Home namma chikmagalur chikamagalur ಬೆಳೆಗಳ ಉತ್ಪತ್ತಿ-ಆದಾಯ ಅಧಿಕಗೊಳಿಸಲು ಶ್ರಮಿಸಬೇಕು
chikamagalurHomeLatest Newsnamma chikmagalur

ಬೆಳೆಗಳ ಉತ್ಪತ್ತಿ-ಆದಾಯ ಅಧಿಕಗೊಳಿಸಲು ಶ್ರಮಿಸಬೇಕು

Share
Share

ಮೂಡಿಗೆರೆ: ರೈತರಿಗೆ ಅಧಿಕವಾಗಿ ಬೆಳೆ ಉತ್ಪನ್ನ ಮಾಡುವುದು ಹಾಗೂ ಆದಾಯ ತರುವ ಬಗ್ಗೆ ಕೃಷಿಗೆ ಸಂಬಂಧಪಟ್ಟ ಎಲ್ಲಾ ವಿಶ್ವವಿದ್ಯಾಲಯಗಳು, ಇಲಾಖೆ ಅಧಿಕಾರಿಗಳು ಗಮನಹರಿಸಿದರೆ ಕೃಷಿಯಿಂದ ಯಾರೂ ಹಿಂದೆ ಸರಿಯಲು ಸಾಧ್ಯವಿಲ್ಲ ಎಂದು ಶಾಸಕಿ ನಯನಾ ಮೋಟಮ್ಮ ಹೇಳಿದರು.

ಅವರು ಶುಕ್ರವಾರ ಕೆವಿಕೆ ಆವರಣದಲ್ಲಿ ಶಿಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವ ವಿದ್ಯಾಲಯ, ವಲಯ ಕೃಷಿ ಮತ್ತು ತೋಟಗಾರಿಕೆ ಸಂಸೊಧನಾ ಕೇಂದ್ರ, ಕೆವಿಕೆ, ಕೃಷಿ, ತೋಟಗಾರಿಕೆ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಂಯಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಕೃಷಿ ಮತ್ತು ತೋಟಗಾರಿಕಾ ಮೇಳ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆದಾಯ ಕಡಿಮೆಯಾದಾಗ ಸಮಾನ್ಯವಾಗಿ ರೈತರು ಕೃಷಿಯಿಂದ ಹೊರ ಹೋಗುತ್ತಾರೆ. ಇದು ಮುಂದುವರೆದರೆ ಅಪಾಯ ತಪ್ಪಿದ್ದಲ್ಲ. ಹಾಗಾಗಿ ಆಯಾ ಪ್ರದೇಶದಲ್ಲಿ ಬೆಳೆಯುವ ಎಲ್ಲಾ ಬೆಳೆಗಳ ಉತ್ಪತ್ತಿಗೆ ಒತ್ತು ನೀಡಬೇಕು. ಜತೆಗೆ ಕಾರ್ಮಿಕರ ಬದುಕಿಗೆ ಸಹಾಯವಾಗುವ ಕಾರ್ಯ ಕೂಡ ಮಾಡಬೇಕು. ತಾನು ಸದನದಲ್ಲಿ ಕೃಷಿಕರ ಬಗ್ಗೆ ಹೆಚ್ಚಾಗಿ ಸದನ ಮತ್ತು ಮಂತ್ರಿಗಳೊಂದಿಗೆ ಮಾತನಾಡಿ ಗಮನ ಸೆಳೆಯುತ್ತಿದ್ದೇನೆಂದು ಹೇಳಿದರು.

ಮಾಜಿ ಸಚಿವ ಬಿ.ಬಿ.ನಿಂಗಯ್ಯ ಮಾತನಾಡಿ, ಕೃಷಿ ಮೇಳ ಎಂಬುವುದು ರೈತರ ಹಬ್ಬ. ಮೇಳದಲ್ಲಿ ಕೃಷಿ ಬಗ್ಗೆ ಹೊಸ ಸಂಶೊಧನೆ, ಆವಿಷ್ಕಾರ ಬಗ್ಗೆ ರೈತರು ತಿಳಿದುಕೊಳ್ಳಲು ಇದೊಂದು ಸುವರ್ಣಾವಕಾಶ. ಅಲ್ಲದೇ ಕೃಷಿಯಲ್ಲಿ ಸಾಧನೆ ಮಾಡಿದ ರೈತರಿಂದ ರೈತರು ಮಾಹಿತಿ ಪಡೆಯುವ ಅವಕಾಶ ಸಿಗುತ್ತದೆ. ವಿಜ್ಞಾನಿಗಳು ರೈತರಿಗೆ ಅನುಕೂಲವಾಗುವ ಸಂಶೊಧನೆ ನಡೆಸಿ ಯಶಸ್ಸು ಕಾಣುವ ಮೂಲಕ ರೈತರಿಗೆ ವರದಾನವಾಗಬೇಕೆಂದು ಹೇಳಿದರು.

