Home namma chikmagalur chikamagalur ಕಾರು – ಬೈಕ್ ನಡುವೆ ನಡೆದ ಡಿಕ್ಕಿ-ಬೈಕ್‌ ಸವಾರ ಸ್ಥಳದಲ್ಲೇ ಸಾವು
chikamagalurHomeLatest Newsnamma chikmagalur

ಕಾರು – ಬೈಕ್ ನಡುವೆ ನಡೆದ ಡಿಕ್ಕಿ-ಬೈಕ್‌ ಸವಾರ ಸ್ಥಳದಲ್ಲೇ ಸಾವು

Share
Share

ಕಡೂರು: ಚಿಕ್ಕಮಗಳೂರು ಜಿಲ್ಲೆಯ ಕಡೂರು-ಬೀರೂರು ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮತ್ತು ಬೈಕ್ ನಡುವೆ ನಡೆದ ಡಿಕ್ಕಿಯಲ್ಲಿ ಬೈಕ್‌ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕಡೂರು ಮತ್ತು ಬೀರೂರು ನಡುವಿನ ಲಕ್ಷ್ಯ ಕನ್ವೆನ್ನನ್ ಹಾಲ್ ಬಳಿ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಮೃತಪಟ್ಟ ಬೈಕ್ ಸವಾರನನ್ನು ಬೀರೂರಿನ ತೀರ್ಥ ಎಂದು ಗುರುತಿಸಲಾಗಿದೆ.

ಕಾರು ಚಾಲಕನ ಅತಿ ವೇಗ ಮತ್ತು ಅಜಾಗರೂಕ ಚಾಲನೆಯೇ ಈ ಘಟನೆಗೆ ಮುಖ್ಯ ಕಾರಣ ಎಂದು ಹೇಳಲಾಗುತ್ತಿದೆ. ಡಿಕ್ಕಿಯ ರಬಸಕ್ಕೆ ತೀರ್ಥ ಅವರ ದೇಹಕ್ಕೆ ಬಲವಾದ ಪೆಟ್ಟು ಬಿದ್ದಿದ್ದು, ತೀವ್ರ ರಕ್ತಸ್ರಾವದಿಂದಾಗಿ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.

ಈ ಘಟನೆಯು ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

Car-bike collision leaves biker dead on the spot

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...