ, ಲ್ಯಾಬ್‌ನಿಂದ ಲ್ಯಾಂಡ್‌ವರೆಗೆ ಕಾಫಿ ಸಂಶೋಧನಾ ಕೇಂದ್ರದ ಕೆಲಸ ಹೇಗೆ ನಡೆದಿದೆ. ಹಾಗೂ ಲ್ಯಾಂಡ್‌ನಿAದ ಕಪ್‌ವರೆಗೆ ಕಾಫಿ ಹೇಗೆ ತಲುಪುತ್ತದೆ ಎಂಬುದನ್ನು ಈ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ತಲುಪಿಸುವ ಕೆಲಸ ಮಾಡಲಿದ್ದೇವೆ ಎಂದರು.

ಇದುವರೆಗೆ ಕಾಫಿ ಸಂಶೋಧನಾ ಕೇಂದ್ರ ೧೬ ತಳಿಗಳನ್ನು ಅಭಿವೃದ್ಧಿಪಡಿಸಿದೆ. ಅದರಲ್ಲಿ ೧೩ ಅರೇಬಿಕಾ ಆಗಿದ್ದರೆ, ಇನ್ನು ಮೂರು ರೊಬೋಸ್ಟಾ ಆಗಿವೆ. ಅರೆಬಿಕಾದಲ್ಲಿ ಈಗಾಗಲೇ ಚಂದ್ರಗಿರಿ ಎಲ್ಲರ ಮನೆ ಮಾತಾಗಿದೆ. ಆದರೆ ಶತಮಾನೋತ್ಸವದ ಸಂದರ್ಭದಲ್ಲಿ ಚಂದ್ರಗಿರಿಗಿAತಲೂ ಶೇ. ೧೦ರಷ್ಟು ಹೆಚ್ಚು ಇಳುವರಿ ನೀಡುವ ತಳಿ ಪರಿಚಯಿಸಲಿz್ದÉÃವೆ. ಶತಮಾನೋತ್ಸವ ಕಾರ್ಯಕ್ರಮದಲ್ಲಿ ಕನಿಷ್ಟ ೪೦ ಸ್ಟಾಲ್ ತೆರೆಯುತ್ತಿದ್ದು, ಇಲ್ಲಿ ಕಾಫಿಗೆ ಸಂಬAಧಿಸಿದ ಪ್ರತಿಯೊಂದು ಮಾಹಿತಿ ನೀಡುವ ಕೆಲಸ ಮಾಡುತ್ತೇವೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಕಾಫಿ ಸಂಶೋಧನ ಕೇಂದ್ರದ ನಿರ್ದೇಶಕ ಸೆಂಥಿಲ್ ಮತ್ತಿತರರಿದ್ದರು.

Central Coffee Research Institute Centenary Celebration from December 20

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...