Home namma chikmagalur chikamagalur ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ
chikamagalurHomeLatest Newsnamma chikmagalur

ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರಾಷ್ಟ್ರಮಟ್ಟಕ್ಕೆ ಆಯ್ಕೆ

Share
Share

ಚಿಕ್ಕಮಗಳೂರು: ತಾಲ್ಲೂಕಿನ ಹಂಗರವಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯು ಯಶಸ್ವಿ ಮಾದರಿ ಶಾಲೆಗಳ ಉತ್ತಮ ಸಾಧನೆಗಾಗಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಎಜುಕೇಶನ್ ಪ್ಲಾನಿಂಗ್ ಅಂಡ್ ಅಡ್ಮಿನಿಸ್ಟ್ರೇಷನ್ NIEPA ನಡೆಸುವ ಸರ್ಕಾರಿ ಹಾಗೂ ಅನುದಾನಿತ ಶಾಲೆಗಳ ‘ಯಶಸ್ವಿ ಶಾಲಾ ನಾಯಕತ್ವ ರಾಷ್ಟ್ರೀಯ ಸಮಾವೇಶ’ಕ್ಕೆ ಮಾದರಿ ಶಾಲೆಯ ಅತ್ಯುತ್ತಮ ಅಭ್ಯಾಸಗಳ ಅಡಿ ಆಯ್ಕೆಯಾಗಿದ್ದು, ಸಮಾವೇಶದಲ್ಲಿ ಶಾಲೆಯ ಯಶೋಗಾಥೆ ಬಗ್ಗೆ ಪ್ರಾತ್ಯಕ್ಷಿಕೆ ನೀಡಲಾಗುತ್ತಿದೆ.

ವಿಕಸಿತ ಭಾರತ-೨೦೪೭ ಸೃಜನಶೀಲ ಹಾದಿಗೆ ಪೂರಕವಾಗಿ NIEPA ಯಿಂದ ಆಯೋಜನೆಗೊಳ್ಳುವ ‘ಯಶಸ್ವಿ ಶಾಲಾ ನಾಯಕತ್ವ’ ರಾಷ್ಟ್ರೀಯ ಸಮಾವೇಶಕ್ಕಾಗಿ ದೇಶದಾದ್ಯಂತ ೩೦೦ಕ್ಕೂ ಹೆಚ್ಚು ಶಾಲೆಗಳಿಂದ ನಾಮನಿರ್ದೇಶನಗೊಂಡಿದ್ದು, ಇದರಲ್ಲಿ ೫೫ ಮಾದರಿ ಶಾಲೆಗಳನ್ನು ಆಯ್ಕೆ ಮಾಡಿದ್ದು ರಾಜ್ಯದಿಂದ ೨ ಶಾಲೆಗಳನ್ನು ಆಯ್ಕೆಮಾಡಲಾಗಿದೆ. ಸರ್ಕಾರಿ ಪ್ರೌಢಶಾಲೆ ಹೂದಲಮನೆ, ಸಿದ್ದಾಪುರ ತಾಲ್ಲೂಕು, ಉತ್ತರ ಕನ್ನಡ ಜಿಲ್ಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗರವಳ್ಳಿ, ಚಿಕ್ಕಮಗಳೂರು ಆಯ್ಕೆಗೊಂಡಿವೆ.

ಶಾಲೆಯ ಮುಖ್ಯೋಪಾಧ್ಯಾಯರು ಈ ಸಮಾವೇಶದಲ್ಲಿ ಭಾಗವಹಿಸಿ ಶಾಲೆಯ ಯಶೋಗಾಥೆಯನ್ನು ಕುರಿತು ೧೫ ನಿಮಿ?ಗಳ ಕಾಲ ಪ್ರಾತ್ಯಕ್ಷಿಕೆ ನೀಡಲಿದ್ದಾರೆ. ೭೫ ವ?ಗಳ ಇತಿಹಾಸವಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಹಂಗರವಳ್ಳಿಯು, ೧೯೫೧ರಲ್ಲಿ ಕೂಲಿಮಠ ಹೆಸರಿನಲ್ಲಿ ಪ್ರಾರಂಭಗೊಂಡು ಸಾವಿರಾರು ವಿದ್ಯಾರ್ಥಿಗಳಿಗೆ ಜ್ಞಾನದೇಗುಲವಾಗಿತ್ತು. ಹಂಗರವಳ್ಳಿಯ ಸುತ್ತ-ಮುತ್ತಲಿನ ಹತ್ತಾರು ಗ್ರಾಮಗಳಿಂದ ವಿದ್ಯಾರ್ಥಿಗಳು ಶಾಲೆಗೆ ಬಂದು ವಿದ್ಯಾಭ್ಯಾಸ ಮಾಡುತ್ತಿದ್ದರು, ಕ್ರಮೇಣ ಖಾಸಗಿ ಕಾನ್ವೆಂಟ್ ಶಾಲೆಗಳ ಹೊಡೆತಕ್ಕೆ ಸಿಲುಕಿ ೨೦೧೮ರ ವೇಳೆಗೆ ಕೇವಲ ೧೩ ಮಕ್ಕಳ ದಾಖಲಾತಿಯೊಂದಿಗೆ ಮುಚ್ಚುವ ಹಂತ ತಲುಪಿತ್ತು.

