Home namma chikmagalur chikamagalur ಕಲ್ಯಾಣ ಮಂಟಪದ ಮದುವೆ ಮನೆಯಲ್ಲಿ ಪ್ರೇಯಸಿ ರಂಪಾಟ ….!
chikamagalurCrime NewsHomeLatest Newsnamma chikmagalur

ಕಲ್ಯಾಣ ಮಂಟಪದ ಮದುವೆ ಮನೆಯಲ್ಲಿ ಪ್ರೇಯಸಿ ರಂಪಾಟ ….!

Share
Share

ಚಿಕ್ಕಮಗಳೂರು: ಪ್ರೇಯಸಿಗೆ ಕೈಕೊಟ್ಟು ಬೇರೆ ಯುವತಿ ಜತೆಗೆ ಮದುವೆಯಾದ ಯುವಕನಿಂದ ಮೋಸ ಹೋದ ಯುವತಿ ಮದುವೆ ಮಂಟಪಕ್ಕೆ ನೇರವಾಗಿ ಬಂದು ಮದುವೆಗೆ ಒತ್ತಾಯಿಸಿರುವ ಘಟನೆ ಚಿಕ್ಕಮಗಳೂರು ನಗರದ ದೊಡ್ಡಗೌಡ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದಿದೆ.

ಕಳೆದ ೧೦ ವರ್ಷದಿಂದ ಶರತ್ ಎಂಬಾತನನ್ನು ಪ್ರೀತಿಸುತ್ತಿದ್ದು, ಮದುವೆಯಾಗುವುದಾಗಿ ನಂಬಿಸಿ ಕೊನೆಗೆ ಮೋಸ ಮಾಡಿದ್ದಾನೆ ಎಂದು ಹಾಸನ ಜಿಲ್ಲೆ ಬೇಲೂರು ಮೂಲದ ಯುವತಿ ಆರೋಪಿಸಿದ್ದಾರೆ. ಶರತ್ ಮದುವೆಯಾಗುತ್ತಿರುವ ವಿಷಯ ತಿಳಿದ ಯುವತಿ ನೇರವಾಗಿ ಮದುವೆ ಮಂಟಪಕ್ಕೆ ಬಂದು ನೀನು ಮೋಸ ಮಾಡಿದ್ದೀಯಾ, ಈಗ ನನ್ನನ್ನು ಮದುವೆಯಾಗುತ್ತೀಯಾ ಇಲ್ಲವೆ ಎಂದು ರಂಪಾಟ ಮಾಡಿದ್ದು, ಶರತ್ ಮೋಸಮಾಡುತ್ತಿರುವ ವಿಚಾರವಾಗಿ ಕಳೆದ ೮ ತಿಂಗಳ ಹಿಂದೆ ಆಲ್ದೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು ಎಂದು ಹೇಳಲಾಗಿದೆ.

ಶನಿವಾರ ಶರತ್ ಮನೆಮುಂದೆ ಏಕಾಂಗಿ ಹೋರಾಟ ಮಾಡಿದ್ದ ಯುವತಿ ಭಾನುವಾರ ಮದುವೆ ಮಂಟಪಕ್ಕೆ ಬಂದು ರಂಪಾಟ ನಡೆಸಿದ್ದಾಳೆ. ಮದುವೆ ಮಂಟಪದೊಳಗೆ ಧರಣಿ ಕುಳಿತಿದ್ದಾಳೆ. ಕೊನೆಗೆ ಪೊಲೀಸರು ಮಧ್ಯೆ ಪ್ರವೇಶಿಸಿ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.

ಯುವತಿ ಅಶ್ವಿನಿ ಮಾತನಾಡಿ, ಶರತ್ ಇದೇ ಮಂಟಪದಲ್ಲಿ ನನ್ನ ಮದುವೆಯಾಗಬೇಕು. ಅಲ್ಲಿಯವರೆಗೂ ನಾನು ಹೋರಾಟ ಮಾಡುತ್ತೇನೆ. ನಾನು ಬರುವ ಮೊದಲೇ ಮದುವೆಯಾಗಿದೆ. ಈಗ ನನ್ನನ್ನು ಶರತ್ ಮದುವೆಯಾಗಬೇಕು ಎಂದು ಒತ್ತಾಯಿಸಿದರು.

ಮಂಟಪದೊಳಗೆ ಪ್ರವೇಶಿಸುತ್ತಿದ್ದಂತೆ, ಹುಡುಗನ ಕಡೆಯವರು ಬಾಗಿಲು ಹಾಕಿಕೊಂಡರು. ಹುಡುಗನ ಕಡೆಯವರು ನನ್ನ ಮೇಲೆ ಹಲ್ಲೆ ಮಾಡಿ, ಎಳೆದಾಡಿದ್ದಾರೆಂದು ಇದೇ ವೇಳೆ ಆರೋಪಿಸಿದರು.

ಅಲ್ಲದೆ, ಸ್ಥಳದಲ್ಲಿದ್ದವರು ವಿಡಿಯೋ ಮಾಡದಂತೆ ಶರತ್ ಕುಟುಂಬದವರು ಕ್ಯಾಮರಾಗಳಿಗೆ ಅಡ್ಡ ಬಂದಿದ್ದಾರೆ. ಗಲಾಟೆ ತೀವ್ರವಾದ ಕಾರಣ, ಮದುವೆ ಮನೆಯವರು ದಿಢೀರನೆ ಕಲ್ಯಾಣ ಮಂಟಪವನ್ನು ಖಾಲಿ ಮಾಡಿ ಸ್ಥಳದಿಂದ ನಿರ್ಗಮಿಸಿದ್ದಾರೆ. ನ್ಯಾಯಕ್ಕಾಗಿ ಯುವತಿಯ ಹೋರಾಟ ಮುಂದುವರಿದಿದೆ.

The mistress’s rampage in the wedding house of the Kalyana Mantapa….!

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...