ಶಿವಮೊಗ್ಗದ ಕೆ.ಶಿ.ನಾ.ಕೃ.ತೋ.ವಿ.ವಿ. ಕುಲಪತಿ ಡಾ. ಆರ್.ಸಿ.ಜಗದೀಶ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ರೈತರು ಪ್ರತಿ ವರ್ಷ ಮಣ್ಣು ಮತ್ತು ನೀರಿನ ಪರೀಕ್ಷೆ ಮಾಡಿಸಿಕೊಳ್ಳಬೇಕು. ಮಸಾಲೆ ಉತ್ಪನ್ನಕ್ಕೆ ತುಂಬಾ ಬೇಡಿಕೆಯಿದೆ. ಜತೆಗೆ ಬೇಡಿಕೆಯಿರುವ ಬೆಳೆಗಳನ್ನು ಬ್ರಾಂಡ್ ಮಾಡಿ ಮಾರಾಟ ಮಾಡಲು ಮುಂದಾಗಬೇಕು. ಜಾಗತಿಕ ಮಟ್ಟದಲ್ಲಿ ಕಾಫಿ ಬೆಳೆ ಇದೀಗ ೩.೫ಲಕ್ಷ ಟನ್ ಉತ್ಪಾಧನೆಯಾಗುತ್ತಿದೆ. ೨೦೬೭ಕ್ಕೆ ೭ ಲಕ್ಷ ಟನ್‌ಗೆ ಸಾಗುವ ನಿರೀಕ್ಷೆ ಇದೆ. ಹೊಸ ಹೊಸ ಉತ್ಪನ್ನ ತಯಾರಿಸಲು ಉತ್ತಮ ಅವಕಾಶವಿದ್ದು, ಯುವ ಜನತೆಯನ್ನು ಕೃಷಿಯತ್ತ ಕರೆತರುವ ಪ್ರಯತ್ನ ನಡೆಯಬೇಕಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಪ್ರಗತಿಪರ ರೈತರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಹ್ಯಾದ್ರಿ ಜಲಮುಕ್ತಿ ಎಂಬ ಹೊಸ ಭತ್ತದ ತಳಿಯನ್ನು ಲೋಕಾರ್ಪಣೆ ಮಾಡಲಾಯಿತು. ಕಿರು ಆಹಾರ ಸಂಸ್ಕರಣೆ ಘಟಕ ಸ್ಥಾಪನೆ ಬಗ್ಗೆ, ಕಾಳು ಮೆಣಸು, ಏಲಕಿ ಉತ್ಪಾಧನೆ ಮತ್ತು ಸಸ್ಯ ಸಂರಕ್ಷಣೆ ಬಗ್ಗೆ ರೈತರಿಗೆ ಮಾಹಿತಿ ನೀಡಲಾಯಿತು.

ಮಳೆದಲ್ಲಿ ಹಣ್ಣು, ಹೂವು ಸೇರಿದಂತೆ ವಿವಿಧ ಬಗೆಯ ಬೆಳೆಗಳ ನರ್ಸರಿ, ಹಳ್ಳಿಕಾರ್ ಹೋರಿ, ಗಿರಿತಳಿ, ತೆರಿಚೆರ್ರಿ ಕುರಿ, ಕೆಂಗ ಕುರಿ, ವಿವಿಧ ಜಾತಿಯ ಕೋಳಿ, ಕೃಷಿ ಯಂತ್ರೋಪಕರಣ ಸೇರಿದಂತೆ ಕೃಷಿ ಪರಿಕರಗಳ ಬಗ್ಗೆ ಪ್ರದರ್ಶನ ಮತ್ತು ಮಾರಾಟ ಮಳಿಗೆ ತೆರೆಯಲಾಗಿತ್ತು.

ಕೆಜಿಎಫ್ ಅಧ್ಯಕ್ಷ ಹಳಸೆ ಶಿವಣ್ಣ, ಕೃಷಿಕ ಸಮಾಜದ ಜಿಲ್ಲಾಧ್ಯಕ್ಷ ಡಿ.ಎಲ್.ಅಶೋಕ್‌ಕುಮಾರ್, ಬೆಳೆಗಾರ ಸಂಘದ ಅಧ್ಯಕ್ಷ ಭಾಲಕೃಷ್ಣ, ಎಫ್‌ಯು ಅಧ್ಯಕ್ಷ ಎಚ್.ಕೆ.ಪೂರ್ಣೇಶ್, ಟಿಎಪಿಸಿಎಂಸ್ ಅಧ್ಯಕ್ಷ ಕೆಲ್ಲೇಶ್, ಕಪೆಕ್ ವ್ಯವಸ್ಥಾಪಕ ಸಿ.ಎನ್.ಶಿವಪ್ರಸಾದ್, ಕೃಷಿ ಉದ್ದಿಮೆದಾರ ಡಾ.ಬಿ.ಕೆ.ಕುಮಾರಸ್ವಾಮಿ, ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಶ್ರೀನಿವಾಸ್, ಕೆವಿಕೆ ಮುಖ್ಯಸ್ಥ ಡಾ. ಎ.ಟಿ.ಕೃಷ್ಣಮೂರ್ತಿ, ಆಡಳಿತ ಮಂಡಳಿ ಸದಸ್ಯರಾದ ದೇವಿಕುಮಾರ್, ಕಾವೇರಿಯಪ್ಪ, ಶಶಾಂಕ್, ಶಿಕ್ಷಣ ನಿರ್ದೇಶಕ ಎಂ.ಡಿ.ಶಿವಪ್ರಕಾಶ್, ದುಶ್ಯಂತ್, ಗಿರಿರಾಜ್, ಡಾ.ಎಸ್.ಮಾವರ್ಕರ್, ಡಾ.ಸುಚಿತ್ರ, ಮಂಗಳ, ಸದಾನಂದ ಬಂಗೇರ ಮತ್ತಿತರರಿದ್ದರು.

Efforts should be made to increase crop production and income.

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...