Home namma chikmagalur chikamagalur ಜಿಲ್ಲಾಸ್ಪತ್ರೆ ನಿರ್ಲಕ್ಷ್ಯತನ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ
chikamagalurHomeLatest Newsnamma chikmagalur

ಜಿಲ್ಲಾಸ್ಪತ್ರೆ ನಿರ್ಲಕ್ಷ್ಯತನ ಖಂಡಿಸಿ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

Share
Share

ಚಿಕ್ಕಮಗಳೂರು:  ಜಿಲ್ಲಾಸ್ಪತ್ರೆಯಲ್ಲಿ ನಿರ್ಲಕ್ಷ್ಯತನದಿಂದ ಬಡ ರೋಗಿಗಳ ಸಾವಿಗೆ ಕಾರ ಣರಾದ ಸರ್ಜನ್, ಡೀನ್ ಮತ್ತು ವೈದ್ಯಾಧಿಕಾರಿಗಳ ವಿರುದ್ಧ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊ ಳ್ಳಬೇಕು ಎಂದು ಆಗ್ರಹಿಸಿ ಭೀಮ್‌ಆರ್ಮಿ, ರಾಜ್ಯ ರೈತ ಹಸಿರುಸೇನೆ, ಕನ್ನಡಸೇನೆ ಹಾಗೂ ವಿವಿಧ ಸಂಘಟ ನೆಗಳ ನೇತೃತ್ವದಲ್ಲಿ ಶುಕ್ರವಾರ ಆಜಾದ್‌ಪಾರ್ಕ್ ವೃತ್ತದಲ್ಲಿ ಮುಖಂಡರು ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ಭೀಮ್‌ಆರ್ಮಿ ಜಿಲ್ಲಾಧ್ಯಕ್ಷ ಹೊನ್ನೇಶ್ ಹೊಸವರ್ಷದ ದಿನದಂದು ಜಿಲ್ಲಾ ಸ್ಪತ್ರೆಯಲ್ಲಿ ರೋಗಿಗಳು ನರಳಾಡುತ್ತಿದ್ದರೂ ವೈದ್ಯಕೀಯ ಸಿಬ್ಬಂದಿಗಳು ಕುಣಿದುಕುಪ್ಪಳಿಸುವ ವೀಡಿಯೋ ಎಲ್ಲೆಡೆ ವೈರಲ್‌ಆಗಿದೆ. ದಾದಿಯರ ಸಂಭ್ರಮದಲ್ಲಿ ಅಮಾಯಕ ರೋಗಿಗಳು ಸಾವಿಗೀಡಾಗಿ ಅವರ ಕುಟುಂ ಬವು ಬೀದಿಪಾಲಾಗಿದೆ ಎಂದರು.

ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸಬೇಕಾದ ವೈದ್ಯರು, ಖಾಸಗೀ ಕ್ಲೀನಿಕ್ ತೆರೆದು ಜಿಲ್ಲಾಸ್ಪತ್ರೆಯನ್ನು ಮರೆ ತಿದ್ದಾರೆ. ಸರ್ಕಾರಿ ಆಸ್ಪತ್ರೆಗೆ ಬರುವ ರೋಗಿಗಳಿಗೆ ಖಾಸಗೀ ಕ್ಲೀನಿಕ್‌ನಲ್ಲೇ ಚಿಕಿತ್ಸೆ ನೀಡುತ್ತೇವೆ ಎಂದು ಸರ್ಕಾ ರಿ ವೈದ್ಯರು ತಮ್ಮ ವೈಯಕ್ತಿಕ ಲಾಭವನ್ನು ಹೆಚ್ಚಿಸಿಕೊಂಡು, ಸರ್ಕಾರಿ ಕೆಲಸವನ್ನು ಸರಿಯಾಗಿ ನಿರ್ವಹಿಸು ತ್ತಿಲ್ಲ ಎಂದು ದೂರಿದರು.

