Home namma chikmagalur chikamagalur ಅಯ್ಯಪ್ಪ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ…..?
chikamagalurHomeLatest Newsnamma chikmagalur

ಅಯ್ಯಪ್ಪ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ…..?

Share
Share

ಚಿಕ್ಕಮಗಳೂರು: ಇತ್ತೀಚೆಗೆ ಹಲವು ಶಾಲಾ ಕಾಲೇಜುಗಳಲ್ಲಿ ಅಯ್ಯಪ್ಪ ಮಾಲೆ ಧರಿಸಿದ ಬರುವ ಮಕ್ಕಳನ್ನು ಶಿಕ್ಷಿಸುವ ಪ್ರಕರಣಗಳು ಬೆಳಕಿಗೆ ಬಂದಿವೆ. ಚಿಕ್ಕಮಗಳೂರಿನ  MES ಪಿಯು ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿಗಳು ಅಯ್ಯಪ್ಪ ಮಾಲೆ ಧರಿಸಿ ತರಗತಿಗೆ ಬಂದಿದ್ದಕ್ಕೆ ಪ್ರಿನ್ಸಿಪಾಲ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈಗ ಮತ್ತೊಮ್ಮೆ ಜಿಲ್ಲೆಯಲ್ಲಿ ಇದೇ ವಿಚಾರವಾಗಿ ಗಲಾಟೆಯಾಗಿದ್ದು, ನಗರದ ಶಾಲೆಯೊಂದರಲ್ಲಿ ಅಯ್ಯಪ್ಪ ಮಾಲೆ ಹಾಕಿದ್ದಕ್ಕೆ ವಿದ್ಯಾರ್ಥಿ ಮೇಲೆ ಶಿಕ್ಷಕ ಹಲ್ಲೆ ಮಾಡಿರುವುದಾಗಿ ಆರೋಪಿಸಲಾಗಿದೆ.

ನಗರದ ಸಂತ ಜೋಸೆಫ್ ಶಾಲೆಯಲ್ಲಿ ಅಯ್ಯಪ್ಪ ಮಾಲೆ ಧರಿಸಿ ಶಾಲೆಗೆ ಬಂದಿದ್ದ ವಿದ್ಯಾರ್ಥಿಯ ಮೇಲೆ ಹಲ್ಲೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ವಿದ್ಯಾರ್ಥಿಯನ್ನು ಶಿಕ್ಷಕರು ಹೊಡೆದು ಶಾಲೆಯಿಂದ ಹೊರ ಕಳಿಸಿದ್ದಾರೆ ಎಂದು ಮಕ್ಕಳು ಮತ್ತು ಅವರ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಘಟನೆಯ ವಿರುದ್ಧ ಭಜರಂಗದಳ ಕಾರ್ಯಕರ್ತರು ಹಾಗೂ ನೂರಾರು ಅಯ್ಯಪ್ಪ ಮಾಲಾಧಾರಿಗಳು ಶಾಲೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ. ಪ್ರತಿಭಟನೆಯ ವೇಳೆ ಶಾಲಾ ಆಡಳಿತ ಮಂಡಳಿ ಅಯ್ಯಪ್ಪ ಮಾಲಾಧಾರಿಗಳ ಬಳಿ ಕ್ಷಮೆ ಯಾಚಿಸಿದೆ. ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ.

ಅಷ್ಟೇ ಅಲ್ಲದೇ ಬುಧವಾರ (ಡಿ.17) ಅಯ್ಯಪ್ಪ ಮಾಲೆ ಧರಿಸಿದ್ದ ಹಿನ್ನೆಲೆಯಲ್ಲಿ ಆರನೇ ತರಗತಿಯ ಇಬ್ಬರು ವಿದ್ಯಾರ್ಥಿಗಳನ್ನು ಶಾಲೆಯಿಂದ ವಾಪಾಸ್ ಕಳುಹಿಸಲಾಗಿದೆ ಎಂದು ಪ್ರಭಾರಿ ಮುಖ್ಯ ಶಿಕ್ಷಕಿ ಭಾಗ್ಯ ವಿರುದ್ಧ ಆರೋಪ ಕೇಳಿಬಂದಿತ್ತು. ಆದರೆ ಆರೋಪಗಳನ್ನು ತಳ್ಳಿಹಾಕಿರುವ ಮುಖ್ಯ ಶಿಕ್ಷಕಿ , ನಾನು ಯಾವುದೇ ವಿದ್ಯಾರ್ಥಿಯನ್ನು ಶಾಲೆಯಿಂದ ಹೊರಗೆ ಕಳುಹಿಸಿಲ್ಲ ಎಂದು ಹೇಳಿದ್ದರು. ಈಗ ಮತ್ತೊಮ್ಮೆ ಚಿಕ್ಕಮಗಳೂರಿನಲ್ಲಿ ಶಿಕ್ಷಕ ಮಾಲೆ ಧರಿಸಿದ ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆಂಬ ಆರೋಪ ಕೇಳಿಬಂದಿದೆ.

Teacher attacks student for garlanding Ayyappa…..?

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...