Home namma chikmagalur chikamagalur ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳ ಅಮಾನತು
chikamagalurHomeLatest Newsnamma chikmagalur

ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳ ಅಮಾನತು

Share
Share
ಚಿಕ್ಕಮಗಳೂರು: ಕಡೂರು ತಾಲ್ಲೂಕಿನಲ್ಲಿ ಮಧ್ಯ ವಯಸ್ಸಿನವರಿಗೆ ಅಕ್ರಮವಾಗಿ ವೃದ್ಧಾಪ್ಯ ವೇತನ ಮಂಜೂರು ಮಾಡಿರುವ ಆರೋಪದಲ್ಲಿ ಕಂದಾಯ ಇಲಾಖೆಯ ಎಂಟು ಮಂದಿ ಅಧಿಕಾರಿಗಳನ್ನು ಅಮಾನತು ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನಾಡ ಕಚೇರಿ ವಿಷಯ ನಿರ್ವಾಹಕ ಗಿರೀಶ್, ಕಂದಾಯ ಅಧಿಕಾರಿ ಪಿ.ಆರ್.ರವಿಕುಮಾರ್, ಗ್ರಾಮ ಆಡಳಿತಾಧಿಕಾರಿಗಳಾದ ನಿರ್ಮಲಾ ಟಿ.ಎಸ್., ಹನುಮಂತಪ್ಪ ಆರ್., ರವಿ ಕೆ.ಆರ್., ಲಿಂಗರಾಜು ಕೆ.,ಕಾವ್ಯಾ ಟಿ.ಎಂ., ಕುಮಾರ್ ಜೆ.ಎಂ. ಅವರನ್ನು ಅಮಾನತು ಮಾಡಲಾಗಿದೆ.

ಎನ್‌.ಕೆ.(ನಾಡ ಕಚೇರಿ)–5 ತಂತ್ರಾಂಶದಲ್ಲಿ ಅಕ್ರಮವಾಗಿ 64 ಜನರಿಗೆ ಪಿಂಚಣಿ ಮಂಜೂರು ಮಾಡಿ ಸರ್ಕಾರಕ್ಕೆ ₹9.03 ಲಕ್ಷ ನಷ್ಟ ಮಾಡಿದ್ದಾರೆ ಎಂದು ತಹಶೀಲ್ದಾರ್ ವರದಿಯಲ್ಲಿ ತಿಳಿಸಿ ದ್ದರು. ಅದನ್ನು ಆಧರಿಸಿ ತನಿಖೆ ನಡೆಸಿದ್ದ ಕಂದಾಯ ಇಲಾಖೆ, 11 ಜನರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿತ್ತು.

ಕಡೂರು ತಹಶೀಲ್ದಾರ್ ಇತ್ತೀಚೆಗೆ ಮತ್ತೊಂದು ವರದಿಯನ್ನು ಸಲ್ಲಿಸಿದ್ದು, ಕಡೂರು ತಾಲ್ಲೂಕಿನ ಕಸಬಾ ಹೋಬಳಿಯಲ್ಲಿ  ಎನ್.ಕೆ.–4 ತಂತ್ರಾಂಶದಲ್ಲೂ 1,485 ಅನರ್ಹರಿಗೆ ಅಕ್ರಮವಾಗಿ ಪಿಂಚಣಿ ಮಂಜೂರಾಗಿ ಸರ್ಕಾರಕ್ಕೆ ₹2.17 ಕೋಟಿ ನಷ್ಟವಾಗಿದೆ ಎಂದು ಉಲ್ಲೇಖಿಸಿದ್ದರು.

ಈ ಪ್ರಕರಣಗಳಲ್ಲಿ ಯಾವ ಅಧಿಕಾರಿಗಳ ಎಲ್ಲೆಲ್ಲಿ ಕರ್ತವ್ಯಲೋಪ ಎಸಗಿದ್ದಾರೆ. ಯಾರಿಂದ ಎಷ್ಟು ನಷ್ಟ ಆಗಿದೆ ಎಂದು ಕೂಲಂಕಷವಾಗಿ ಪರಿಶೀಲಿಸಿರುವ ಜಿಲ್ಲಾಧಿಕಾರಿ ಮೀನಾ ನಾಗರಾಜ್, 8 ಸಿಬ್ಬಂದಿ ಅಮಾನತು ಮಾಡಿ ಆದೇಶಿಸಿದ್ದಾರೆ. ಶಿರಸ್ತೇದಾರ್ ಕಲ್ಮರುಡಪ್ಪ ಅವರನ್ನು ಈ ಹಿಂದೆಯೇ ಅಮಾನತು ಮಾಡಲಾಗಿತ್ತು.

‘ಆಕ್ರಮವಾಗಿ ಪಿಂಚಣಿ ಮಂಜೂರಾತಿ ಪ್ರಕರಣದಲ್ಲಿ ಸಿಬ್ಬಂದಿಯನ್ನು ಅಮಾನತು ಮಾಡಿರುವ ಕ್ರಮ ಸ್ವಾಗತಾರ್ಹ. ಎಲ್ಲಾ ತಾಲ್ಲೂಕು ಮತ್ತು ಹೋಬಳಿಗಳಲ್ಲಿ ಎನ್‌.ಕೆ.–4 ಮತ್ತು ಎನ್.ಕೆ.–5 ತಂತ್ರಾಂಶ ಪರಿಶೀಲಿಸಬೇಕು. ಅಕ್ರಮಗಳನ್ನು ಪತ್ತೆ ಹಚ್ಚಬೇಕು’ ಎಂದು ಕಡೂರಿನ ವಕೀಲ ನಾಗರಾಜ್ ಆಗ್ರಹಿಸಿದ್ದಾರೆ.

Eight Revenue Department officials suspended

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...