Home namma chikmagalur chikamagalur ಸರ್ಕಾರಿ ಶಾಲೆಗಳ ಮುಚ್ಚಲು ಮುಂದಾಗಿರುವ ಸರ್ಕಾರ ವಿರುದ್ಧ ಪ್ರತಿಭಟನೆ
chikamagalurHomeLatest Newsnamma chikmagalur

ಸರ್ಕಾರಿ ಶಾಲೆಗಳ ಮುಚ್ಚಲು ಮುಂದಾಗಿರುವ ಸರ್ಕಾರ ವಿರುದ್ಧ ಪ್ರತಿಭಟನೆ

Share
Share

ಚಿಕ್ಕಮಗಳೂರು: ಗ್ರಾಮಗಳಿಗೆ ಸಾಮಾಜಿಕ, ಸಾಂಸ್ಕೃತಿಕ ಅಸ್ತಿತ್ವದ ಭಾಗವಾಗಿರುವ ಸರ್ಕಾರಿ ಶಾಲೆಗಳನ್ನು ಕೆಪಿಎಸ್-ಮ್ಯಾಗ್ನೆಟ್ ಯೋಜನೆಯ ಹೆಸರಿನಲ್ಲಿ ಶಿಕ್ಷಣ ಹಕ್ಕು ಕಾಯ್ದೆ ವಿರುದ್ಧವಾಗಿ ಸರ್ಕಾರ ಮುಚ್ಚಲು ಮುಂದಾಗಿರುವುದನ್ನು ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ರಾಜ್ಯ ಸಮಿತಿ ಖಜಾಂಚಿ ಸುಭಾಷ್ ಖಂಡಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಒಂದೇ ಒಂದು ಸರ್ಕಾರಿ ಶಾಲೆಯನ್ನು ಮುಚ್ಚುವುದಿಲ್ಲ ಎಂದು ಸ್ಪಷ್ಟನೆ ನೀಡಿ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರು ಇದೇ ಮಾತನ್ನು ಪುನರುಚ್ಚರಿಸಿದ್ದಾರೆ, ಈ ಹೇಳಿಕೆಯ ಬಗ್ಗೆ ಸತ್ಯಾಸತ್ಯತೆಯನ್ನು ಸರ್ಕಾರದ ದಾಖಲೆಗಳ ಆಧಾರದಲ್ಲಿ ಪರಿಶೀಲಿಸಿ ವಾಸ್ತವಾಂಶವನ್ನು ಜನರ ಮುಂದಿಡಲು ರಾಜ್ಯಾದ್ಯಂತ ಹೋರಾಟ ರೂಪಿಸಲು ನಿರ್ಧರಿಸಲಾಗಿದೆ ಎಂದರು.

ಕೆಪಿಎಸ್-ಮ್ಯಾಗ್ನೆಟ್ ಯೋಜನೆ ಹೆಸರಿನಲ್ಲಿ ಸರ್ಕಾರ ೪೦ ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚಲು ಮುಂದಾಗಿದೆ. ಗ್ರಾ.ಪಂ ಗೆ ಒಂದರಂತೆ ೬ ಸಾವಿರ ಕೆಪಿಎಸ್-ಮ್ಯಾಗ್ನೆಟ್ ಶಾಲೆಯನ್ನು ಸ್ಥಾಪಿಸುವ ಗುರಿ ಹೊಂದಿದೆ. ಮೊದಲ ಹಂತದಲ್ಲಿ ೮೦೦ ಶಾಲೆಗಳನ್ನು ಗುರ್ತಿಸಲಾಗಿದ್ದು, ಗಣಿ ಬಾಧಿತ ಜಿಲ್ಲೆಗಳಲ್ಲಿ ೧೦೦, ಕರ್ನಾಟಕದ ಜಿಲ್ಲೆಗಳಲ್ಲಿ ೨೦೦ ಹಾಗೂ ಇತರೆ ಭಾಗಗಳಲ್ಲಿ ೫೦೦ ಶಾಲೆಗಳನ್ನು ಗುರ್ತಿಸಿ ಸುತ್ತೋಲೆ ಹೊರಡಿಸಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ೧೦೦೨ ಸರ್ಕಾರಿ ಶಾಲೆಗಳನ್ನು ಮುಚ್ಚಲು ಪಟ್ಟಿ ತಯಾರಿಸಲಾಗಿದ್ದು, ಚಿಕ್ಕಮಗಳೂರು ತಾಲ್ಲೂಕು ಒಂದರಲ್ಲೇ ೨೩೭ ಸರ್ಕಾರಿ ಶಾಲೆಗಳನ್ನು ವಿಲೀನದ ಹೆಸರಿನಲ್ಲಿ ಮುಚ್ಚಲು ಪಟ್ಟಿಮಾಡಲಾಗಿದೆ. ಉಳಿದ ತಾಲ್ಲೂಕುಗಳಲ್ಲೂ ನೂರಾರು ಶಾಲೆಗಳನ್ನು ಮುಚ್ಚಲು ತಯಾರಿ ನಡೆಸುತ್ತಿದ್ದಾರೆಂದು ದೂರಿದರು.

