Home namma chikmagalur chikamagalur ಜಿಲ್ಲೆಯಲ್ಲಿ ಪುನರ್ವಸತಿ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಪುನರ್ವಸತಿ ಕಲ್ಪಿಸುವಲ್ಲಿ ರಾಜ್ಯ ಸರ್ಕಾರ ವಿಫಲ

Share
Share
ಚಿಕ್ಕಮಗಳೂರು: ಓಲೈಕೆ ರಾಜಕಾರಣಕ್ಕಾಗಿ ಬೆಂಗಳೂರಿನ ಕೋಗಿಲು ಪ್ರಕರಣದಲ್ಲಿ ಅನಾಮದೇಯರಿಗೆ ಮನೆ  ನೀಡಲು ಮುಂದಾಗಿರುವ ರಾಜ್ಯ ಸರ್ಕಾರ, ಜಿಲ್ಲೆಯಲ್ಲಿ ಅತಿವೃಷ್ಟಿ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಬಿಜೆಪಿ ಆರೋಪಿಸುತ್ತದೆ ಎಂದು ಪಕ್ಷದ ಜಿಲ್ಲಾ ವಕ್ತಾರ ಹಿರೇಮಗಳೂರು ಪುಟ್ಟಸ್ವಾಮಿ ತಿಳಿಸಿದ್ದಾರೆ.
ರಾಜಧಾನಿ ಬೆಂಗಳೂರಿನ ಸರ್ಕಾರಿ ಜಾಗದಲ್ಲಿ ಶೆಡ್ಡುಗಳನ್ನು ಅಕ್ರಮವಾಗಿ ನಿರ್ಮಿಸಿಕೊಂಡಿದ್ದನ್ನು ತೆರವುಗೊಳಿಸಿದ್ದಕ್ಕೆ ಪರ್ಯಾಯವಾಗಿ ಅಲ್ಲಿನ ಅನಾಮದೇಯರಿಗೆ ಮನೆಗಳನ್ನು ನೀಡಲು ಮುಂದಾಗಿರುವುದು ಓಲೈಕೆ ರಾಜಕಾರಣಕ್ಕೆ ಸಾಕ್ಷಿಯಾಗಿದೆ ಎಂದು ಅವರು ಹೇಳಿಕೆಯಲ್ಲಿ ರಾಜ್ಯ ಸರ್ಕಾರದ ಕ್ರಮವನ್ನು ಖಂಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ವಿವಿಧ ಕಡೆಗಳಲ್ಲಿ ಅತಿವೃಷ್ಟಿಯಿಂದ ಕಳೆದ ವರ್ಷ ಒಂದರಲ್ಲೇ ಒಟ್ಟು ೩೭೭ ಮನೆಗಳು ಹಾನಿಗೆ ಒಳಗಾಗಿದ್ದು, ೧೭೮ ಮನೆಗಳು ಭಾಗಶಃ ಹಾನಿಗೊಂಡಿದ್ದರೆ, ೧೯೯ ಮನೆಗಳು ಸಂಪೂರ್ಣವಾಗಿ ಹಾನಿಗೊಂಡಿವೆ. ನೆಪಮಾತ್ರಕ್ಕೆ ಸಣ್ಣ ಪ್ರಮಾಣದ ಪರಿಹಾರ ನೀಡಿ ಕೈ ತೊಳೆದುಕೊಂಡಿರುವ ರಾಜ್ಯ ಸರ್ಕಾರ ಪೂರ್ಣ ಪ್ರಮಾಣದಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ಮನೆ ನಿರ್ಮಿಸಿಕೊಡಲು ಸರ್ಕಾರ ಯಾವುದೇ ಪ್ರಯತ್ನ ನಡೆಸದ ಪರಿಣಾಮ ಸಂತ್ರಸ್ತರು ಬೀದಿ ಪಾಲಾಗಿದ್ದಾರೆ ಎಂದು ಹೇಳಿದ್ದಾರೆ.
ಅದೇ ರೀತಿಯಲ್ಲಿ ೨೦೨೩ ಮತ್ತು ೨೦೨೪ರಲ್ಲಿ ಜಿಲ್ಲೆಯ ಮಲೆನಾಡು ಭಾಗದಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡ ಅಂದಾಜು ೬೦೦ಕ್ಕೂ ಹೆಚ್ಚಿನ ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸಲಾಗಿಲ್ಲ. ಚಿಕ್ಕಮಗಳೂರು ನಗರದ ತಗ್ಗು ಪ್ರದೇಶಗಳಲ್ಲಿ ಮನೆ ಹಾನಿಗೊಂಡ ಸಂತ್ರಸ್ತರಿಗೂ ಪರ್ಯಾಯ ವ್ಯವಸ್ಥೆಯತ್ತ ರಾಜ್ಯ ಸರ್ಕಾರ ಗಮನಹರಿಸಿಲ್ಲ ಎಂದು ಆರೋಪಿಸಿದ್ದಾರೆ.
