Home namma chikmagalur chikamagalur ಕೊಟ್ಟಿಗೆಹಾರದಲ್ಲಿ ಐದು ಮಂದಿಗೆ ಕಚ್ಚಿದ ಹುಚ್ಚು ನಾಯಿ
chikamagalurCrime NewsHomeLatest Newsnamma chikmagalur

ಕೊಟ್ಟಿಗೆಹಾರದಲ್ಲಿ ಐದು ಮಂದಿಗೆ ಕಚ್ಚಿದ ಹುಚ್ಚು ನಾಯಿ

Share
Share

ಕೊಟ್ಟಿಗೆಹಾರ: ರಾಷ್ಟ್ರೀಯ ಹೆದ್ದಾರಿ ಕೊಟ್ಟಿಗೆಹಾರ ಪಟ್ಟಣದಲ್ಲಿ ಹುಚ್ಚು ನಾಯಿಗಳ ಕಾಟ ತೀವ್ರಗೊಂಡಿದ್ದು, ಕಳೆದ ಕೆಲ ದಿನಗಳಲ್ಲಿ ನಾಲ್ಕೈದು ಮಂದಿಗೆ ಕಚ್ಚಿ ಗಾಯಗೊಳಿಸಿರುವ ಘಟನೆಗಳು ವರದಿಯಾಗಿವೆ. ಪಟ್ಟಣದ ವಿವಿಧ ಭಾಗಗಳಲ್ಲಿ ಅಟ್ಟಹಾಸ ಮೆರೆದ ಹುಚ್ಚು ನಾಯಿಗಳು ಸಾರ್ವಜನಿಕರ ಮೇಲೆ ದಾಳಿ ನಡೆಸಿ ಭಯಭೀತಿಯ ವಾತಾವರಣ ನಿರ್ಮಾಣ ಮಾಡಿವೆ.

ಹುಚ್ಚು ನಾಯಿಗಳು ಮಾನವರಷ್ಟೇ ಅಲ್ಲದೆ ಕೆಲವು ಬೀದಿ ನಾಯಿಗಳಿಗೂ ಕಚ್ಚಿರುವುದು ತಿಳಿದುಬಂದಿದೆ. ದಾಳಿಯಿಂದ ಗಾಯಗೊಂಡವರು ಸ್ಥಳೀಯ ಬಣಕಲ್ ಸಾಯಿ ಕೃಷ್ಣ ಆಸ್ಪತ್ರೆಯಲ್ಲಿ ತಕ್ಷಣ ಚಿಕಿತ್ಸೆ ಪಡೆದುಕೊಂಡಿದ್ದಾರೆ. ವೈದ್ಯರ ಪ್ರಕಾರ ಗಾಯಗೊಂಡವರ ಆರೋಗ್ಯ ಸ್ಥಿತಿ ಸದ್ಯ ನಿಯಂತ್ರಣದಲ್ಲಿ ಇದೆ ಎಂದು ತಿಳಿದುಬಂದಿದೆ.ನಿರಂತರ ದಾಳಿಗಳಿಂದ ಆತಂಕಕ್ಕೊಳಗಾದ ಸ್ಥಳೀಯರು ಕೊನೆಗೆ ಹುಚ್ಚು ನಾಯಿಯನ್ನು ಅಟ್ಟಾಡಿಸಿ ಹಿಡಿದು ಹೊಡೆದು ಸಾಯಿಸಿರುವ ಘಟನೆ ಕೂಡ ನಡೆದಿದೆ.

ಈ ಘಟನೆಯ ನಂತರ ಪಟ್ಟಣದ ಜನತೆ ಸ್ವಲ್ಪ ಮಟ್ಟಿಗೆ ನಿರಾಳಗೊಂಡರೂ, ಇಂತಹ ಘಟನೆಗಳು ಮರುಕಳಿಸುವ ಭೀತಿಯು ಇನ್ನೂ ಮುಂದುವರಿದಿದೆ.ಪಟ್ಟಣದಲ್ಲಿ ಬೀದಿ ನಾಯಿಗಳ ಸಂಖ್ಯೆಯು ಹೆಚ್ಚಾಗುತ್ತಿರುವುದರಿಂದ ಈ ರೀತಿಯ ಅಪಾಯಗಳು ಎದುರಾಗುತ್ತಿವೆ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಸಂಬಂಧಪಟ್ಟ ಪಶುಸಂಗೋಪನಾ ಇಲಾಖೆ ಹಾಗೂ ಸ್ಥಳೀಯ ಆಡಳಿತ ತಕ್ಷಣ ಎಚ್ಚೆತ್ತುಕೊಂಡು, ಬೀದಿ ನಾಯಿಗಳ ನಿಯಂತ್ರಣ, ಲಸಿಕೆ ನೀಡುವಿಕೆ ಮತ್ತು ಸಾರ್ವಜನಿಕ ಸುರಕ್ಷತೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Five people bitten by a mad dog in Kotteghaara

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...