Home Crime News ಕಲ್ಲೇನಹಳ್ಳಿ ಗ್ರಾಮದ ಬಳಿ ಗುಂಡಿನ ದಾಳಿಗೆ ಮೂರು ಕೃಷ್ಣಮೃಗಗಳು ಸಾವು
Crime NewsHomeKadurLatest Newsnamma chikmagalur

ಕಲ್ಲೇನಹಳ್ಳಿ ಗ್ರಾಮದ ಬಳಿ ಗುಂಡಿನ ದಾಳಿಗೆ ಮೂರು ಕೃಷ್ಣಮೃಗಗಳು ಸಾವು

Share
Share

ಚಿಕ್ಕಮಗಳೂರು: ಕಡೂರು ತಾಲ್ಲೂಕಿನ ಕಲ್ಲೇನಹಳ್ಳಿ ಗ್ರಾಮದ ಬಳಿ ಗುಂಡಿನ ದಾಳಿಗೆ ಮೂರು ಕೃಷ್ಣಮೃಗಗಳು ಮೃತಪಟ್ಟಿವೆ.

ಬಾಸೂರು ಅಮೃತ ಮಹಲ್ ಕಾವಲಿನ ಕೃಷ್ಣಮೃಗ ಸಂರಕ್ಷಿತ ಪ್ರದೇಶಕ್ಕೆ ಹೊಂದಿಕೊಂಡಿರುವ ಖಾಸಗಿ ಕೃಷಿ ಭೂಮಿಯಲ್ಲಿ ಮೂರು ಕೃಷ್ಣಮೃಗಗಳ ಕಳೇಬರ ಮಂಗಳವಾರ ಪತ್ತೆಯಾಗಿವೆ.

ಎರಡು ಹೆಣ್ಣು ಮತ್ತು ಒಂದು ಗಂಡು ಕೃಷ್ಣಮೃಗವಾಗಿದ್ದು, ಒಂದೂವರೆ ವರ್ಷದಿಂದ ಎರಡು ವರ್ಷದೊಳಗಿನ ವಯಸ್ಸಿನವು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಅಂದಾಜಿಸಿದ್ದಾರೆ.

ಕಳೇಬರ ಇರುವ ಮಾಹಿತಿಯನ್ನು ಸ್ಥಳೀಯರು ನೀಡಿದ ಕೂಡಲೇ ಸ್ಥಳಕ್ಕೆ ಬಂದ ಅರಣ್ಯ ಇಲಾಖೆ ಅಧಿಕಾರಿಗಳು, ಪರಿಶೀಲಿಸಿದರು. ಗುಂಡು ಹಾರಿಸಿರುವ ಹಾಗೂ ವಾಹನಗಳ ಸಂಚರಿಸಿರುವ ಗುರುತುಗಳು ಸ್ಥಳದಲ್ಲಿ ಪತ್ತೆಯಾಗಿವೆ.

ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಹೆಚ್ಚಿನ ಪರೀಕ್ಷೆಗಳಿಗೆ ಮಾದರಿ ಸಂಗ್ರಹಿಸಲಾಗಿದೆ. ವನ್ಯಜೀವಿ ಕಾಯ್ದೆಯಡಿ ಪ್ರಕರಣ ದಾಖಲಿಸಿದೆ ಎಂದು ಉಪಅರಣ್ಯ ಸಂರಕ್ಷಣಾಧಿಕಾರಿ ರಮೇಶ್‌ಬಾಬು ತಿಳಿಸಿದರು.

ಬೇಟೆಗಾರರ ಗುಂಡಿಗೆ ಕೃಷ್ಣಮೃಗಗಳು ಬಲಿಯಾಗಿರಬಹುದು. ಗುಂಪಿನಲ್ಲಿ ದೊಡ್ಡವುಗಳನ್ನು ಒಯ್ದು ಮರಿಗಳನ್ನು ಇಲ್ಲಿಯೇ ಬಿಟ್ಟು ಹೋಗಿರಬಹುದು. ಅರಣ್ಯ ಇಲಾಖೆ ಅಧಿಕಾರಿಗಳು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸಬೇಕು ಎಂದು ಪರಿಸರವಾದಿಗಳು ಒತ್ತಾಯಿಸಿದ್ದಾರೆ.

Three blackbucks killed in shooting near Kallenahalli village

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...