Home namma chikmagalur chikamagalur ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ
chikamagalurHomeLatest Newsnamma chikmagalur

ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ನಿರ್ಧಾರ

Share
Share

ಚಿಕ್ಕಮಗಳೂರು: ಜಿಲ್ಲಾಡಳಿತದ ವತಿಯಿಂದ ಜನವರಿ ೨೬ರಂದು ಗಣರಾಜ್ಯೋತ್ಸವವನ್ನು ಅರ್ಥಪೂರ್ಣವಾಗಿ ಅಚರಿಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎನ್.ಎಂ. ನಾಗರಾಜ್ ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಗಣರಾಜ್ಯೋತ್ಸವ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ ಗಣರಾಜ್ಯೋತ್ಸವವನ್ನು ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಆಯೋಜಿಸಲಾಗುತ್ತಿದ್ದು, ಬೆಳಗ್ಗೆ ೯ ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಧ್ವಜಾರೋಹಣ ನೆರವೇರಿಸುವರು. ತಮ್ಮ ತಮ್ಮ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸಿ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗ ಕಡ್ಡಾಯವಾಗಿ ಭಾಗವಹಿಸುವಂತೆ ಸೂಚಿಸಿದ ಅವರು, ಜಿಲ್ಲೆಯಾದ್ಯಂತ ಅರ್ಥಪೂರ್ಣ ಗಣರಾಜ್ಯೋತ್ಸವ ಆಚರಣೆಗೆ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.

ಶಿಷ್ಟಾಚಾರ ಪಾಲನೆ ಮತ್ತು ವೇದಿಕೆ ನಿರ್ಮಾಣ ಸೇರಿದಂತೆ ಮೈದಾನ ಸ್ವಚ್ಚತೆ, ಕಚೇರಿಗಳಲ್ಲಿ ಹಾಗೂ ನಗರದ ದೀಪಾಲಂಕಾರ ವ್ಯವಸ್ಥೆಯನ್ನು ಮಾಡುವಂತೆ ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳಿಗೆ ತಿಳಿಸಿದರು.

ಧ್ವಜಾರೋಹಣ ಪ್ರಯುಕ್ತ ರಾಷ್ಟ್ರಗೀತೆ, ನಾಡಗೀತೆ, ಪಥಸಂಚಲನ ಹಾಗೂ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಶಿಷ್ಟಾಚಾರದಂತೆ ಅತಿಥಿ ಗಣ್ಯರನ್ನು ಆಹ್ವಾನಿಸಲು ಅಗತ್ಯ ಸಿದ್ದತೆಗಳನ್ನು ಮಾಡಿ ಅಚ್ಚುಕಟ್ಟಾಗಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಪೊಲೀಸ್ ಇಲಾಖೆ, ಅಬಕಾರಿ ಇಲಾಖೆ, ಅಗ್ನಿಶಾಮಕದಳ ಸೇರಿದಂತೆ ಕವಾಯತು ತಂಡಗಳ ಪಥಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳುವಂತೆ ತಿಳಿಸಿದ ಅವರು ಸೂಕ್ತ ಬಂದೋಬಸ್ತ್ ಕೈಗೊಳ್ಳಲು ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಫಲಪುಷ್ಪ ಪ್ರದರ್ಶನವನ್ನು ನಗರದ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಮುಖ್ಯ ವೇದಿಕೆ ಕಾರ್ಯಕ್ರಮದ ನಂತರ ಫಲಪುಷ್ಪ ಪ್ರದರ್ಶನದ ಉದ್ಘಾಟನೆ ನಡೆಯಲಿದೆ. ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ಸಹ ಸುಭಾಶ್ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿಯೇ ಹಮ್ಮಿಕೊಳ್ಳಲು ಸಭೆಯಲ್ಲಿ ನಿರ್ಧರಿಸಲಾಯಿತು.

ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಪೇಂದ್ರ ಕುಮಾರ್ ದಯಾಮ, ಅಪರ ಜಿಲ್ಲಾಧಿಕಾರಿ ನಾರಾಯಣ ರಡ್ಡಿ ಕನಕ ರಡ್ಡಿ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ದಲಿತ ಸಂಘಟನೆ ಮುಖಂಡ ಕೆ.ಟಿ.ರಾಧಾಕೃಷ್ಣ, ಜಿ.ಪಂ. ಉಪಕಾರ್ಯದರ್ಶಿ ಶಂಕರ ಕೊರವರ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕಿ ಡಾ.ಮಂಜುಳ ಹುಲ್ಲಹಳ್ಳಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅಶ್ವತ್ಥ್ ಬಾಬು, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ದೇವೇಂದ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಸಿ.ರಮೇಶ್ ಹಾಗೂ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

Decision for meaningful Republic Day celebration

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...