ಈ ಶಾಲೆಯಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳು, ಗ್ರಾಮಸ್ಥರು ಶಾಲೆಯನ್ನು ಉಳಿಸಲು ಪಣತೊಟ್ಟು, ‘ಶ್ರೀ ಉದ್ದಂಡೇಶ್ವರ ಶಿಕ್ಷಣ ಸೇವಾ ಟ್ರಸ್ಟ್’ ಸ್ಥಾಪಿಸಿ ಸರ್ಕಾರಿ ಶಾಲೆಯಲ್ಲಿಯೇ ಸರ್ಕಾರದ ಅನುಮತಿಯೊಂದಿಗೆ ಎಲ್.ಕೆ.ಜಿ, ಯು.ಕೆ.ಜಿ ಶಿಕ್ಷಣ ಆರಂಭಿಸಿ ಕ್ರಮೇಣ ದ್ವಿಭಾ? ಮಾಧ್ಯಮದಲ್ಲಿ ಬೋಧನೆ ಆರಂಭಿಸಲಾಯಿತು. ಸಂದರ್ಶನದ ಮೂಲಕ ಖಾಸಗಿ ಶಿಕ್ಷಕರನ್ನು ಈ ಶಾಲೆಗೆ ನೇಮಿಸಿ ಟ್ರಸ್ಟ್ ಮೂಲಕ ವೇತನ ನೀಡಲಾಯಿತು.

ವಿದ್ಯಾರ್ಥಿಗಳ ಪ್ರಯಾಣಕ್ಕಾಗಿ ದಾನಿಗಳ ನೆರವಿನಿಂದ ೨ ಬಸ್ ವ್ಯವಸ್ಥೆ ಕಲ್ಪಿಸಲಾಯಿತು. ಸರ್ಕಾರ ನೀಡುವ ಸಮವಸ್ತ್ರ ದ ಜೊತೆಗೆ ಹೆಚ್ಚುವರಿಯಾಗಿ ಸಮವಸ್ತ್ರ, ಶೂ, ಸಾಕ್ಸ್ ಹಾಗೂ ನೋಟ್‌ಬುಕ್ ಮತ್ತು ಲೇಖನ ಸಾಮಗ್ರಿಗಳನ್ನು ಟ್ರಸ್ಟ್ ಮೂಲಕ ನೀಡಲಾಗುತ್ತಿದೆ. ಅಳಿವಿನಂಚಿನಲ್ಲಿದ್ದ ಶಾಲೆ ಕ್ರಮೇಣ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಏರಿಕೆ ಕಂಡು ಪ್ರಸಕ್ತ ವರ್ಷ ೨೬೫ ವಿದ್ಯಾರ್ಥಿಗಳು ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿದ್ದಾರೆ.

ಹಳೆಯ ಕಟ್ಟಡದಲ್ಲಿ ಮೂಲಸೌಕರ್ಯಗಳ ಕೊರತೆಯಿದ್ದುದನ್ನು ಮನಗಂಡ ಗ್ರಾಮಸ್ಥರು, ಟ್ರಸ್ಟ್‌ನ ಪದಾಧಿಕಾರಿಗಳು ಸರ್ಕಾರದ ವಿವಿಧ ಇಲಾಖೆಗಳಿಂದ ರೂ.೪ ಕೋಟಿ ಮೊತ್ತದ ನೆರವನ್ನು ಪಡೆದು ೩ ಅಂತಸ್ತಿನ ಕಟ್ಟಡ ನಿರ್ಮಿಸುತ್ತಿದ್ದು, ನೂತನ ಕಟ್ಟಡ ನಿರ್ಮಾಣ ಕಾರ್ಯ ಮುಕ್ತಾಯದ ಹಂತದಲ್ಲಿದೆ.

