Home namma chikmagalur chikamagalur ಸಿಪಿಐ ಶತಮಾನೋತ್ಸವ ಸಂಭ್ರಮದ ಜೊತೆಗೆ ಸವಾಲಿದೆ
chikamagalurHomeLatest Newsnamma chikmagalur

ಸಿಪಿಐ ಶತಮಾನೋತ್ಸವ ಸಂಭ್ರಮದ ಜೊತೆಗೆ ಸವಾಲಿದೆ

Share
Share

ಚಿಕ್ಕಮಗಳೂರು: ಭಾರತ ಕಮ್ಯುನಿಷ್ಟ್ ಪಕ್ಷದ ಶತಮಾನೋತ್ಸವ ಸಂದರ್ಭದಲ್ಲಿ ಸಂಭ್ರಮದ ಜೊತೆಗೆ ಸವಾಲಿದೆ ಎಂದು ಸಿಪಿಐ ಪಕ್ಷದ ರಾಜ್ಯ ಕಾರ್ಯದರ್ಶಿ ಸಾತಿ ಸಂದ್ರೇಶ್ ತಿಳಿಸಿದರು.

ಅವರು ಗುರುವಾರ ನಗರದ ಅಜಾದ್ ಪಾರ್ಕ್‌ನಲ್ಲಿ ಸಿಪಿಐ ಜಿಲ್ಲಾ ಮಂಡಳಿ ಏರ್ಪಡಿಸಿದ್ದ ಸಮತಾ ರಾಜ್ಯದ ಕನಸುಗಳೊಂದಿಗೆ ಶ್ರಮಶಕ್ತಿಯ ಸಂಘರ್ಷದ ಶತಮಾನದ ಪಯಣ ಶತಮಾನೋತ್ಸವದ ಜಾಥಾ ಹಾಗೂ ಬಹಿರಂಗ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.

ಬಿಜೆಪಿಯ ಸರ್ವಾಧಿಕಾರಿ ಧೋರಣೆಯನ್ನು ಎದುರಿಸಲು ಸಮಾನ ಮನಸ್ಕ ನಾಯಕರು ಕೈಜೋಡಿಸಬೇಕೆಂದು ಮನವಿ ಮಾಡಿದ ಅವರು, ದೇಶದಲ್ಲಿ ಕೋಮುವಾದಿ ಪ್ಯಾಸಿಸ್ಟ್ ನೀತಿಯಿಂದ ಬಂಡವಾಳ ಶಾಹಿಗಳಿಗೆ ಹಾಗೂ ಕಾರ್ಪೋರೇಟ್ ಸಂಸ್ಥೆಗಳಿಗೆ ಮಾರಾಟ ಮಾಡುತ್ತಿದ್ದಾರೆ. ಇದರಿಂದಾಗಿ ದಲಿತರು, ಆದಿವಾಸಿಗಳು, ರೈತರು, ಯುವಜನರು, ಮಹಿಳೆಯರು ಸ್ವಾತಂತ್ರ್ಯ ಕಳೆದುಕೊಳ್ಳುತ್ತಿದ್ದಾರೆಂದು ಹೇಳಿದರು.

ಈ ನಿಟ್ಟಿನಲ್ಲಿ ಸಿಪಿಐ ಪಕ್ಷ ಮತ್ತೊಮ್ಮೆ ಸ್ವಾತಂತ್ರ್ಯ ಸಂಗ್ರಾಮ ಮಾಡುವ ಸಲುವಾಗಿ ದೇಶಪ್ರೇಮಿಗಳು, ಜಾತ್ಯಾತೀತ ಪ್ರಗತಿಪರ ಸಂಘಟನೆಗಳು, ವಿವಿಧ ಪಕ್ಷಗಳು, ಪ್ರಸ್ತುತ ಇರುವ ಸವಾಲುಗಳನ್ನು ಎದುರಿಸಲು ಒಗ್ಗೂಡಬೇಕಾದ ಅನಿವಾರ್ಯತೆ ಇದೆ ಎಂದು ಮನವಿ ಮಾಡಿದರು.

ಆರ್‌ಎಸ್‌ಎಸ್ ಬಿಜೆಪಿಯನ್ನು ಅಧಿಕಾರದಲ್ಲಿ ಮುಂದುವರೆಯಲು ಬಿಡದೆ ಸಿಪಿಐ ಸಮತಾ ಸಮಾಜ ನಿರ್ಮಾಣಕ್ಕಾಗಿ ಹೋರಾಟ ರೂಪಿಸಲಿದೆ. ಜಾತ್ಯಾತೀತ, ಪ್ರಜಾಪ್ರಭುತ್ವವಾದಿ ಎಡಪಕ್ಷಗಳು ಈ ಸಂದರ್ಭದಲ್ಲಿ ಗಂಭೀರವಾದ ಹೋರಾಟಕ್ಕೆ ಪ್ರತಿಜ್ಞೆ ಮಾಡಬೇಕೆಂದು ವಿನಂತಿಸಿದರು.

