Home namma chikmagalur chikamagalur ಸರ್ಕಾರ ವಿಶೇಷ ಚೇತನರ ಸಾಧನೆಗೆ ಉತ್ತೇಜನ ನೀಡಲು ಕ್ರೀಡಾಕೂಟ ಆಯೋಜನೆ
chikamagalurHomeLatest Newsnamma chikmagalur

ಸರ್ಕಾರ ವಿಶೇಷ ಚೇತನರ ಸಾಧನೆಗೆ ಉತ್ತೇಜನ ನೀಡಲು ಕ್ರೀಡಾಕೂಟ ಆಯೋಜನೆ

Share
Share

ಚಿಕ್ಕಮಗಳೂರು: ವಿಶೇಷ ಚೇತನರಿಗೆ ಧೈರ್ಯ, ಆತ್ಮವಿಶ್ವಾಸ, ಸಂಕಲ್ಪ ಸಾಧನೆಗೆ ಉತ್ತೇಜನ ನೀಡಲು ಸರ್ಕಾರ ಮಹೋತ್ಸವದ ಅಥ್ಲೆಟಿಕ್ ಕ್ರೀಡಾಕೂಟವನ್ನು ಏರ್ಪಡಿಸಿದೆ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ತಿಳಿಸಿದರು.

ಅವರು ಇಂದು ನಗರದ ನೇತಾಜಿ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಶಾಲಾ ಶಿಕ್ಷಣ ಇಲಾಖೆ ಇವರುಗಳ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಮಟ್ಟದ ವಿಶೇಷಚೇತನ ಮಕ್ಕಳ ೧೪-೧೭ ವಯೋಮಾನದ ಅಥ್ಲೆಟಿಕ್ ಕ್ರೀಡಾಕೂಟದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.

ವಿಶೇಷ ಚೇತನರು ದೇವರ ಮಕ್ಕಳು, ಪ್ರಪಂಚಕ್ಕೆ ಬರುವಾಗ ಹೀಗೇ ಇರಬೇಕೆಂದು ಭಾವಿಸಿ ಯಾರೂ ಬರುವುದಿಲ್ಲ. ಸಮಾಜದ ಎಲ್ಲರೊಂದಿಗೆ ಸಮಾನವಾಗಿ ಬದುಕಬೇಕೆಂಬ ಆಸೆ ಇರುತ್ತದೆ. ಸರ್ವರೂ ಇವರನ್ನು ಪ್ರೀತಿಯಿಂದ ಕಂಡಾಗ ಮಾತ್ರ ಸಮಾನತೆ ಬೆಳೆಯುತ್ತದೆ ಎಂದರು.

ವಿಶೇಷಚೇತನರ ಜೀವನವೇ ಒಂದು ಸಂದೇಶ. ಶಾರೀರಿಕ ಸಮಸ್ಯೆ ಇರಬಹುದು ಆದರೆ, ಕನಸು ಕಾಣಲು ಮತ್ತು ಗುರಿ ಸಾಧನೆಗೆ ಯಾವುದೇ ಮಿತಿ ಇಲ್ಲ. ಭವಿಷ್ಯ ರೂಪಿಸಿಕೊಳ್ಳಲು ಈ ಕ್ರೀಡಾಕೂಟದ ಸದುಪಯೋU ಮಾಡಿಕೊಳ್ಳಬೇಕೆಂದು ಸಲಹೆ ನೀಡಿದರು.

ಕ್ರೀಡಾಕೂಟದಲ್ಲಿ ಭಾಗವಹಿಸಿದಾಗ ಹಲವು ಹೋರಾಟಗಳನ್ನು ಮಾಡಬೇಕಾಗುತ್ತದೆ. ಇದು ನಿಮ್ಮ ಭವಿಷ್ಯದ ಬದುಕಿನಲ್ಲಿ ಅತ್ಯಂತ ಪರಿಣಾಮಕಾರಿಯಾಗಿರುತ್ತದೆ ಎಂದು ಹೇಳಿದರು.

ಪ್ಯಾರಾ ಒಲಂಪಿಕ್‌ನಲ್ಲಿ ಜಿಲ್ಲೆಯವರಾದ ಶವಾದ್, ಗಿರೀಶ್ ಮತ್ತಿತರರು ಸಾಧನೆ ಮಾಡಿದ್ದಾರೆ. ಇದು ನಿಮಗೆಲ್ಲರಿಗೂ ಸ್ಪೂರ್ತಿಯಾಗಲಿ, ಸಾಧನೆ ಹಿಂದೆ ಇರುವ ಪೋಷಕರು ಮತ್ತು ಶಿಕ್ಷಕರನ್ನು ಮರೆಯಬೇಡಿ ಎಂದು ಕಿವಿಮಾತು ಹೇಳಿದರು.