ಪ್ರಸ್ತುತ ಶಾಲೆಯಲ್ಲಿ ವಿಶಾಲವಾದ ಬೋಧನಾ ಕೊಠಡಿಗಳು, ಸುಸಜ್ಜಿತ ಗ್ರಂಥಾಲಯ, ವಿಜ್ಞಾನ ಪ್ರಯೋಗಾಲಯ, ೫೦೦ ಆಸನವುಳ್ಳ ಆಡಿಟೋರಿಯಂ, ಬಾಲಕ/ಬಾಲಕಿಯರಿಗೆ ಪ್ರತ್ಯೇಕ ಶೌಚಾಲಯ, ಶಿಕ್ಷಕರಿಗೆ ಪ್ರತ್ಯೇಕ ಕೊಠಡಿಗಳಿವೆ. ೬೦ ಸಿ.ಸಿ.ಕ್ಯಾಮೆರಾಗಳನ್ನು ದಾನಿಗಳೊಬ್ಬರು ಅಳವಡಿಸಿಕೊಟ್ಟಿದ್ದಾರೆ. ಪ್ರಸ್ತುತ ಸರ್ಕಾರಿ, ಅತಿಥಿ ಹಾಗೂ ಹೊರಸಂಪನ್ಮೂಲದ ಮೂಲಕ ೧೩ ಶಿಕ್ಷಕರಿದ್ದಾರೆ. ಶಾಲೆಗೆ ೨೬೫ ವಿದ್ಯಾರ್ಥಿಗಳು ದಾಖಲಾಗಿದ್ದು ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ಪ್ರತಿಮಾಹೆ ವಿದ್ಯಾರ್ಥಿಗಳು-ಪೋ?ಕರು-ಶಿಕ್ಷಕರ ಸಭೆಯನ್ನು ಟ್ರಸ್ಟ್‌ನ ಪದಾಧಿಕಾರಿಗಳೊಂದಿಗೆ ನಡೆಸಿ ಪ್ರತಿ ವಿದ್ಯಾರ್ಥಿಯ ಪ್ರಗತಿ ಪರಿಶೀಲಿಸಲಾಗುತ್ತಿದೆ.

ಈ ಶಾಲೆಯಲ್ಲಿ ಕಲಿಯುತ್ತಿರುವ ಮಕ್ಕಳು ಕಲಿಕೆ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಉತ್ತಮ ಸಾಧನೆ ತೋರುತ್ತಿದ್ದು, ಇಂಗ್ಲಿ?ನಲ್ಲಿ ನಿರರ್ಗಳವಾಗಿ ಸಂವಹನ ನಡೆಸುವ ಕೌಶಲ ಹೊಂದಿದ್ದಾರೆ. ಇದರಿಂದಾಗಿ ಖಾಸಗಿ ಕಾನ್ವೆಂಟ್‌ಗಳಿಂದ ಮಕ್ಕಳನ್ನು ಬಿಡಿಸಿ ಈ ಸರ್ಕಾರಿ ಶಾಲೆಗೆ ಸ್ಥಳೀಯರು ಸೇರಿಸುತ್ತಿದ್ದಾರೆ. ಇದರಿಂದಾಗಿ ಪ್ರತಿ ಪೋಷಕರಿಗೆ ವಾರ್ಷಿಕವಾಗಿ ಕನಿ? ಒಂದುವರೆ ಲಕ್ಷ ಉಳಿತಾಯವಾಗುತ್ತಿದೆ.

ಒಟ್ಟಾರೆ, ಗುಣಮಟ್ಟದ ಶಿಕ್ಷಣ, ಅತ್ಯಾಧುನಿಕ ಕಟ್ಟಡದಲ್ಲಿ ಮೂಲಭೂತ ಸೌಕರ್ಯ, ಬಸ್‌ಸೌಕರ್ಯ, ದ್ವಿಭಾಷಾ ಮಾಧ್ಯಮದಲ್ಲಿ ಬೋಧನೆ, ಟ್ರಸ್ಟ್‌ನ ಸಮಗ್ರ ಮೇಲ್ವಿಚಾರಣೆಯಿಂದ ಸಮುದಾಯದವರ ಭಾಗವಹಿಸುವಿಕೆಯಿಂದ ಮುಚ್ಚುವ ಹಂತದಲ್ಲಿದ್ದ ಕುಗ್ರಾಮದ ಶಾಲೆಯು ರಾಷ್ಟ್ರ ಮಟ್ಟದಲ್ಲಿ ಗುರುತಿಸುವಂತಾಗಿ, ಸಾಧನೆಯ ಹಾದಿಯಲ್ಲಿ ಸಾಗುತ್ತಿದೆ.

Hangaravalli Government Higher Primary School selected for national level

Share

Leave a comment

Leave a Reply

Your email address will not be published. Required fields are marked *

Don't Miss

ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ ಪತ್ತೆ

ಚಿಕ್ಕಮಗಳೂರು:  ಭದ್ರಾ ಹುಲಿ ಸಂರಕ್ಷಿತ ಪ್ರದೇಶದ,ಹೆಬ್ಬೆ ವಲಯದ ಗಂಗೆಗಿರಿ ಸರ್ವೇ ನಂಬರ್ 15 ರ ಶಿರಗುಳ ಮೀಸಲು ಅರಣ್ಯದಲ್ಲಿ ದಿನಾಂಕ 6ನೆ ತಾರೀಕು ಬೆಳಿಗ್ಗೆ ಹುಲಿ ಗಣತಿಯ ಸಿಬ್ಬಂದಿಗಳಿಗೆ ಹುಲಿಯ ಮೃತದೇಹ...

ಕಾಫಿ ಕಳ್ಳತನ : ಆರೋಪಿಗಳ ಸೆರೆ- 2 ಕಾರು ವಶ

ಮೂಡಿಗೆರೆ: ತಾಲೂಕಿನ ಗೋಣಿಬೀಡು ಸಮೀಪ ರಂಗಸ್ವಾಮಿ ಅವರ ಕಾಫಿ ತೋಟದಲ್ಲಿ ಕಾಫಿ ಕಳ್ಳತನ ಮಾಡಿದ್ದ ೬ ಮಂದಿ ಆರೋಪಿಗಳನ್ನು ಗೋಣಿಬೀಡು ಪೊಲೀಸರು ಬಂಧಿಸಿ, ಸುಮಾರು ೩.೫೦ ಲಕ್ಷ ರೂ ಮೌಲ್ಯದ ಕಾಫಿ...

Related Articles

ವಾಯುಭಾರ ಕುಸಿತದ ಪರಿಣಾಮ ಜಿಲ್ಲೆಯಲ್ಲಿ ಸಾಧಾರಣ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಳೆದ ಎರಡು ದಿನಗಳಿಂದ ಜಿಲ್ಲೆಯಾದ್ಯಂತ ಮೋಡಕವಿದ ವಾತಾವರಣವಿದ್ದು, ಬಂಗಾಳ ಉಪಸಾಗರದಲ್ಲಿ ಉಂಟಾಗಿರುವ ವಾಯುಭಾರ ಕುಸಿತದ...

ಕಾಫಿನಾಡಿನ ಗಿರಿಭಾಗದಲ್ಲಿ ದಟ್ಟ ಮಂಜು

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಸೂರ್ಯನ ದರ್ಶನವೇ ಇಲ್ಲದಂತಾಗಿದ್ದು, ಥಂಡಿ ವಾತಾವರಣ ಉಂಟಾಗಿದ್ದು,...

ಜಿಎಸ್‌ಬಿ ಯಿಂದ ಸಂಕ್ರಾಂತಿ ಸಂಭ್ರಮ

ಚಿಕ್ಕಮಗಳೂರು: ಸಂಕ್ರಾಂತಿ ಹಿನ್ನೆಲೆಯಲ್ಲಿ ಗೌಡಸಾರಸ್ವತ ಬ್ರಾಹ್ಮಣ ಸಮಾಜದಿಂದ ನಡೆಯುವ ಕೇಳ್ ಮೇಳ್ ಸಾಂಸ್ಕೃತಿಕ ಕಾರ್ಯಕ್ರಮ ನಗರದಲ್ಲಿ...

ಗಾಳಿಪಟ ಹಾರಾಟಕ್ಕೆ ಮನಸೋತ ಜನ

ಚಿಕ್ಕಮಗಳೂರು: ಆಕಾಶದಲ್ಲಿ ಹಾರುತ್ತಿದ್ದ ಹುಲಿ, ಜಿಂಕೆ, ಆನೆ, ಸಿಂಹ, ಚಿಟ್ಟೆಗಳು, ಪಕ್ಷಿಗಳು, ಗಿಡಮರಗಳು ಸೇರಿದಂತೆ ವಿವಿಧ...