ಜಿಲ್ಲೆಯಲ್ಲಿ ಭೂಮಿ ಹೋರಾಟ ಮುಂದುವರೆಯಲಿದೆ, ರಾಜ್ಯದಲ್ಲಿ ಸಮತಾ ಕನಸು ನನಸಾಗಬೇಕಾದರೆ ರೋಟಿ, ಕಪಡ, ಮಖಾನ ಈ ಮೂರೂ ಇರಬೇಕು. ರಾಜ್ಯದಲ್ಲಿ ೨೭ ಲಕ್ಷ ಕುಟುಂಬಗಳಿಗೆ ಸ್ವಂತ ಮನೆಯಿಲ್ಲ, ಜಿಲ್ಲೆಯಲ್ಲಿ ಸೂರಿಲ್ಲದವರಿಗೆ ಮನೆ ಕೊಡಿಸುವುದೇ ಸಿಪಿಐ ಶತಮಾನದ ಸಂಭ್ರಮದ ಪ್ರತಿಜ್ಞೆ ಎಂದರು.

ಸಿಪಿಐ ರಾಜ್ಯ ಸಹಕಾರ್ಯದರ್ಶಿ ಪಿ.ವಿ ಲೋಕೇಶ್ ಮಾತನಾಡಿ, ಈ ದೇಶದಲ್ಲಿ ನದಿ ನೀರು ಹರಿದಿದೆ, ಗಾಳಿಯಲ್ಲಿ ಬದಲಾವಣೆ, ಭೂಮಿಯಲ್ಲಿ ಸಾಕಷ್ಟು ಸ್ಥಿತ್ಯಂತ್ರ ಆಗಿದೆ. ರಾಜಕಾರಣದಲ್ಲಿಯೂ ಸಾಕಷ್ಟು ಬದಲಾವಣೆಗಳಾಗಿರುವುದನ್ನು ಕಾಣುತ್ತಿದ್ದೇವೆ ಎಂದರು.

ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿಯಾಗದೆ ಬ್ರಿಟೀಷರ ಪರವಾಗಿದ್ದವರು ಇಂದು ಅಧಿಕಾರ ನಡೆಸುತ್ತಿರುವವರ ಬದಲಾವಣೆ ಕಾಣುತ್ತಿದ್ದೇವೆ. ಸಮಾನತೆಗಾಗಿ ಕನಸು ಕಂಡು ಹೋರಾಟ ಮಾಡಿದವರು ಹಿಂದೆ ಸರಿಯುವ ಸನ್ನಿವೇಶ ನಿರ್ಮಾಣವಾಗಿದೆ ಎಂದು ವಿಷಾಧ ವ್ಯಕ್ತಪಡಿಸಿದರು.

ಮೈತ್ರಿ ಹೋರಾಟ, ಐಕ್ಯ ಹೋರಾಟ, ಸಮಾನ ಶತೃ ಇವುಗಳನ್ನು ಗುರ್ತಿಸಬೇಕಿದೆ. ಈ ದೇಶದ ಪ್ರಜಾಪ್ರಭುತ್ವಕ್ಕೆ ಅಪಾಯ ತಂದೊಡ್ಡಿರುವ ಈಗಿನ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆಯನ್ನು ವಿರೋಧಿಸುವವರೆಲ್ಲ ಒಂದೆಡೆ ನಿಲ್ಲಬೇಕಾಗಿದೆ ಎಂದು ಮನವಿ ಮಾಡಿದರು.

ಸಮಾಜದಲ್ಲಿ ಬಿಡಿ ಬಿಡಿ ಹೋರಾಟದಿಂದ ಶತೃವಿನ ಗೆಲುವು ಸುಗಮವಾಗುತ್ತಿದೆ ಎಂಬುದನ್ನು ಮನಗಾಣಬೇಕಿದೆ. ಪರೋಕ್ಷವಾಗಿ ಬ್ರಿಟೀಷ್ ನೀತಿಯಿಂದ ಈ ದೇಶದ ಸಂಪತ್ತನ್ನು ಲೂಟಿ ಹೊಡೆಯಲಾಗುತ್ತಿದೆ ಎಂದು ಆರೋಪಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ರಘು ವಹಿಸಿದ್ದರು. ಮುಖಂಡ ವಿಜಯ್‌ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವೇದಿಕೆಯಲ್ಲಿ ಮಾಜಿ ಜಿಲ್ಲಾ ಕಾರ್ಯದರ್ಶಿ ಹೆಚ್.ಎಂ ರೇಣುಕಾರಾಧ್ಯ, ರಾಧಾಸುಂದರೇಶ್, ವಿವಿಧ ಪ್ರಗತಿಪರ ಸಂಘಟನೆಗಳ ಮುಖಂಡರಾದ ರವೀಶ್‌ಬಸಪ್ಪ, ಮಹೇಶ್, ಅಣ್ಣಯ್ಯ ರಾಜ್ಯ ಸಹಕಾರ್ಯದರ್ಶಿ ಸಂತೋಷ್, ಹೆಚ್.ಕೆ.ಸೋಮೇಗೌಡ, ವಸಂತ್‌ಕುಮಾರ್, ಧರ್ಮರಾಜ್, ರಮೇಶ್,ಮೊದಲಿಗೆ ಕೆರಮಕ್ಕಿ ಮಹೇಶ್ ಸ್ವಾಗತಿಸಿದರು.

CPI centenary celebrations come with challenges

 

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...