Home namma chikmagalur chikamagalur ವರದಕ್ಷಿಣೆಗಾಗಿ ತನ್ನ ಪತ್ನಿಯ ಮೇಲೆ ಮೃಗೀಯವಾಗಿ ಹಲ್ಲೆ
chikamagalurCrime NewsHomeLatest Newsnamma chikmagalur

ವರದಕ್ಷಿಣೆಗಾಗಿ ತನ್ನ ಪತ್ನಿಯ ಮೇಲೆ ಮೃಗೀಯವಾಗಿ ಹಲ್ಲೆ

Share
Share

ಚಿಕ್ಕಮಗಳೂರು: ಮಾನವೀಯತೆ ಮರೆತ ಪತಿಯೊಬ್ಬ ತನ್ನ ತಂದೆ ಹಾಗೂ ಸಹೋದರನೊಂದಿಗೆ ಸೇರಿ ವರದಕ್ಷಿಣೆಗಾಗಿ ತನ್ನ ಪತ್ನಿಯ ಮೇಲೆ ಮೃಗೀಯವಾಗಿ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ನಂದಿಹೊಸಳ್ಳಿ ಗ್ರಾಮದಲ್ಲಿ ನಡೆದಿದೆ.

ತಾರ ಎಂಬ ನೊಂದ ಮಹಿಳೆ ತನ್ನ ಪತಿ ತಿಮ್ಮಪ್ಪನಿಂದ ಕ್ರೂರ ಹಿಂಸೆಗೆ ಒಳಗಾದವರು ಪತಿಯ ಅಮಾನವೀಯ ಹೊಡೆತಕ್ಕೆ ಇಡೀ ದೇಹವೇ ಕಪ್ಪು ಬಣ್ಣಕ್ಕೆ ತಿರುಗಿದೆ. ಹತ್ತು ವರ್ಷಗಳ ಹಿಂದೆ ಅಂದರೆ 2014ರಲ್ಲಿ ತಿಮ್ಮಪ್ಪ ಮತ್ತು ತಾರ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು.

ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಸಂಸಾರ ಚೆನ್ನಾಗಿಯೇ ಸಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ತಿಮ್ಮಪ್ಪ ತನ್ನ ತಂದೆ ಮತ್ತು ಅಣ್ಣನ ಮಾತು ಕೇಳಿಕೊಂಡು ಪತ್ನಿಯ ಬಳಿ ಹಣಕ್ಕಾಗಿ ಪೀಡಿಸಲು ಶುರುಮಾಡಿದ್ದ ಎನ್ನಲಾಗಿದೆ. ಬೇರೆ ಮದುವೆಯಾಗಬೇಕು, ನಿನಗೆ ಬರೀ ಹೆಣ್ಣು ಮಕ್ಕಳೇ ಹುಟ್ಟುತ್ತಿದ್ದಾರೆ, ಹೀಗಾಗಿ ನೀನು ತವರಿಗೆ ಹೋಗಿ ಹಣ ತರಬೇಕು ಅಥವಾ ಮನೆ ಬಿಟ್ಟು ತೊಲಗಬೇಕು ಎಂದು ಪತ್ನಿ ತಾರಾಗೆ ತಿಮ್ಮಪ್ಪ ನಿತ್ಯ ದೈಹಿಕ ಮತ್ತು ಮಾನಸಿಕ ಕಿರುಕುಳ ನೀಡುತ್ತಿದ್ದನು.

ಇಷ್ಟಕ್ಕೆ ನಿಲ್ಲದ ಈ ಪಾಪಿ ಪತಿ, ಇತ್ತೀಚೆಗೆ ಪತ್ನಿಯನ್ನು ವಿವಸ್ತ್ರಗೊಳಿಸಿ ಮನಸೋ ಇಚ್ಛೆ ಹಲ್ಲೆ ನಡೆಸಿ ಮನೆಯಲ್ಲೇ ಕೂಡಿ ಹಾಕಿದ್ದನು. ಕುಡಿತದ ಅಮಲಿನಲ್ಲಿ ಪತ್ನಿಯ ಇಡೀ ದೇಹ ರಕ್ತ ಹೆಪ್ಪುಗಟ್ಟಿ ಕಪ್ಪಾಗುವಂತೆ ದೌರ್ಜನ್ಯ ಎಸಗಿದ್ದಾನೆ. ಈ ನರಕ ಯಾತನೆಯಿಂದ ಹೇಗೋ ತಪ್ಪಿಸಿಕೊಂಡ ತಾರ, ಮನೆಯ ಹಿಂಬಾಗಿಲಿನಿಂದ ಓಡಿ ಹೋಗಿ ದಾರಿಯಲ್ಲಿ ಸಿಕ್ಕ ಬಟ್ಟೆಯೊಂದನ್ನು ಮೈಗೆ ಸುತ್ತಿಕೊಂಡು ಪ್ರಾಣ ಉಳಿಸಿಕೊಂಡಿದ್ದಾರೆ.

ಸದ್ಯ ನೊಂದ ಮಹಿಳೆ ತಾರ ಲಿಂಗದಹಳ್ಳಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪತಿ ತಿಮ್ಮಪ್ಪ ಸೇರಿದಂತೆ ಕಿರುಕುಳ ನೀಡಿದ ಒಟ್ಟು ಎಂಟು ಜನರ ವಿರುದ್ಧ ಪ್ರಕರಣ ದಾಖಲಾಗಿದೆ. ಪ್ರೀತಿಸಿ ಮದುವೆಯಾಗಿ ಮಕ್ಕಳಾದ ಮೇಲೆ ಹಣದ ಆಸೆಗಾಗಿ ಪತ್ನಿಯನ್ನೇ ಈ ಮಟ್ಟಕ್ಕೆ ಹಿಂಸಿಸಿರುವ ತಿಮ್ಮಪ್ಪನ ಕ್ರೌರ್ಯ ಕಂಡು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವರದಕ್ಷಿಣೆಯೆಂಬ ಪಿಡುಗು ಮತ್ತು ಗಂಡು ಮಗುವಿನ ವ್ಯಾಮೋಹವು ಸುಶಿಕ್ಷಿತ ಸಮಾಜದಲ್ಲೂ ಎಂತಹ ಕ್ರೌರ್ಯಕ್ಕೆ ಕಾರಣವಾಗಬಲ್ಲದು ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ.

Brutally assaulted his wife for dowry

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...