Home namma chikmagalur chikamagalur ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜನ್ಮದಿನಕ್ಕೆ ವಿಶೇಷ ಪೂಜೆ ಸಲ್ಲಿಕೆ
chikamagalurHomeLatest Newsnamma chikmagalur

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜನ್ಮದಿನಕ್ಕೆ ವಿಶೇಷ ಪೂಜೆ ಸಲ್ಲಿಕೆ

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಪ್ರಯುಕ್ತ ಮಂಗಳವಾರ ಜಿಲ್ಲಾ ಜೆಡಿಎಸ್ ಕಾರ್ಯಕರ್ತರು ನಗರದ ತಾಲ್ಲೂಕು ಕಚೇರಿ ಸಮೀಪದ ಗಣಪತಿ ದೇವಸ್ಥಾನದಲ್ಲಿ ವಿಶೇಷ ಪೂ ಜೆ ಸಲ್ಲಿಸಿ ದೀರ್ಘಾಯುಷ್ಯಿಗಾಗಿ ಪ್ರಾರ್ಥಿಸಿದರು.

ಈ ವೇಳೆ ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್‌ಕುಮಾರ್ ಮಾತನಾಡಿ ನಾಡಿನಲ್ಲಿ ರೈತಪರವಾಗಿ ಅತ್ಯ ಂತ ಕಾಳಜಿ ಹೊಂದಿದ ನಾಯಕ ಕುಮಾರಸ್ವಾಮಿ. ರಾಜ್ಯದಲ್ಲಿ ಎರಡು ಭಾರೀ ಮುಖ್ಯಮಂತ್ರಿ ಸ್ಥಾನ ಅಲಂ ಕರಿಸಿ ಸಾರಾಯಿ, ಲಾಟರಿ ನಿಷೇಧಿಸಿ, ಗ್ರಾಮವಾಸ್ತವ್ಯ ನಡೆಸಿದಲ್ಲದೇ, ಏಡ್ಸ್ ಪೀಡಿತ ರೋಗಿಯ ಮನೆಗೆ ತೆರಳಿ ಧೈರ್ಯ ತುಂಬುವ ಕೆಲಸ ಮಾಡಿದವರು ಎಂದರು.

ನಾಡಿನಲ್ಲಿ ಮುಖ್ಯಮಂತ್ರಿಯಾಗಿ ಕುಮಾರಸ್ವಾಮಿ ಅಧಿಕಾರ ಸ್ವೀಕರಿಸಿದ ವೇಳೆ ಸಾಲಬಾಧೆಯಿಂದ ತತ್ತರಿಸಿ ಹೋಗಿದ್ಧ ರೈತರಿಗೆ ಸಾಲಮನ್ನಾ ಯೋಜನೆ ಜಾರಿಗೊಳಿಸಿ ಬದುಕಿಗೆ ಬೆಳಕನ್ನು ತೋರುವ ಮೂ ಲಕ ಅನ್ನದಾತನಿಗೆ ಆಸರೆಯಾದವರು. ರಾಜ್ಯಸರ್ಕಾರದ ಆಳ್ವಿಕೆಯಲ್ಲಿ ಪ್ರಪ್ರಥಮ ಭಾರಿಗೆ ರೈತರ ಧನಿಗೂ ಡಿಸಿ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಕುಮಾರಸ್ವಾಮಿ ಅವರಿಗೆ ಆರೋಗ್ಯ ವೃದ್ದಿಗೊಂಡು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿ ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯಬೇಕೆಂಬುದು ಕಾರ್ಯಕರ್ತರ ಅಭಿಲಾಷೆಯಾಗಿದ್ದು ಆ ನಿಟ್ಟಿನಲ್ಲಿ ಇಂದು ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ, ಸಿಹಿ ಹಂ ಚಿಲಾಗಿದೆ ಎಂದು ತಿಳಿಸಿದರು.

ಪಕ್ಷದ ಜಿಲ್ಲಾ ಉಪಾಧ್ಯಕ್ಷ ಲಕ್ಷ್ಮಣಗೌಡ ಮಾತನಾಡಿ ಕಾರ್ಮಿಕರು, ಮಹಿಳೆಯರ ಕಷ್ಟಗಳಿಗೆ ಸ್ಪಂದಿಸು ವ ಅಪರೂಪದ ಗುಣ ಕುಮಾರಸ್ವಾಮಿ ಅವರಲ್ಲಿದೆ. ಪ್ರಸ್ತುತ ಕೇಂದ್ರ ಸರ್ಕಾರದಲ್ಲಿ ಸಚಿವರಾದರೂ ಕೂಡಾ ರಾಜ್ಯದ ಕೋಟ್ಯಾಂತರ ಜನತೆಯ ಮನಸ್ಸಿನಲ್ಲಿ ಉಳಿದಿರುವ ಧೀಮಂತ ನಾಯಕ ಎಂದು ಬಣ್ಣಿಸಿದರು.

ನಗರಸಭೆ ಸದಸ್ಯ ಗೋಪಿ ಮಾತನಾಡಿ ಬಡವರು, ಶೋಷಿತರ ಪರವಾಗಿ ವಿಶೇಷ ಕಾಳಜಿ ವಹಿಸಿದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಬಡವರ ಮನೆಯಲ್ಲೇ ವಾಸ್ತವ್ಯ ಹೂಡಿ ಜನರ ಸಮಸ್ಯೆಗಳನ್ನು ಪರಿಹರಿಸುವ ಕಾರ್ಯ ಮಾಡಿರುವ ಕಾರಣ ಪ್ರತಿವರ್ಷವು ಜನ್ಮದಿನವನ್ನು ರಾಜ್ಯಾದ್ಯಂತ ಕಾರ್ಯಕರ್ತರು ಸಂಭ್ರಮದಿಂದ ಆಚರಿಸುತ್ತಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಂದ್ರಪ್ಪ, ನಗರ ಪ್ರಧಾನ ಕಾರ್ಯದ ರ್ಶಿ ಸಿ.ಕೆ.ಮೂರ್ತಿ, ಎಸ್ಸಿ ವಿಭಾಗದ ಜಿಲ್ಲಾಧ್ಯಕ್ಷ ದೇವಿಪ್ರಸಾದ್, ಮುಖಂಡರುಗಳಾದ ದೇವರಾಜ್‌ಅರಸ್, ಶಿವು, ದಿನೇಶ್, ಚಿದಾನಂದ್, ಜಯಂತಿ, ರತ್ನ, ರಾಮು, ಪ್ರದೀಪ್, ಅಣ್ಣಪ್ಪಶೆಟ್ಟಿ ಮತ್ತಿತರರು ಉಪಸ್ಥಿತ ರಿದ್ದರು.

Special puja offered on the birthday of former Chief Minister Kumaraswamy

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...