Home namma chikmagalur chikamagalur ರೈತರು ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಬೆಳೆಯಬೇಕು
chikamagalurHomeLatest Newsnamma chikmagalur

ರೈತರು ಕಡಿಮೆ ನೀರಿನಲ್ಲಿ ಉತ್ತಮ ಬೆಳೆ ಬೆಳೆಯಬೇಕು

Share
Share

ಚಿಕ್ಕಮಗಳೂರು:  ರೈತರು ಕಡಿಮೆ ನೀರಿನಲ್ಲಿ ಹೆಚ್ಚು ಉತ್ತಮ ಬೆಳೆ ಬೆಳೆಯಬೇಕು, ಕಡಿಮೆ ಬಂಡವಾಳ ಹೂಡಿ ಹೆಚ್ಚು ಆದಾಯ ತರುವ ತೋಟಗಾರಿಕೆ ಬೆಳೆಗಳನ್ನು ಬೆಳೆಯುವ ಮೂಲಕ ಆರ್ಥಿಕ ಸದೃಢರಾಗಬೇಕು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಕರೆನೀಡಿದರು.

ಅವರು ಇಂದು ತಮ್ಮ ನಿವಾಸದಲ್ಲಿ ಸಣ್ಣ ನೀರಾವರಿ ಮತ್ತು ಅತರ್ಜಲ ಅಭಿವೃದ್ಧಿ ಇಲಾಖೆ ಹಾಸನ ವಿಭಾಗ ಚಿಕ್ಕಮಗಳೂರು ಉಪವಿಭಾಗದ ವ್ಯಾಪ್ತಿಗೆ ಬರುವ ಎಸ್‌ಟಿಪಿ, ಟಿಎಸ್‌ಪಿ ಗಂಗಾಕಲ್ಯಾಣ ಮಾದರಿಯ ಯೋಜನೆ ಅಡಿಯಲ್ಲಿ ಸೌಲಭ್ಯ ಕಲ್ಪಿಸುವ ಪತ್ರ ವಿತರಿಸಿ ಮಾತನಾಡಿದರು.

ಸರ್ಕಾರ ಬಡವರಿಗೆ ಬದುಕು ಕಟ್ಟಿಕೊಳ್ಳಲು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಇದರ ಜೊತೆಗೆ ಉಚಿತ ಬೋರ್‌ವೆಲ್ ಹಾಗೂ ಅಭಿವೃದ್ಧಿಗೂ ಅನುದಾನ ನೀಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರ ಜನಪರ ಕಾರ್ಯಗಳಿಗೆ ಆದ್ಯತೆ ನೀಡಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

ಜಾತ್ಯಾತೀತವಾಗಿ ಬಡವರ ಪರ ಚಿಂತನೆ ಮಾಡುವ ಕಾಂಗ್ರೆಸ್ ಸರ್ಕಾರ ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರದ ೩೪ ಗ್ರಾ.ಪಂ ವ್ಯಾಪ್ತಿಯ ಬಹುತೇಕ ಗ್ರಾಮೀಣ ರಸ್ತೆಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಿದೆ ಎಂದು ಶ್ಲಾಘಿಸಿದರು.

ಕಳೆದ ಎರಡೂವರೆ ವರ್ಷಗಳ ಅವಧಿಯಲ್ಲಿ ರಾಜ್ಯಸರ್ಕಾರ ಐದು ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ ಯೋಜನೆ, ಅನ್ನಭಾಗ್ಯ, ಯುವನಿಧಿ ಯೋಜನೆಗಳಿಗೆ ೫೭ ಸಾವಿರ ಕೋಟಿ ರೂ ವ್ಯಯ ಮಾಡುವ ಮೂಲಕ ಬಡವರ ಬದುಕನ್ನು ಕಟ್ಟಿಕೊಡುವ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಎಸ್‌ಸಿ, ಎಸ್‌ಟಿ ಸಮುದಾಯಗಳು ಸೇರಿದಂತೆ ಬಡವರ ಅನುಕೂಲಕ್ಕಾಗಿ ಸಣ್ಣ ನೀರಾವರಿ ಸಚಿವ ಬೋಸರಾಜು ಅವರು ಅನುದಾನ ಬಿಡುಗಡೆ ಮಾಡಿದ್ದು, ಈಗಾಗಲೇ ಕ್ಷೇತ್ರದಲ್ಲಿ ೧.೫೦ ಕೋಟಿ ರೂ. ವೆಚ್ಚದಲ್ಲಿ ೩೩ ಉಚಿತ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ ಎಂದು ಹೇಳಿದರು.

ಸಮುದಾಯ ಭವನ, ದೇವಸ್ಥಾನಗಳ ಜೀರ್ಣೋದ್ದಾರಕ್ಕೆ ಹಾಗೂ ಅಭಿವೃದ್ಧಿಗೆ ಅನುದಾನ ನೀಡಲಾಗಿದ್ದು, ಬಡವರ, ಅಲ್ಪಸಂಖ್ಯಾತರ, ದೀನ-ದಲಿತರ ಪರವಾಗಿ ಸರ್ಕಾರ ಕೆಲಸಮಾಡುತ್ತಿದೆ ಎಂದು ತಿಳಿಸಿದರು.

ಸಣ್ಣ ನೀರಾವರಿ ಇಲಾಖೆಯ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ದಕ್ಷಿಣಮೂರ್ತಿ ಮಾತನಾಡಿ, ಎಸ್‌ಸಿಪಿ, ಟಿಎಸ್‌ಪಿ ಗಂಗಾ ಕಲ್ಯಾಣ ಮಾದರಿಯಲ್ಲಿ ೨೦೨೪-೨೫ನೇ ಸಾಲಿನಲ್ಲಿ ಎಸ್‌ಸಿಪಿಯಲ್ಲಿ ೧೩, ಟಿಎಸ್‌ಪಿಯಲ್ಲಿ ೭ ಬೋರ್‌ವೆಲ್‌ಗಳು ಅನುಮೋದನೆಗೊಂಡಿದ್ದು, ಕಳೆದ ಮಾರ್ಚ್‌ನಲ್ಲಿ ಫಲಾನುಭವಿ ರೈತರಿಗೆ ಸೌಲಭ್ಯ ಕಲ್ಪಿಸಲಾಗಿದೆ. ೨೦೨೫-೨೬ ರಲ್ಲಿ ಒಟ್ಟು ೩೦ ಫಲಾನುಭವಿಗಳಿಗೆ ತಲಾ ೫ ಲಕ್ಷ ರೂ. ವೆಚ್ಚದಲ್ಲಿ ಸೌಲಭ್ಯ ನೀಡಲಾಗಿದೆ ಎಂದರು. ಈ ಸಂದರ್ಭದಲ್ಲಿ ಸಹಾಯಕ ಇಂಜಿನಿಯರ್ ವಿಕಾಸ್ ಮತ್ತಿತರರು ಉಪಸ್ಥಿತರಿದ್ದರು.

Farmers should grow better crops with less water

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...