ಕ್ರೀಡಾಕೂಟವನ್ನು ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೇಗೌಡ ಮಾತನಾಡಿ, ವಿಶೇಷ ಚೇತನರಿಗೆ ಅನುಕಂಪ ಬೇಡ ಅವಕಾಶ ಕೊಡಿ ಎಂಬಂತೆ ಇವರಿಗೆ ಅವಕಾಶ ಕೊಟ್ಟಾಗ ಬೇರೆಯವರಿಗಿಂತ ಉತ್ತಮವಾಗಿ ಆಟವಾಡುತ್ತೇವೆ ಎಂಬುದನ್ನು ರಾಷ್ಟ್ರೀಯ-ಅಂತರಾಷ್ಟ್ರೀಯ ಮಟ್ಟದಲ್ಲಿ ಪದಕ ಗಳಿಸಿರುವ ವಿಶೇಷಚೇತನರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಪ್ರತಿಭೆ ಯಾರೊಬ್ಬರ ಸ್ವತ್ತಲ್ಲ, ಹುಟ್ಟಿದಂದಿನಿಂದಲೇ ಬರುತ್ತದೆ. ಎಲ್ಲಾ ಮಕ್ಕಳಲ್ಲಿರುವ ಪ್ರತಿಭೆಗಳನ್ನು ಗುರ್ತಿಸುವ ಕೆಲಸವನ್ನು ಮೊದಲು ಪೋಷಕರು ಮನೆಯಲ್ಲೇ ಮಾಡಬೇಕು, ನಂತರ ಶಾಲೆಯಲ್ಲಿ ಶಿಕ್ಷಕರು ವಿಶೇಷಚೇತನರ ಆಸಕ್ತಿಗೆ ತಕ್ಕಂತೆ ಗುರುತಿಸಿ ಪ್ರೋತ್ಸಾಹಿಸುತ್ತಾರೆಂದು ಹೇಳಿದರು.

ಪ್ರಾಸ್ತಾವಿಕವಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ ಮಾತನಾಡಿ, ಸಾಮಾನ್ಯರಂತೆ ವಿಶೇಷಚೇತನರು ಸಮಾನವಾಗಿ ಕ್ರೀಡೆಯಲ್ಲಿ ಭಾಗವಹಿಸಿದಾಗ ಉತ್ಸಾಹ ಹೆಚ್ಚಾಗಿ, ಪ್ರತಿಭೆ ಹೊರಬರಲು ಸಾಧ್ಯ. ಈ ನಿಟ್ಟಿನಲ್ಲಿ ವಿಶೇಷಚೇತನ ಮಕ್ಕಳ ಆತ್ಮವಿಶ್ವಾಸ ಹೆಚ್ಚಿಸಲು ಅವರಿಗಾಗಿ ಸರ್ಕಾರ ಕ್ರೀಡಾಕೂಟ ಆಯೋಜನೆ ಮಾಡುತ್ತಿದೆ ಎಂದರು.

ವೇದಿಕೆಯಲ್ಲಿ ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕರಾದ ಮಂಜುಳ ಹುಲ್ಲಳ್ಳಿ,. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್, ಅಕ್ಷರ ದಾಸೋಹ ನಿರ್ದೇಶಕರಾ ನೀಲಕಂಠಪ್ಪ, ಫ್ರೌಢಶಾಲಾ ಜಿಲ್ಲಾ ಸಂಘದ ಅಧ್ಯಕ್ಷ ಚಂದ್ರಪ್ಪ, ಕಾರ್ಯದರ್ಶಿ ರಾಜ್‌ಕುಮಾರ್, ಶಂಕರೇಗೌಡ, ಕುಮಾರಸ್ವಾಮಿ, ಪರಮೇಶ್, ಉಮೇಶ್, ಪ್ರವೀಣ್ ಪಿಂಟೋ, ದೈಹಿಕ ಶಿಕ್ಷಕರು ಉಪಸ್ಥಿತರಿದ್ದರು. ದೈಹಿಕ ಶಿಕ್ಷಕರ ಸಂಯೋಜಕರಾದ ಪಾಲಾಕ್ಷ ಸ್ವಾಗತಿಸಿ ವಂದಿಸಿದರು.

Government organizes sports meet to encourage achievements of specially gifted people

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...