Home namma chikmagalur chikamagalur ಅಡಿಕೆ ದರೋಡೆ ಪ್ರಕರಣ-ಮಾಲು ಸಮೇತ ನಾಲ್ವರು ಆರೋಪಿಗಳ ಬಂಧನ
chikamagalurHomeLatest Newsnamma chikmagalur

ಅಡಿಕೆ ದರೋಡೆ ಪ್ರಕರಣ-ಮಾಲು ಸಮೇತ ನಾಲ್ವರು ಆರೋಪಿಗಳ ಬಂಧನ

Share
Share

ನರಸಿಂಹರಾಜಪುರ: ಅಡಿಕೆ ದರೋಡೆ ಪ್ರಕರಣ ಭೇದಿಸಿರುವ ಪೊಲೀಸರು, ಮಾಲು ಸಮೇತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ತಾಲ್ಲೂಕು ಅಗರದಹಳ್ಳಿ ಕ್ಯಾಂಪ್‌ನ ನಿವಾಸಿ ವಿರೇಶ, ಮಹೇಶ, ಎಂ.ಕಾರ್ತಿಕ ಹಾಗೂ ಆರ್. ಶ್ರೀಹರಿ ಬಂಧಿತರು.

ತಾಲ್ಲೂಕಿನ ಬಾಳೆಹೊನ್ನೂರು– ನರಸಿಂಹರಾಜಪುರ ಮಾರ್ಗಮಧ್ಯೆ ಬರುವ ಅಳೇಹಳ್ಳಿ ಗ್ರಾಮದಲ್ಲಿ ಡಿ. 12ರಂದು ಪಿಕಪ್ ವಾಹನ ಅಡ್ಡಗಟ್ಟಿ ವಾಹನದ ಮಾಲೀಕ ಕೆ. ರವಿ ಹಾಗೂ ಚಾಲಕ ವಿಶ್ವಾಸ್‌ ಮೇಲೆ ಹಲ್ಲೆ ನಡೆಸಿ, 44 ಕ್ವಿಂಟಲ್ ತೂಕದ 67 ಚೀಲ ಹಸಿ ಅಡಿಕೆ, ₹29 ಸಾವಿರ ನಗದು ಹಾಗೂ 2 ಮೊಬೈಲ್ ಫೋನ್‌ಗಳನ್ನು ದರೋಡೆ ಮಾಡಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ₹2.56 ಲಕ್ಷ ಮೌಲ್ಯದ 44 ಕ್ವಿಂಟಲ್ ಅಡಿಕೆ, ₹3 ಲಕ್ಷ ಮೌಲ್ಯದ ಬೊಲೆರೋ ವಾಹನ, ಅಂದಾಜು ₹15 ಸಾವಿರ ಮೊತ್ತದ ಬೈಕ್ ಸೇರಿ ₹5.71 ಲಕ್ಷದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಗುರುದತ್ ಕಾಮತ್, ಸಬ್ ಇನ್‌ಸ್ಪೆಕ್ಟರ್ ಬಿ.ಎಸ್. ನಿರಂಜನ್ ಗೌಡ, ಅಪರಾಧ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಎನ್.ಎ. ಜ್ಯೋತಿ, ಸಿಬ್ಬಂದಿಗಳಾದ ಮಧು, ಎಸ್.ಜಿ. ಸೋಮೇಶ, ಯುಗಾಂಧರ, ಪಿ.ಎ. ಬಿನು, ಅಮಿತ್ ಚೌಗುಲೆ, ದೇವರಾಜ, ರೇವಗೊಂಡ ಅರಾಧರ, ಎಂ.ಸಿ. ಮನು, ಮುರುಗೇಶ, ಚಂದ್ರಕಾಂತ ಪೂಜಾರಿ ಭಾಗವಹಿಸಿದ್ದರು.

Areca nut robbery case – Four accused arrested along with goods

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...