Home namma chikmagalur chikamagalur ಡಿಸಿಸಿ ಬ್ಯಾಂಕ್ ಚುನಾವಣಾ ವೇಳಾಪಟ್ಟಿ ಪ್ರಕಟ
chikamagalurHomeLatest Newsnamma chikmagalur

ಡಿಸಿಸಿ ಬ್ಯಾಂಕ್ ಚುನಾವಣಾ ವೇಳಾಪಟ್ಟಿ ಪ್ರಕಟ

Share
Share

ಚಿಕ್ಕಮಗಳೂರು:  ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಗಳಿಗೆ ಜನವರಿ ೧೭ ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ ವೇಳಾ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಜನವರಿ ೨ ರಿಂದ ನಾಮಪತ್ರಗಳ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದ್ದು, ಜ.೯ ನಾಮಪತ್ರ ಸಲ್ಲಿಕೆಗೆ ಅಂತಿಮ ದಿನವಾಗಿದೆ. ಪ್ರತೀ ದಿನ ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ ನಾಮಪತ್ರಗಳನ್ನು ಸಲ್ಲಿಸಬಹುದು.

ಜನವರಿ ೧೦ ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಅನಂತರ ಸಿಂಧುತ್ವ ಹೊಂದಿರುವ ನಾಮ ನಿರ್ದೇಶಿತ ಅಭ್ಯರ್ಥಿಗಳ ಪಟ್ಟಿಯನ್ನು ಚುನಾವಣಾಧಿಕಾರಿಗಳು ಬ್ಯಾಂಕ್‌ನ ನೂತನ ಆಡಳಿತ ಕಚೇರಿಯ ಕೊಠಡಿ ಸಂಖ್ಯೆ ೧ ರಲ್ಲಿರುವ ಸೂಚನಾ ಫಲಕದಲ್ಲಿ ಪ್ರಕಟಿಲಿದ್ದಾರೆ.

ಜನವರಿ ೧೧ ರಂದು (ಬೆಳಿಗ್ಗೆ ೧೧ ಗಂಟೆಯಿಂದ ಮಧ್ಯಾಹ್ನ ೨ ಗಂಟೆಯವರೆಗೆ) ಉಮೇದುವಾರರು ನಾಮಪತ್ರಗಳನ್ನು ಹಿಂಪಡೆಯಲು ಕಡೆಯ ದಿನವಾಗಿದೆ. ಅಂದೇ ಮಧ್ಯಾಹ್ನ ೨ ಗಂಟೆಯ ಬಳಿಕ ಚುನಾವಣಾಧಿಕಾರಿಗಳು ಕಣದಲ್ಲಿ ಉಳಿದಿರುವ ಅಭ್ಯರ್ಥಿಗಳ ಪಟ್ಟಿಯನ್ನು ಸೂಚನಾ ಫಲಕದಲ್ಲಿ ಪ್ರಕಟಿಸಲಿದ್ದಾರೆ. ಅಗತ್ಯವಿದ್ದಲ್ಲಿ ಅಂದು ಮಧ್ಯಾಹ್ನ ೩ ಗಂಟೆಯ ಬಳಿಕ ಚುನಾವಣಾಧಿಕಾರಿಗಳಿಂದ ಅಭ್ಯರ್ಥಿಗಳಿಗೆ ಚಿಹ್ನೆಗಳ ಹಂಚಿಕೆ ನಡೆಯಲಿದ್ದು, ಅನಂತರ ಸೂಚನಾ ಫಲಕದಲ್ಲಿ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಚಿಹ್ನೆಯೊಂದಿಗೆ ಪ್ರಕಟಿಸಲಾಗುವುದು.

ಜನವರಿ ೧೭ ರಂದು ಬೆಳಿಗ್ಗೆ ೯ ರಿಂದ ಸಂಜೆ ೪ ಗಂಟೆಯವರೆಗೆ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ನೂತನ ಕಟ್ಟಡದಲ್ಲಿ ಮತದಾನ ನಡೆಯಲಿದ್ದು, ಮತದಾನ ಮುಕ್ತಾಯವಾದ ಬಳಿಕ ಅದೇ ಸ್ಥಳದಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಎಣಿಕೆ ಕಾರ್ಯ ಪೂರ್ಣಗೊಂಡ ಬಳಿಕ ಚುನಾವಣಾ ಫಲಿತಾಂಶವನ್ನು ಘೋಷಣೆ ಮಾಡಲಾಗುವುದು ಎಂದು ಚುನಾವಣಾಧಿಕಾರಿಗಳಾದ ಉಪವಿಭಾಗಾಧಿಕಾರಿಗಳು ತಿಳಿಸಿದ್ದಾರೆ.

DCC Bank election schedule announced

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...