ಜಿಲ್ಲಾಸ್ಪತ್ರೆ ಸುತ್ತಮುತ್ತ, ರೋಗಿಗಳ ಕೊಠಡಿ ಹಾಗೂ ಮೆಡಿಕಲ್ ಕಾಲೇಜು ಸಮೀಪ ಸ್ವಚ್ಚತೆ ಕಾಪಾ ಡುತ್ತಿಲ್ಲ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಮೆಡಿಕಾಲ್ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ಬಳಿಕ, ಚಳಿಗಾಲದ ಅಧಿವೇಶನದಲ್ಲಿ ಧ್ವನಿಗೂಡಿಸಿದರೂ ಇಂದಿಗೂ ರಾಜ್ಯಸರ್ಕಾರ ಯಾವುದೇ ಕ್ರಮ ಜರು ಗಿಸದಿರುವುದು ದುರ್ದೈವ ಎಂದು ಹೇಳಿದರು.

ರಾಜ್ಯ ರೈತ ಹಸಿರುಸೇನೆ ಅಧ್ಯಕ್ಷ ಫಯಾಜ್ ಮಾತನಾಡಿ ಜಿಲ್ಲಾಸ್ಪತ್ರೆಯಲ್ಲಿ ಸಾವಪ್ಪಿನದ ಬಡ ರೋಗಿಗ ಗಳ ಕುಟುಂಬಕ್ಕೆ ಸರ್ಕಾರ ತಲಾ ೫೦ ಲಕ್ಷ ರೂ. ಪರಿಹಾರ ಘೋಷಿಸಬೇಕು. ಬಡವರ ರೋದನೆಗೆ ಸರ್ಕಾ ರ ಸ್ಪಂದಿಸದಿದ್ದಲ್ಲಿ ಜಿಲ್ಲಾಧಿಕಾರಿ ಕಚೇರಿ ಸಮೀಪ ಎಲ್ಲಾ ಸಂಘಟನೆಗಳು ಒಟ್ಟಾಗಿ ಬೃಹತ್ ಪ್ರತಿಭಟನೆ ನಡೆ ಸಲಾಗುವುದು ಎಂದು ಎಚ್ಚರಿಸಿದರು.

ಕನ್ನಡಸೇನೆ ಆಟೋ ಘಟಕದ ಅಧ್ಯಕ್ಷ ಜಯಪ್ರಕಾಶ್ ಮಾತನಾಡಿ ಬಡ ರೋಗಿಗಳು ಕಾಯಿಲೆಗಳಿಂದ ನರಳಾಡಿ ಸಾವಪ್ಪಿದ್ದು ಇದಕ್ಕೆ ಮೂಲ ಕಾರಣರಾದ ಜಿಲ್ಲಾಸ್ಪತ್ರೆ ಸರ್ಜನ್, ಮೆಡಿಕಲ್ ಕಾಲೇಜು ಡೀನ್ ಮತ್ತು ವೈದ್ಯರುಗಳ ವಿರುದ್ಧ ಕ್ರಮ ವಹಿಸಬೇಕು. ನೊಂದವರ ಪಾಲಿಗೆ ಸೂಕ್ತ ಪರಿಹಾರ ಒದಗಿಸುವ ಮೂಲಕ ನ್ಯಾಯ ಒದಗಿಸಿಕೊಡಬೇಕು ಎಂದರು.

ಪ್ರತಿಭಟನೆಯಲ್ಲಿ ಭೀಮ್ ಆರ್ಮಿ ತಾಲ್ಲೂಕು ರಮೇಶ್, ಪ್ರಧಾನ ಕಾರ್ಯದರ್ಶಿ ಲೋಕೇಶ್, ಟಿಪ್ಪು ಸುಲ್ತಾನ್ ವೇದಿಕೆ ಅಧ್ಯಕ್ಷ ಜಂಶೀದ್‌ಖಾನ್, ಕನ್ನಡಸೇನೆ ನಗರಾಧ್ಯಕ್ಷ ಸತೀಶ್, ಹಸಿರುಸೇನೆ ಹಾಸನ ಜಿಲ್ಲಾ ಧ್ಯಕ್ಷೆ ಶರತ್, ಮುಖಂಡರುಗಳಾದ ಸುಧೀರ್, ಅಕ್ರಮ್, ಸೈಯದ್ ಅಬ್ದುಲ್, ರಂಗಸ್ವಾಮಿ ಉಪಸ್ಥಿತರಿದ್ದರು.

Various organizations protest against negligence at the district hospital

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...