Home namma chikmagalur chikamagalur ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ
chikamagalurHomeLatest Newsnamma chikmagalur

ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ

Share
Share

ಚಿಕ್ಕಮಗಳೂರು: ಹಳ್ಳಿಗಳ ಜನರ ಜೀವನ ಮಟ್ಟ ಸುಧಾರಣೆಯಾಗಬೇಕು. ಸ್ಥಳೀಯವಾಗಿ ಎಲ್ಲಾ ಕಾಲದಲ್ಲೂ ಅವರಿಗೆ ಕೂಲಿ ಕೆಲಸ ಸಿಗಬೇಕೆಂಬ ಉದ್ದೇಶದಿಂದ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿದ್ದ ಮನರೇಗಾ ಯೋಜನೆಗೆ ತಿದ್ದುಪಡಿ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಕೂಲಿ ಕಾರ್ಮಿಕರಿಗೆ, ರೈತರಿಗೆ ಅನ್ಯಾಯ ಮಾಡಲು ಹೊರಟಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ಅವರು ನಗರದ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ನಡೆದ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆ ರದ್ದುಪಡಿಸಿ ಗ್ರಾಮ ಪಂಚಾಯಿತಿ ಅಧಿಕಾರವನ್ನು ಮೊಟಕುಗೊಳಿಸಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲು ಕುರಿತು ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.

ಮನರೇಗಾ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು, ಗ್ರಾಮಗಳು ಅಭಿವೃದ್ಧಿ ಹೊಂದಿವೆ. ಪ್ರಧಾನಮಂತ್ರಿಗಳು ಬಿಡುಗಡೆ ಮಾಡುವ ಹಣ ನೇರವಾಗಿ ಗ್ರಾಮ ಪಂಚಾಯಿತಿಗಳಿಗೆ ಬರುತ್ತಿತ್ತು. ವಿಬಿ ಜಿ ರಾಮ್ ಜಿ ಯೋಜನೆಯಿಂದ ಗ್ರಾಮ ಪಂಚಾಯಿತಿಗಳು ತಮ್ಮ ಅಧಿಕಾರ ಕಳೆದುಕೊಳ್ಳಲಿವೆ ಎಂದರು.

ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಜಾರಿಗೊಳಿಸಿರುವ ಯೋಜನೆಗಳ ಹೆಸರು ಬದಲಾವಣೆ ಮಾಡುವುದೇ ಕೇಂದ್ರ ಬಿಜೆಪಿ ಸರ್ಕಾರದ ಸಾಧನೆಯಾಗಿದೆ. ಹೀಗೆ ಸಾಕಷ್ಟು ಬದಲಾವಣೆಗಳನ್ನು ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಜನರಿಗೆ ಅನ್ಯಾಯ ಮಾಡುತ್ತಿದೆ ಎಂದು ತಿಳಿಸಿದರು.

ಮಹಾತ್ಮಗಾಂಧಿಯವರ ಕನಸು ನನಸು ಮಾಡಲು ಕಾಂಗ್ರೆಸ್ ಮುಂದಾಗಿದ್ದರೇ, ಕೇಂದ್ರ ಬಿಜೆಪಿ ಸರ್ಕಾರ ಮಹಾತ್ಮಗಾಂಧಿ ಅವರ ಕನಸಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದೆ. ಬಿಜೆಪಿಗೆ ಜನಸಾಮಾನ್ಯರು, ರೈತರ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ ಎಂದು ಹೇಳಿದರು.

ಕೆಪಿಸಿಸಿ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ, ಬಿಜೆಪಿ ಮತ್ತು ಜೆಡಿಎಸ್ ದುಷ್ಟ ಶಕ್ತಿಗಳು ಒಂದಾಗಿದ್ದು, ಅವುಗಳನ್ನು ಮಟ್ಟ ಹಾಕಬೇಕಾದರೆ ಕಾಂಗ್ರೆಸ್ ಕಾರ್ಯಕರ್ತರು ಒಂದಾಗಬೇಕೆಂದು ಸಲಹೆ ನೀಡಿದರು.

ಕಾಂಗ್ರೆಸ್ ಆಡಳಿತದಲ್ಲಿ ಉತ್ತಮವಾದ ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದು, ಆ ಯೋಜನೆಯನ್ನು ಮೊಟಕುಗೊಳಿಸುವ ಮೂಲಕ ಗ್ರಾಮೀಣ ಭಾಗದ ಜನರ ಕೆಲಸವನ್ನು ಕೇಂದ್ರ ಬಿಜೆಪಿ ಸರ್ಕಾರ ಕಿತ್ತುಕೊಳ್ಳಲು ಹೊರಟಿದೆ ಎಂದು ತಿಳಿಸಿದರು.

ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು, ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಮೂಲಕ ಪಕ್ಷವನ್ನು ಸದೃಡಗೊಳಿಸಲು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಮುಖಂಡರು ಮುಂದಾಗುವಂತೆ ಮನವಿ ಮಾಡಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರೇಖಾ ಹುಲಿಯಪ್ಪಗೌಡ ಮಾತನಾಡಿ, ಮನರೇಗಾ ಯೋಜನೆಯ ಹೆಸರನ್ನು ಬದಲಾಯಿಸುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ದಿಕ್ಕು ತಪ್ಪಿಸುವ ಕೆಲಸವನ್ನು ಮಾಡಲು ಹೊರಟಿದೆ. ಹೆಸರು ಬದಲಾಯಿಸುವುದೇ ಬಿಜೆಪಿ ಸರ್ಕಾರದ ಸಾಧನೆಯಾಗಿದೆ ಎಂದು ವ್ಯಂಗ್ಯವಾಡಿದರು.

ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಭೆಯನ್ನು ಮಾಡುವ ಮೂಲಕ ವಿಬಿ ಜಿ ರಾಮ್ ಜಿ ವಿರುದ್ಧ ಹೋರಾಟ ಮಾಡಲು ಎಲ್ಲರೂ ಮುಂದಾಗಬೇಕು. ಗ್ರಾಮೀಣ ಜನರಿಗೆ ಜನ ಜಾಗೃತಿ ಮೂಡಿಸುವ ಕೆಲಸವನ್ನು ಕಾಂಗ್ರೆಸ್ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಮಾಡಬೇಕು ಎಂದರು.

ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಹಮದ್ ನಯಾಜ್, ಜಿಲ್ಲಾ ಕಾಂಗ್ರೆಸ್ ಎಸ್.ಸಿ ಘಟಕ ಜಿಲ್ಲಾಧ್ಯಕ್ಷ ಮಲ್ಲೇಶಸ್ವಾಮಿ ಮಾತನಾಡಿದರು. ಚಿಕ್ಕಮಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ಕ.ರಾ.ಕೃ.ಉ.ಸಂ.ರಪ್ತು ನಿಗಮ ಅಧ್ಯಕ್ಷ ಬಿ.ಹೆಚ್.ಹರೀಶ್, ನಗರಸಭಾ ಸದಸ್ಯರಾದ ಜಾವಿದ್, ಪರಮೇಶ್ ರಾಜ್ ಅರಸ್, ಶಾದಬ್ ಆಲಂ ಖಾನ್, ಮಂಜುಳ ಲಕ್ಷ್ಮಣ್, ಜಿಲ್ಲಾ ವಕ್ತಾರ ರೂಬೆನ್ ಮೊಸಸ್, ತಾಲ್ಲೂಕು ಪ್ರಚಾರ ಸಮಿತಿ ಅಧ್ಯಕ್ಷ ಬೆಟ್ಟಗೆರೆ ಪ್ರವೀಣ್, ನಗರಾಧ್ಯಕ್ಷ ತನೋಜ್ ಕುಮಾರ್, ಮುಖಂಡರಾದ ಅತೀಕ್ ಖೈಸರ್, ಜೇಮ್ಸ್ ಡಿಸೋಜಾ, ಕಾಲುಬಾ, ಹೆಚ್.ಸಿ.ಗಂಗಾಧರ್, ಕೆ.ಭರತ್, ಆಶ್ರಯ ಸಮಿತಿ, ಸಿಡಿಎ, ನಗರಸಭೆ ಸದಸ್ಯರು, ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Protest against the central BJP government

Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...