Home ನಾಯಿ-ಹಾವು ನಡುವಿನ ಕಾಳಗದ ವೀಡಿಯೋ ವೈರಲ್
HomeLatest Newsnamma chikmagalurTarikere

ನಾಯಿ-ಹಾವು ನಡುವಿನ ಕಾಳಗದ ವೀಡಿಯೋ ವೈರಲ್

Share
Share

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ರಾಟ್‌ವೀಲರ್ ತಳಿಯ ನಾಯಿಯೊಂದಕ್ಕೂ ನಾಗರಹಾವಿನ ನಡುವೆ ನಡೆದ ಭೀಕರ ಕಾಳಗದ ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು ಕೊನೆಗೆ ಎರಡೂ ಪ್ರಾಣಿಗಳು ಜೀವ ಕಳೆದುಕೊಂಡಿವೆ.

ಸುಮಾರು ಒಂದು ಗಂಟೆಗಳ ಕಾಲ ನಡೆದ ಈ ಪೈಪೋಟಿ ಗ್ರಾಮಸ್ಥರಲ್ಲಿ ಆತಂಕ ಮತ್ತು ಅಚ್ಚರಿಯನ್ನು ಮೂಡಿಸಿದೆ.ಗ್ರಾಮದ ನಿವಾಸಿಯೊಬ್ಬರ ಮನೆಯ ಆವರಣದಲ್ಲಿ ಈ ಘಟನೆ ನಡೆದಿದೆ.

ಏಕಾಏಕಿ ಎದುರಾದ ನಾಗರಹಾವನ್ನು ಕಂಡ ನಾಯಿ, ತನ್ನ ಸ್ವಭಾವದಂತೆ ಹಾವಿನ ಮೇಲೆ ದಾಳಿ ನಡೆಸಿದೆ. ಇದರಿಂದ ಹಾವು ಕೂಡ ಪ್ರತಿದಾಳಿ ನಡೆಸಿ ನಾಯಿಯನ್ನು ಹಲವು ಬಾರಿ ಕಚ್ಚಿತು.

ಕಾಳಗದ ಅಂತ್ಯದಲ್ಲಿ ನಾಯಿ ತನ್ನ ಬಲಿಷ್ಠ ದವಡೆಹಲ್ಲುಗಳಿಂದ ನಾಗರಹಾವನ್ನು ಸಂಪೂರ್ಣವಾಗಿ ಕಚ್ಚಿ ಕೊಂದಿದೆ. ಆದರೆ ನಾಗರಹಾವಿನ ವಿಷಕಾರಿ ಕಡಿತದಿಂದ ನಾಯಿ ಕೂಡ ತೀವ್ರವಾಗಿ ಗಾಯಗೊಂಡಿತ್ತು.

ಹಾವನ್ನು ಸಾಯಿಸಿದ ಬಳಿಕ ನಾಯಿ ತನ್ನ ಬೋನಿಗೆ ತೆರಳಿ ಮಲಗಿಕೊಂಡಿದ್ದು, ಸ್ವಲ್ಪ ಸಮಯದ ಬಳಿಕ ಅಲ್ಲಿಯೇ ಉಸಿರು ಚೆಲ್ಲಿದೆ. ಹಾವಿನ ವಿಷ ನಾಯಿಯ ದೇಹದ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಚಿಕಿತ್ಸೆ ದೊರಕುವ ಮುನ್ನವೇ ನಾಯಿ ಮೃತಪಟ್ಟಿದೆ.

ಘಟನೆಯ ಬಳಿಕ ಮನೆಯವರು ನಾಗರಹಾವಿಗೆ ಶಾಸ್ರೋಕ್ತವಾಗಿ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ನಾಯಿ ತನ್ನ ಮಾಲೀಕರನ್ನು ಹಾಗೂ ಮನೆ ಆವರಣವನ್ನು ರಕ್ಷಿಸುವ ಪ್ರಯತ್ನದಲ್ಲಿ ಪ್ರಾಣ ತ್ಯಾಗ ಮಾಡಿದೆ.

ಹಾವು ತನ್ನ ಪ್ರಾಣ ಉಳಿಸಿಕೊಳ್ಳಲು ಹೋರಾಟ ಮಾಡಿದ್ದು, ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಇಟ್ಟಿಗೆ ಗ್ರಾಮದಲ್ಲಿ ಸಂಭವಿಸಿದ್ದು, ನಾಯಿ-ಹಾವು ನಡುವಿನ ದುಃಖಕರ ಕಾಳಗದ ವೀಡಿಯೋ ವೈರಲ್ ಆಗಿದೆ.

Video of dog-snake fight goes viral

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ...