Home namma chikmagalur chikamagalur ಗಾಂಜಾ ಸಾಗಣೆ ಆರೋಪಿಗೆ ಆರು ತಿಂಗಳ ಸಜೆ
chikamagalurCrime NewsHomeLatest Newsnamma chikmagalur

ಗಾಂಜಾ ಸಾಗಣೆ ಆರೋಪಿಗೆ ಆರು ತಿಂಗಳ ಸಜೆ

Share
Share

ಚಿಕ್ಕಮಗಳೂರು: ಗಾಂಜಾ ಸಾಗಣೆ ಆರೋಪಿತ ಇಬ್ಬರು ಆರೋಪಿಗಳಿಗೆ ನರಸಿಂಹರಾಜಪುರ ತಾಲೂಕು ಜೆಎಂಎಫ್‌ಸಿ ಘನ ನ್ಯಾಯಾಲಯ ಆರು ತಿಂಗಳ ಸಜೆ ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

೨೦೨೫ ಫೆ.೧೮ರಂದು ನರಸಿಂಹರಾಜಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮುತ್ತಿನಕೊಪ್ಪದಿಂದ ಲಕ್ಕಿನಕೊಪ್ಪಕ್ಕೆ ತರಳುವ ಮಾರ್ಗದಲ್ಲಿ ಆರೋಪಿಗಳು ಅಕ್ರಮ ಗಾಂಜಾ ಸಾಗಿಸುತ್ತಿದ್ದ ಖಚಿತ ಮಾಹಿತಿ ಮೇರೆಗೆ ಆರೋಪಿಗಳು ತೆರಳುತ್ತಿದ್ದ ಬೈಕ್ ತಪಾಸಣೆಗೆ ಒಳಪಡಿಸಿದಾಗ ೧೦೪ ಗ್ರಾಂ. ಗಾಂಜಾ ಪತ್ತೆಯಾಗಿದ್ದು, ಶಿವಮೊಗ್ಗ ಸೂಳೆಬೈಲಿನ ಮಹಮದ್ ಫತಾವುಲ್ಲ ಹಾಗೂ ಭದ್ರಾವತಿ ತಾಲೂಕಿನ ಪೇಪರ್‌ಟೌನ್‌ನ ಪ್ರವೀಣ್ ಎಂಬುವರನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿ ದೋಷರೋಪ ಪಟ್ಟಿಯನ್ನು ಪೊಲೀಸರು ಸಲ್ಲಿಸಿದ್ದರು.

ಆರೋಪಿಗಳ ವಿರುದ್ಧದ ಆರೋಪ ಸಾಭೀತಾದ ಹಿನ್ನಲೆಯಲ್ಲಿ ನರಸಿಂಹರಾಜಪುರ ತಾಲೂಕಿನ ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯದ ನ್ಯಾಯಾಧೀಶರು ಆರೋಪಿಗಳಿಬ್ಬರಿಗೂ ಆರು ವರ್ಷ ಜೈಲು ಶಿಕ್ಷೆ ಹಾಗೂ ಐದು ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಕೃತ್ಯಕ್ಕೆ ಬಳಸಿದ ಬೈಕನ್ನು ಸರ್ಕಾರಕ್ಕೆ ಮುಟ್ಟುಗೋಲು ಹಾಕಿಕೊಳ್ಳಲು ಮತ್ತು ವಶಪಡಿಸಿಕೊಂಡಿರುವ ಗಾಂಜಾವನ್ನು ಕಾನೂನುಬದ್ಧವಾಗಿ ವಿಲೇವಾರಿ ಮಾಡುವಂತೆ ಆದೇಶದಲ್ಲಿ ತಿಳಿಸಲಾಗಿದೆ.

ಪೊಲೀಸ್ ಸಬ್ ಇನ್ಸ್‌ಪೇಕ್ಟರ್ ಬಿ.ಎಸ್.ನಿರಂಜನ್‌ಗೌಡ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದರು. ಪೊಲೀಸ್ ಸಬ್ ಇನ್ಸ್‌ಪೇಕ್ಟರ್ ಎನ್.ಜ್ಯೋತಿ ದೋಷರೋಪಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು. ಸರ್ಕಾರಿ ಅಭಿಯೋಜಕರಾದ ಗದಿಗೆಪ್ಪ ಜಿ. ನೇಕರ್ ವಾದ ಮಂಡಿಸಿದ್ದರು.

Man sentenced to six months in prison for transporting marijuana

 

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ನಗರದಲ್ಲಿ ಅವಿಧಿ ಮುಗಿದ ಚಾಕೊಲೇಟ್ ಸಾಸ್ ಬಳಸಿ ಕೇಕ್ ….?

ಚಿಕ್ಕಮಗಳೂರು: ರಾಜ್ಯಾದ್ಯಂತ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಹೋಟೆಲ್‌ ಹಾಗೂ ಬೇಕರಿಗಳ ಮೇಲೆ ಕ್ಷಿಪ್ರ ಕಾರ್ಯಾಚರಣೆ...

ಬಿಜೆಪಿ-ಸಂಘಪರಿವಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ

ಚಿಕ್ಕಮಗಳೂರು: ಉತ್ತರಾಖಾಂಡ ರಾಜ್ಯದ ಹಾಲದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಮೈದಾನವನ್ನು...

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ...