Home namma chikmagalur chikamagalur ಕ್ರೆಡಲ್‌ಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ
chikamagalurHome

ಕ್ರೆಡಲ್‌ಗೆ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ

Share
Share

ನರಸಿಂಹರಾಜಪುರ: ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮ (ಕ್ರೆಡಲ್‌) ವು ದೇಶದಲ್ಲಿ ಪ್ರಥಮ ಸ್ಥಾನ ಪಡೆದು 2025ರ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿಗೆ (ಎನ್‌ಇಸಿಎ) ಭಾಜನವಾಗಿದೆ.

ಭಾನುವಾರ ನವದೆಹಲಿಯ ವಿಜ್ಞಾನ ಭವನದಲ್ಲಿ ನಡೆದ 35ನೇ ರಾಷ್ಟ್ರೀಯ ಇಂಧನ ಸಂರಕ್ಷಣಾ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ರಾಜ್ಯ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ. ರಾಜೇಗೌಡ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಪ್ರಶಸ್ತಿ ಸ್ವೀಕರಿಸಿದರು.

ರಾಜ್ಯದಲ್ಲಿ ದಾಖಲೆ ಮಟ್ಟದ ಪವನ ವಿದ್ಯುತ್ ಉತ್ಪಾದನೆ, ಇಂಧನ ಸಂರಕ್ಷಣೆ ಹಾಗೂ ನವೀಕರಿಸಬಹುದಾದ ಶಕ್ತಿಯ ಬಳಕೆಯನ್ನು ಜನಸಾಮಾನ್ಯರ ಬದುಕಿನ ಭಾಗವನ್ನಾಗಿಸುವ ನಿಟ್ಟಿನಲ್ಲಿ ಕೈಗೊಂಡ ಯೋಜನೆಗಳು, ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ಸಮಗ್ರ ಹಾಗೂ ಶಾಶ್ವತ ಸಾಧನೆ, ಸೂರ್ಯಶಕ್ತಿ ಹಾಗೂ ಹಸಿರು ಇಂಧನ ಆಧಾರಿತ ಕಾರ್ಯಕ್ರಮಗಳು, ಶಕ್ತಿ ಸಂರಕ್ಷಣೆ ಮತ್ತು ಹಸಿರು ಶಕ್ತಿ ಉತ್ತೇಜನದಲ್ಲಿ ಕರ್ನಾಟಕದ ಮುನ್ನಡೆಗೆ ರಾಷ್ಟ್ರಮಟ್ಟದ ಮಾನ್ಯತೆ ಈ ಪ್ರಶಸ್ತಿಗೆ ಭದ್ರವಾದ ಅಡಿಪಾಯವಾಗಿವೆ.

ಗ್ರಾಮೀಣದಿಂದ ನಗರವರೆಗೆ ಸಮಾನವಾಗಿ ಶಾಶ್ವತ ಶಕ್ತಿ ತಲುಪಿಸುವ ಗುರಿಯೊಂದಿಗೆ ಕಾರ್ಯನಿರ್ವಹಿಸಿದ ನಿಗಮದ ಸಾಧನೆಯನ್ನು ರಾಷ್ಟ್ರವೇ ಮೆಚ್ಚಿಕೊಂಡಿದೆ. ಈ ಪ್ರಶಸ್ತಿ ಮುಂದಿನ ಪೀಳಿಗೆಗೆ ಶುದ್ಧ, ಸುರಕ್ಷಿತ ಮತ್ತು ಸುಸ್ಥಿರ ಇಂಧನದ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಹೊಸ ಉತ್ಸಾಹ ನೀಡಿದೆ ಎಂದು ಪ್ರಶಸ್ತಿಯಲ್ಲಿ ಉಲ್ಲೇಖಿಸಲಾಗಿದೆ.

ಪ್ರಶಸ್ತಿ ಸ್ವೀಕರಿಸುವ ಸಂದರ್ಭದಲ್ಲಿ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಕಾರ್ಯನಿರ್ವಾಹಕ ನಿರ್ದೇಶಕ ರುದ್ರಪ್ಪಯ್ಯ ಇದ್ದರು.

Cradle wins National Energy Conservation Award

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...