Home namma chikmagalur chikamagalur ವಿವಿಧ ಬೇಡಿಕೆ ಈಡೇರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ
chikamagalurHomeLatest Newsnamma chikmagalur

ವಿವಿಧ ಬೇಡಿಕೆ ಈಡೇರಿಗೆ ಪ್ರಾಥಮಿಕ ಶಾಲಾ ಶಿಕ್ಷಕರ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಪ್ರಾಥಮಿಕ ಶಾಲಾ ಶಿಕ್ಷಕರು ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಇಂದು ಇಲ್ಲಿನ ಸರ್ಕಾರಿ ಉರ್ದು ಶಾಲೆಯಲ್ಲಿ ನೆಡೆಯುತ್ತಿದ್ದ ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಕಪ್ಪು ಪಟ್ಟಿ ಧರಿಸುವ ಮುಖಾಂತರ ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಪ್ರತಿಭಟನೆಯನ್ನು ವ್ಯಕ್ತಪಡಿಸಿದರು.

ಪ್ರತಿಭಟನಾಕಾರರನ್ನುದ್ದೇಶಿಸಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಕಿರಣ್ ಕುಮಾರ್ ಮಾತನಾಡಿ, ಅಖಿಲ ಭಾರತ ಪ್ರಾಥಮಿಕ ಶಾಲಾ ಶಿಕ್ಷಕರ ಫೆಡರೇಷನ್ ಹಾಗೂ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಇವರುಗಳ ವತಿಯಿಂದ ಇಂದು ದೇಶಾದ್ಯಂತ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮುಖಾಂತರ ಪ್ರತಿಭಟಿಸುತ್ತಿದ್ದೇವೆ ಎಂದರು.

೨೫ ವರ್ಷಗಳ ಬೋಧನೆ ಅನುಭವ ಹೊಂದಿರುವ ವೃತ್ತಿನಿರತ ಶಿಕ್ಷಕರಿಗೆ ಅಸಂಬದ್ಧವಾದ ಅರ್ಹತಾ ಪರೀಕ್ಷೆ ನಡೆಸಲು ಮುಂದಾಗಿರುವುದನ್ನು ಕೈಬಿಡಬೇಕೆಂದು ಒತ್ತಾಯಿಸಿದರು.

ಸೇವಾ ಹಿರಿತನದ ಮೇಲೆ ಬಡ್ತಿ ಕೊಡಬೇಕು, ಸಮಾನ ಕೆಲಸಕ್ಕೆ ಸಮಾನ ವೇತನ ಜಾರಿಗೊಳಿಸಬೇಕು, ಎನ್‌ಪಿಎಸ್ ರದ್ದುಮಾಡಿ ಓಪಿಎಸ್ ಜಾರಿಗೊಳಿಸುವ ಮೂಲಕ ಎಲ್ಲಾ ಶಿಕ್ಷಕರಿಗೆ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿದರು.

ದೇಶಾದ್ಯಂತ ಎಲ್ಲಾ ಶಿಕ್ಷಕರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಪ್ಪು ಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸುವ ಮುಖಾಂತರ ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರ ಈ ನಮ್ಮ ಬೇಡಿಕೆಗಳನ್ನು ಗಂಭೀರವಾಗಿ ಪರಿಗಣಿಸುವಂತೆ ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ತಾಲ್ಲೂಕು ಅಧ್ಯಕ್ಷ ಅಜ್ಜಯ್ಯ, ಜಿಲ್ಲಾ ಕಾರ್ಯದರ್ಶಿ ಪರಮೇಶ್, ತಾಲ್ಲೂಕು ಕಾರ್ಯದರ್ಶಿ ರವಿ, ಹಾಗೂ ಇನ್ನಿತರ ಸಂಘದ ಪದಾಧಿಕಾರಿಗಳು, ನಿರ್ದೇಶಕರು ಮತ್ತು ಶಿಕ್ಷಕರು ಉಪಸ್ಥಿತರಿದ್ದರು.

Primary school teachers protest for various demands

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...