Home namma chikmagalur chikamagalur ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ
chikamagalurHomeLatest Newsnamma chikmagalur

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

Share
Share

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಸಿಕ್ಕಿದ್ದು.ಸ್ಥಳಕ್ಕೆ ಉಪ ಅರಣ್ಯ ಸಂರಕ್ಷಣಾ ಅಧಿಕಾರಿ ಪುಲ್ಕಿತ್ ಮೀನ ಬೇಟಿ ನೀಡಿ. ಹುಲಿ ಸಂರಕ್ಷಣಾ ಪ್ರಾಧಿಕಾರದ ನಿಮಯಾನುಸಾರ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ.

8 ರಿಂದ 10 ವರ್ಷದ ಗಂಡು ಹುಲಿಯಾಗಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.ಹುಲಿಯ ಮುಂಗಲಿನ ಕುತ್ತಿಗೆ ಭಾಗದಲ್ಲಿ ಇನ್ನೊಂದು ಹುಲಿ ಹೊಡೆದಿರುವ ಉಗುರಿನ ಗುರುತುಗಳು ಪತ್ತೆಯಾಗಿವೆ.ಎರಡು ಬಲಿಷ್ಟ ಹುಲಿಗಳು ಕಾದಾಟದಲ್ಲಿ ಈ ಹುಲಿ ಸತ್ತಿದೆ.
ಹುಲಿಯ ಉಗುರುಗಳು ಮತ್ತು ಹಲ್ಲುಗಳು ಹಾಗೆ ಇವೆ.

ಪಶುವೈದ್ಯಾಧಿಕಾರಿ ಸಚಿನ್ ನಾಯಕ್ ಮತ್ತು ಶಿವಕುಮಾರ್ ತಂಡ ಮರಣೋತ್ತರ ಪರೀಕ್ಷೆ ನಡೆಸಿದರು. ಸ್ಥಳದಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವರಾತ್ರೀಶ್ವರ ಸ್ವಾಮಿ ,ವಲಯ ಅರಣ್ಯಾಧಿಕಾರಿ ಗೌರವ, ಹುಲಿ ಸಂರಕ್ಷಣ ಪ್ರಾಧಿಕಾರದ ಪ್ರತಿನಿಧಿ ವೀರೇಶ್ ಜಿ, ವೈಲ್ಡ್ ಕೇರ್ ಸಂಸ್ಥೆಯ ಅಧ್ಯಕ್ಷ ಮಧು ಮೂಗುತಿಹಳ್ಳಿ, ಒನ್ ಅರ್ಥ್ ಸಂಸ್ಥೆಯ ಮುಖಂಡ ಭರತ್ ಸಿ ವಿ ,ಇತರೆ ಸ್ಥಳೀಯ ಪ್ರತಿನಿಧಿಗಳು ಗ್ರಾಮಸ್ಥರು ಸ್ಥಳದಲ್ಲಿ ಮರಣೋತ್ತರ ಪಂಚನಾಮೆ ಪ್ರಕ್ರಿಯೆಯಲ್ಲಿ ಸಹಕರಿಸಿದರು .

ಮರಣೋತ್ತರ ಪರೀಕ್ಷೆ ಮುಗಿದ ಬಳಿಕ ಹುಲಿಯ ಮೃತದೇಹ ಸುಡಲಾಯಿತು.

Tiger census staff discover tiger carcass

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...