ಶೃಂಗೇರಿ ಪಟ್ಟಣದ ಗಾಂಧಿ ಮೈದಾನದಲ್ಲಿ ಹೊಟ್ಟೆ ಪಾಡಿಗಾಗಿ ದಶಕಗಳಿಂದ ಅವಲಂಬಿಸಿಕೊಂಡಿದ್ದ ೨೬ ಅಂಗಡಿಗಳನ್ನು ತೆರವುಗೊಳಿಸಿದ್ದು, ಅವಲಂಬಿತ ಕುಟುಂಬಗಳು ಬೀದಿಗೆ ಬಿದ್ದಿವೆ. ಆದರೆ, ರಾಜ್ಯ ಸರ್ಕಾರ ಅಂಗಡಿ ಕಳೆದುಕೊಂಡವರಿಗಾಗಿ ಪರ್ಯಾಯ ವ್ಯವಸ್ಥೆ ಮಾಡಿಲ್ಲ ಎಂದು ಹೇಳಿದ್ದಾರೆ.
ಕಳೆದ ಎರಡು ವರ್ಷಗಳಿಂದ ನಿರಾಶ್ರಿತರಿಗೆ ಒಂದೇ ಒಂದು ಮನೆಯನ್ನು ನೀಡದ ರಾಜ್ಯ ಸರ್ಕಾರ ಮುಸ್ಲಿಂ ಕೋಮಿನವರು ಎಂಬ ಕಾರಣಕ್ಕಾಗಿ ಕೋಗಿಲು ಪ್ರಕರಣದಲ್ಲಿ ಪರ್ಯಾಯ ವ್ಯವಸ್ಥೆಯಾಗಿ ಮನೆಗಳನ್ನು ನೀಡಲು ಮುಂದಾಗಿರುವ ಕ್ರಮವನ್ನು ಜಿಲ್ಲಾ ಬಿಜೆಪಿ ಖಂಡಿಸುತ್ತದೆ ಎಂದಿದ್ದಾರೆ.
ಕೋಗಿಲು ಪ್ರಕರಣದಲ್ಲಿ ಎಐಸಿಸಿ ಪ್ರಧಾನ ಕಾರ್ಯದಲ್ಲಿ ಕೇರಳದ ವೇಣುಗೋಪಾಲ್ ಅವರ ಒತ್ತಡಕ್ಕೆ ಮಣಿದಿರುವ ರಾಜ್ಯದ ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಹೇಳಿದರೆ ರಾಜ್ಯವನ್ನು ಬೇಕಾದರೆ ಸಿಎಂ, ಡಿಸಿಎಂ ಬರೆದುಕೊಡುತ್ತಾರೆ ಎಂದು ಛೇಡಿಸಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕಾಗಿ ಕಿತ್ತಾಡುತ್ತಿರುವ ಸಿಎಂ, ಡಿಸಿಎಂ ರಾಜ್ಯದ ಆಡಳಿತವನ್ನು ಮೈ ಮರೆತಿದ್ದು, ಆಡಳಿತ ವ್ಯವಸ್ಥೆ ಹದಗೆಟ್ಟಿದೆ. ಕಾನೂನು ಸುವ್ಯವಸ್ಥೆ ಹಳಿ ತಪ್ಪಿದೆ. ಬಳ್ಳಾರಿ ಪ್ರಕರಣ ಅದಕ್ಕೆ ಸಾಕ್ಷಿಯಾಗಿದೆ. ರಾಜ್ಯದಲ್ಲಿ ಡ್ರಗ್ಸ್ ದಂಧೆ ವ್ಯಾಪಕವಾಗಿದೆ. ಸಚಿವರ ಆಪ್ತರೆ ಭಾಗಿಯಾಗಿದ್ದಾರೆ, ಭ್ರಷ್ಟಾಚಾರ ಮಿತಿಮೀರಿದ್ದು, ಸಾಮಾನ್ಯ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ದೂರಿದ್ದಾರೆ.
State government fails to provide rehabilitation in the district
Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...