Home namma chikmagalur chikamagalur ಸಿಎನ್‌ಜಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ವಿರೋಧಿಸಿ ಪ್ರತಿಭಟನೆ
chikamagalurHomeLatest Newsnamma chikmagalur

ಸಿಎನ್‌ಜಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ವಿರೋಧಿಸಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ನಗರ ಹೊರವಲಯದ ಗವನಹಳ್ಳಿ ಬಳಿ ನಿರ್ಮಿಸುತ್ತಿರುವ ಸಿಎನ್‌ಜಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಬಿಜೆಪಿ ಮುಖಂಡರ ನೇತೃತ್ವದಲ್ಲಿ ಸ್ಥಳೀಯ ನಿವಾಸಿಗಳು ಪ್ರತಿಭಟನೆ ನಡೆಸಿದರು.

ಗ್ಯಾಸ್ ಸ್ಟೇಷನ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಆಗಮಿಸಿದ ಹಲವಾರು ಬಿಜೆಪಿ ಮುಖಂಡರು, ಸ್ಥಳೀಯ ನಿವಾಸಿಗಳು ಗ್ಯಾಸ್‌ಬಂಕ್ ಬೇಡ ಎಂಬ ಫ್ಲೆಕ್ಸ್ ಪ್ರದರ್ಶಿಸಿದರು. ಕಾಮಗಾರಿ ಸ್ಥಗಿತಕ್ಕೆ ಆಗ್ರಹಿಸಿ ಘೋಷಣೆ ಕೂಗಿದರು.

ಸ್ಥಳೀಯ ನಿವಾಸಿ ಕೇಶವ್ ಈ ವೇಳೆ ಮಾತನಾಡಿ, ಗ್ಯಾಸ್ ಸ್ಟೇಷನ್ ನಿರ್ಮಿಸುತ್ತಿರುವ ಪಕ್ಕದಲ್ಲಿ ನನ್ನ ಮನೆ, ಸುತ್ತಮುತ್ತ ಸಾರ್ವಜನಿಕರ ಮನೆಗಳಿವೆ. ಹಿಂಭಾಗದಲ್ಲಿ ಎಸ್ಸಿ ಸ್ಮಶಾನವಿದೆ. ಪಕ್ಕದಲ್ಲಿ ಸಾಮಿಲ್ ಇದ್ದು ಒಣಕಟ್ಟಿಗೆಗಳ ರಾಶಿಯೇ ಇದೆ. ಬೆಂಕಿ ಅವಘಡ ಉಂಟಾದಲ್ಲಿ ಇಡೀ ಊರೇ ಭಸ್ಮವಾಗುವ ಅಪಾಯವಿದೆ ಎಂದು ದೂರಿದರು.

ಸಿಎನ್‌ಜಿ ಕಂಪನಿಯವರು ಗ್ಯಾಸ್ ಬಂಕ್ ನಿರ್ಮಿಸುವುದರ ವಿರುದ್ಧ ಜಿಲ್ಲಾಧಿಕಾರಿಗಳಿಗೆ ತಕರಾರು ಅರ್ಜಿಸಲ್ಲಿಸಿದ್ದೆ, ಅವರು ಒಂದು ವರ್ಷ ಕಳೆದರೂ ನಮಗೆ ಸಮಜಾಯಿಷಿ ನೀಡಲಿಲ್ಲ. ಇದೀಗ ಮಾಲೀಕರಿಗೆ ಗ್ಯಾಸ್ ಬಂಕ್ ನಿರ್ಮಿಸಲು ಅನುಮತಿ ನೀಡಿದ್ದಾರೆ, ಇದು ಕಾನೂನುಬಾಹಿರ ಎಂದು ಆರೋಪಿಸಿದರು.

ಪಕ್ಕದಲ್ಲಿ ಯೋಗ ತರಗತಿ ಕೊಠಡಿ, ಸ್ಮಶಾನ, ಸಾಮಿಲ್ ಸಾರ್ವಜನಿಕ ಹಿತದೃಷ್ಟಿ ಹಿನ್ನೆಲೆಯಲ್ಲಿ ಗ್ಯಾಸ್ ಸ್ಟೇಷನ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಬಿಜೆಪಿ ಮುಖಂಡ ಕುರುವಂಗಿ ವೆಂಕಟೇಶ್ ಮಾತನಾಡಿ, ಗ್ಯಾಸ್ ಸ್ಟೇಷನ್ ನಿರ್ಮಿಸುತ್ತಿರುವ ಹಿಂಭಾಗದಲ್ಲಿ ಪರಿಶಿಷ್ಟ ಸಮುದಾಯದ ಸ್ಮಶಾನವಿದೆ. ಅಲ್ಲಿ ಕಳೆಬರ ದಹಿಸುವಾಗ ಬೆಂಕಿ ಅವಘಡ ಉಂಟಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಅನಾನುಕೂಲವಾಗಿರುವ ಗ್ಯಾಸ್ ಸ್ಟೇಷನ್‌ಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಶ್ರೀನಿವಾಸ್, ಕವಿತಾಶೇಖರ್, ಮುತ್ತಯ್ಯ, ಸಂತೋಷ್ ಕೊಟ್ಯಾನ್, ಆಲ್ದೂರು ಶಶಿ, ಅಮೃತೇಶ ಚನ್ನಕೇಶವ. ಶ್ಯಾಮ್ ವಿ ಗೌಡ, ರೂಪಕುಮಾರ್, ರವಿಕುಮಾರ್ ಮತ್ತಿತರಿದ್ದರು.

Protest against permission for CN gas station

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...