ವಿಲೀನದ ನೆಪದಲ್ಲಿ ಮುಚ್ಚುವ ಶಾಲಾ ಕಟ್ಟಡಗಳನ್ನು ಅನ್ಯ ಉದ್ದೇಶಕ್ಕೆ ಬಳಸಲು ಸರ್ಕಾರ ಮುಂದಾಗಿದೆ. ಸ್ವಸಹಾಯ ಸಂಘಗಳಿಗೆ ಈ ಕಟ್ಟಡಗಳನ್ನು ನೀಡಲು ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧುಬಂಗಾರಪ್ಪ ಅವರು ಹೇಳಿದ್ದು, ಶಾಲೆ ಮುಚ್ಚುವುದಿಲ್ಲ ಎಂದಮೇಲೆ ಅನ್ಯ ಉದ್ದೇಶಕ್ಕೆ ಬಳಸುವ ಔಚಿತ್ಯವೇನು ಎಂದು ಪ್ರಶ್ನಿಸಿದರು.

ದೇಶದಲ್ಲಿ ಶಿಕ್ಷಣಕ್ಕಾಗಿ ಧ್ವನಿ ಎತ್ತಿದ ಮಹಾನ್ ನವೋದಯ ಚಿಂತಕರಾದ ಈಶ್ವರ್ ಚಂದ್ರ ವಿದ್ಯಾಸಾಗರ್, ಜ್ಯೋತಿರಾವ್ ಫುಲೆ, ಸಾವಿತ್ರಿ ಬಾಯಿ ಫುಲೆ, ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿಗಳಾದ ಭಗತ್ ಸಿಂಗ್, ನೇತಾಜಿ ಸುಭಾಷ್ ಚಂದ್ರಬೋಸ್, ನಾಡಿನ ಹೆಮ್ಮೆಯ ಸಾಹಿತಿಗಳಾದ ಕುವೆಂಪು, ಕುದ್ಮುಲ್ ರಂಗರಾವ್, ಪಂಡಿತ್ ತಾರಾನಾಥ್ ಮುಂತಾದ ಮಹನೀಯರ ಆಶಯಗಳಿಗೆ ವಿರುದ್ಧವಾಗಿ ಸರ್ಕಾರ ಶಿಕ್ಷಣದ ಮೇಲೆ ಪ್ರಹಾರ ನಡೆಸಿದೆ ಎಂದು ಆರೋಪಿಸಿದರು.

ಇದರ ವಿರುದ್ಧವಾಗಿ ಪ್ರಬಲ ಹೋರಾಟವನ್ನು ರೂಪಿಸಲು ವಿದ್ಯಾರ್ಥಿಗಳು, ಪಾಲಕರು, ಶಿಕ್ಷಕರು, ಶಿಕ್ಷಣ ಪ್ರೇಮಿಗಳು ಸರ್ಕಾರಿ ಶಾಲೆಗಳನ್ನು ಉಳಿಸುವ ಹೋರಾಟಕ್ಕೆ ಬೆಂಬಲಿಸಬೇಕೆಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ಎಐಡಿಎಸ್‌ಓ ಸಂಚಾಲಕಿ ಚೈತ್ರ, ಸಹಸಂಚಾಲಕಿ ಶುಷ್ಮಾ ಉಪಸ್ಥಿತರಿದ್ದರು.

Protest against the government’s move to close government schools

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...