Home namma chikmagalur chikamagalur ಭೂಮಿಕಾ ಟಿವಿಯಿಂದ ಅರಣ್ಯ ಸಂರಕ್ಷಣೆ ಮಹತ್ವದ ಅರಿವು
chikamagalurHomeLatest Newsnamma chikmagalur

ಭೂಮಿಕಾ ಟಿವಿಯಿಂದ ಅರಣ್ಯ ಸಂರಕ್ಷಣೆ ಮಹತ್ವದ ಅರಿವು

Share
Share

ಚಿಕ್ಕಮಗಳೂರು: ನಗರದ ಭೂಮಿಕ ಎಂಟರ್ಟೈನರ್ ವತಿಯಿಂದ ಜ.5 ರಿಂದ 12ರ ವರೆಗೆ ಸ್ವಾಮಿ ವಿವೇಕಾನಂದ ಹಾಗೂ ನೇತಾಜಿ ಸುಭಾಷ್ ಚಂದ್ರ ಬೋಸ್ ಜಯಂತೋತ್ಸವ ಮತ್ತು ಭೂಮಿಕಾ ಟಿವಿ ವಾರ್ಷಿಕೋತ್ಸವ ಅಂಗವಾಗಿ ಅರಣ್ಯ ಸಂರಕ್ಷಣೆ ಮಹತ್ವದ ಅರಿವು ಮೂಡಿಸಲು ವಿವಿಧ ಸಾಂಸ್ಕೃತಿಕ ಸ್ಪರ್ಧೆ, ಆರೋಗ್ಯ ಮತ್ತು ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದು ಭೂಮಿಕಾ ಟಿ.ವಿ. ಸಂಸ್ಥಾಪಕ ಅಧ್ಯಕ್ಷ ಅನಿಲ್ ಆನಂದ್ ತಿಳಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.5 ರಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣಾ, ಉಚಿತ ಕನ್ನಡಕ ಹಾಗೂ ಔಷಧಿ ವಿತರಣೆ, ರಕ್ತದಾನ, ದೇಹದಾನ, ನೇತ್ರದಾನ ನೋಂದಣಿ ಶಿಬಿರ ಹಮ್ಮಿಕೊಳ್ಳಲಾಗಿದೆ ಎಂದರು.

ಜ.6 ರಂದು ಅಂಬೇಡ್ಕರ್ ಭವನದಲ್ಲಿ ಅಂಗನವಾಡಿ ಮತ್ತು ಎಲ್‌ಕೆಜಿ ಮಕ್ಕಳಿಗೆ ಅರಣ್ಯ ಸಂರಕ್ಷಣೆ ಬಗ್ಗೆ ವೇಷಭೂಷಣ ಸ್ಪರ್ಧೆ, ಹಿರಿಯ ನಾಗರಿಕರಿಗೆ ಮನೋರಂಜನಾ ಕ್ರೀಡೆ ಹಾಗೂ ಗೀತಾ ಗಾಯನ ಸ್ಪರ್ಧೆ ನಡೆಯಲಿದೆ ಎಂದರು.

ಜ.7 ರಂದು ಆಜಾದ್ ಪಾರ್ಕ್ ವೃತ್ತದಲ್ಲಿ ಪರಿಸರ ಸಂರಕ್ಷಣೆ ಕುರಿತು ಬೀದಿ ನಾಟಕ, ಸ್ವಾತಂತ್ರ್ಯ ಹೋರಾಟಗಾರರ ಸ್ಮಾರಕದಲ್ಲಿ ಸರ್ಕಾರಿ ಹಾಗೂ ಸರ್ಕಾರೇತರ ಇಲಾಖೆ ಸಿಬ್ಬಂದಿಗಳಿಗೆ, ಶಿಕ್ಷಕರಿಗೆ, ಪರಿಸರ ಗೀತೆ, ಶಾಲೆ ಕಾಲೇಜು ವಿದ್ಯಾರ್ಥಿಗಳಿಗೆ ಅರಣ್ಯ ಸಂರಕ್ಷಣೆ ಕುರಿತು ಕಿರುನಾಟಕ ಆಯೋಜಿಸಲಾಗಿದೆ ಎಂದರು.

ಜ.8ರಂದು ಶ್ರೀರಾಮ ಗೆಸ್ಟ್ ಹೌಸ್ ಜಯನಗರದಲ್ಲಿ ಸಂಘ ಸಂಸ್ಥೆಗಳಿಗೆ ಅರಣ್ಯ ಸಂರಕ್ಷಣೆ ಬಗ್ಗೆ ವಸ್ತ್ರವಿನ್ಯಾಸ ಸ್ಪರ್ಧೆ, ಜ.9 ರಂದು ರತ್ನಗಿರಿ ಬೋರೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸ್ಥಳದಲ್ಲಿಯೇ ಚಿತ್ರ ಬರೆಯುವ ಸ್ಪರ್ಧೆ, ಪ್ರಬಂಧ ಹಾಗೂ ರಸಪ್ರಶ್ನೆ, ನಾಗರಿಕರಿಗೆ ಪದಬಂಧ ಸ್ಪರ್ಧೆ ನಡೆಯಲಿದೆ ಎಂದರು.

