Home namma chikmagalur chikamagalur ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರ ನಿರ್ಧಾರ
chikamagalurHomeLatest Newsnamma chikmagalur

ಜಿಲ್ಲಾ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಸರ್ಕಾರ ನಿರ್ಧಾರ

Share
Share
ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು 2026ರ ಏಪ್ರಿಲ್‌ ಒಳಗೆ ಪೂರ್ಣಗೊಳಿಸಲು ಗುರುವಾರ ನಡೆದ ಸಂಪುಟ ಸಭೆ ನಿರ್ಧರಿಸಿದೆ.

ರಾಜ್ಯದ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 2016ರ ಏಪ್ರಿಲ್‌ನಲ್ಲಿ ಚುನಾವಣೆ ನಡೆದಿತ್ತು. ಅಂದು ಆಯ್ಕೆಯಾಗಿದ್ದ ಸದಸ್ಯರ ಅವಧಿ 2021ರ ಏಪ್ರಿಲ್ 27ರಂದು ಮುಕ್ತಾಯವಾಗಿತ್ತು. ಅವಧಿ ಪೂರ್ಣಗೊಂಡ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ ತಾಂತ್ರಿಕ ಕಾರಣಗಳಿಂದ ಚುನಾವಣೆ ನಡೆಸುವುದು ಸುಮಾರು ಐದು ವರ್ಷ ವಿಳಂಬವಾಗಿದ್ದು, 2026ರ ಬೇಸಿಗೆ ಅವಧಿ ಮುಗಿಯುವ ಮೊದಲು ಚುನಾವಣೆ ನಡೆಸಲು ಅನುಕೂಲವಾಗುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಅಗತ್ಯ ಸಹಕಾರ ನೀಡಲು ತೀರ್ಮಾನಿಸಲಾಗಿದೆ.

ಕೆಲ ವರ್ಷಗಳ ಹಿಂದೆಯೇ ಚುನಾವಣೆ ನಡೆಸಲು ಸಿದ್ಧತೆ ಆರಂಭಿಸಿದ್ದ ಚುನಾವಣಾ ಆಯೋಗವು ಕ್ಷೇತ್ರ ಪುನರ್‌ವಿಂಗಡಣೆ ಮಾಡಿ ಮತದಾರರ ಅಂತಿಮ ಪಟ್ಟಿ ಹಾಗೂ ಮೀಸಲಾತಿ ಕರಡು ಪ್ರಕಟಿಸಿತ್ತು. ಆದರೆ, ಹಿಂದಿನ ಬಿಜೆಪಿ ನೇತೃತ್ವದ ಸರ್ಕಾರ ಕ್ಷೇತ್ರ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ಅಧಿಕಾರವನ್ನು ಚುನಾವಣಾ ಆಯೋಗದಿಂದ ಹಿಂಪಡೆದಿತ್ತು. ಕರ್ನಾಟಕ ಪಂಚಾಯತ್ ರಾಜ್ ಮತ್ತು ಗ್ರಾಮ ಸ್ವರಾಜ್ ಕಾಯ್ದೆಗೆ ತಿದ್ದುಪಡಿ ತಂದು ‘ಕರ್ನಾಟಕ ಪಂಚಾಯತ್‌ ರಾಜ್ ಸೀಮಾ ನಿರ್ಣಯ ಆಯೋಗ’ಕ್ಕೆ ನೀಡಿತ್ತು.

ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರ ಪುನರ್ ವಿಂಗಡಣೆ ಮತ್ತು ಮೀಸಲಾತಿ ವಿಳಂಬದ ವಿರುದ್ಧ ರಾಜ್ಯ ಚುನಾವಣಾ ಆಯೋಗ ಹೈಕೋರ್ಟ್‌ ಮೊರೆ ಹೋಗಿತ್ತು. ಕ್ಷೇತ್ರಗಳ ಪುನರ್‌ ವಿಂಗಡಣೆ ಮತ್ತು ಮೀಸಲಾತಿ ನಿಗದಿ ಪ್ರಕ್ರಿಯೆಯನ್ನು ಒಂದು ತಿಂಗಳಲ್ಲಿ ಪೂರ್ಣಗೊಳಿಸುವುದಾಗಿ 2023ರ ಡಿಸೆಂಬರ್‌ನಲ್ಲೇ ರಾಜ್ಯ ಸರ್ಕಾರ ಹೈಕೋರ್ಟ್‌ಗೆ ಪ್ರಮಾಣ ಪತ್ರ ಸಲ್ಲಿಸಿತ್ತು.

ನಂತರ ಕ್ಷೇತ್ರಗಳ ಪುನರ್‌ವಿಂಗಡಣೆ ಹಾಗೂ ಸದಸ್ಯರ ಸಂಖ್ಯೆ ನಿಗದಿಪಡಿಸಲು ಸರ್ಕಾರ ರಚಿಸಿದ್ದ ಆಯೋಗದ ಶಿಫಾರಸುಗಳನ್ನು ಅಂಗೀಕರಿಸಿದ್ದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ, ಅಧಿಸೂಚನೆ ಹೊರಡಿಸಿತ್ತು. ಆದರೆ, ಮೀಸಲಾತಿ ನಿಗದಿ ಅಂತಿಮಗೊಳಿಸಿರಲಿಲ್ಲ. ಸಂಪುಟದ ನಿರ್ಧಾರದೊಂದಿಗೆ ಸುದೀರ್ಘ ಅವಧಿ ನನೆಗುದಿಗೆ ಬಿದ್ದಿದ್ದ ಚುನಾವಣೆ ನಡೆಯುವುದು ಖಚಿತವಾಗಿದೆ.

Government decision for district and taluk panchayat elections

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...