ಜ.10 ರಂದು ನಗರಸಭೆ ಆವರಣದಲ್ಲಿ ನಾಗರಿಕರಿಗೆ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಗಿಡ ನೆಡುವ ಕಾರ್ಯಕ್ರಮ. ವನದೇವಿ ಅಲಂಕಾರ ಸ್ಪರ್ಧೆ, ಜ.11 ರಂದು ಪಟಾಕಿ ಮೈದಾನದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ, ನಾಗರಿಕರಿಗೆ ಗಾಳಿಪಟ ಸ್ಪರ್ಧೆ, ಜ.12 ರಂದು ಕುವೆಂಪು ಕಲಾ ಮಂದಿರದಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಸಂಗೀತ ಹಾಗೂ ನೃತ್ಯಸ್ಪರ್ಧೆ, ಸಂಜೆ 5-30ಕ್ಕೆ ಸಮಾರೋಪ ಸಮಾರಂಭ ಮತ್ತು ಬಹುಮಾನ ವಿತರಣೆ ಕಾರ್ಯಕ್ರಮ ನಡೆಯಲಿದೆ ಎಂದು ತಿಳಿಸಿದರು.

ಪರಿಸರ ಸಂರಕ್ಷಿಸುವ ನಿಟ್ಟಿನಲ್ಲಿ ಹಲವಾರು ಕಾರ್ಯಕ್ರಮಗಳನ್ನು ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳು, ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ ಅವರು, ಹೆಚ್ಚಿನ ಮಾಹಿತಿಗಾಗಿ ಹಾಗೂ ಹೆಸರು ನೊಂದಾಯಿಸಲು ೯೪೮೦೦೦೧೦೦೯ ಮತ್ತು ೦೮೨೬೨-೨೦೦೪೦೦ ಸಂಪರ್ಕಿಸಬಹುದಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಗುರುಮೂರ್ತಿ ನಾಡಿಗ್, ಅಕ್ಷಯ್ ಕುಮಾರ್, ತಿಲಕ್ ದತ್, ಮಲ್ಲೇಶ್ ಗೌಡ, ರಾಜಶೇಖರ್, ಪುನೀತ್, ರಘು ಮತ್ತಾವರ ಇದ್ದರು.

Awareness of the importance of forest conservation from Bhumika TV

Share

Leave a comment

Leave a Reply

Your email address will not be published. Required fields are marked *

Don't Miss

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಮೃತಪಟ್ಟಿರುವ ಘಟನೆ ನರಸಿಂಹರಾಜಪುರ ತಾಲೂಕಿನ ಗದ್ದೆಮನೆ ಕಾನೂರು ಗ್ರಾಮದಲ್ಲಿ ನಡೆದಿದೆ....

ಜಿಲ್ಲೆಯಲ್ಲಿ ಮಂತ್ರಿಯಾಗಲಿಲ್ಲ ರಗಳೆ ಬಿಟ್ಟಿಲ್ಲ

ಚಿಕ್ಕಮಗಳೂರು; ಮದುವೆ ಆಗಲಿಲ್ಲ, ಹುಚ್ಚು ಬಿಡಲಿಲ್ಲ ಎಂಬ ಸ್ಥಿತಿ ಮಂತ್ರಿ ಆಗಲಿಲ್ಲ, ಓಡಾಡುವುದು ತಪ್ಪಲಿಲ್ಲ.ಎಂಬ ದುಸ್ಥಿತಿ ಕಾಂಗ್ರೆಸ್ ಚುನಾಯಿತ ಪ್ರತಿನಿಧಿಗಳದ್ದು. ಜಿಲ್ಲೆಗೆ ಯಾವುದೇ ಕಾರಣಕ್ಕೂ ಮಂತ್ರಿಗಿರಿ ಸಿಗುವುದಿಲ್ಲ ಎಂಬುದಕ್ಕೆ ಕಾರಣ ನೀಡಿ...

Related Articles

ಪ್ರತ್ಯೇಕ ಭೀಕರ ರಸ್ತೆ ಅಪಘಾತ-9 ಕ್ಕೂ ಹೆಚ್ಚು ಮಂದಿ ಗಾಯ

ಚಿಕ್ಕಮಗಳೂರು:  ಜಿಲ್ಲೆಯ ವಿವಿಧೆಡೆ ಸಂಭವಿಸಿದ ಮೂರು ಪ್ರತ್ಯೇಕ ಭೀಕರ ರಸ್ತೆ ಅಪಘಾತಗಳಲ್ಲಿ ಶಾಲಾ ವಿದ್ಯಾರ್ಥಿನಿ ಹಾಗೂ...

ಆಗಸ್ಟ್ 21ರಿಂದ 25ರವರೆಗೆ ವಿಶ್ವ ಬಂಧುತ್ವದ ರಕ್ತದಾನ ಮಹಾ ಅಭಿಯಾನ

ಚಿಕ್ಕಮಗಳೂರು: ಬ್ರಹ್ಮಾಕುಮಾರೀಸ್ ಸಂಸ್ಥೆಯ ಪೂರ್ವ ಮುಖ್ಯ ಆಡಳಿತಾಧಿಕಾರಿಣಿ ರಾಜಯೋಗಿನಿ ಡಾ. ದಾದೀ ಪ್ರಕಾಶಮಣೀಜೀಯವರ 19ನೇ ಪುಣ್ಯಸ್ಮೃತಿ...

ಆಗಸ್ಟ್ 25ರಂದು ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಚಿಕ್ಕಮಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಗಸ್ಟ್ 25ರಂದು ರಾಜ್ಯದ...

ಸೆಪ್ಟೆಂಬರ್ 10ಕ್ಕೆ ಟಿ.ಡಿ. ರಾಜೇಗೌಡ-ಡಿ.ಎನ್. ಜೀವರಾಜ್ ಅಂತಿಮ ವಿಚಾರಣೆ

ಚಿಕ್ಕಮಗಳೂರು: ರಾಜ್ಯ ರಾಜಕೀಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ...