Home namma chikmagalur chikamagalur ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ
chikamagalurHomeLatest Newsnamma chikmagalur

ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ

Share
Share
ಚಿಕ್ಕಮಗಳೂರು: ಸ್ಯಾಂಡಲ್‌ವುಡ್ ನಟ ಕಿಚ್ಚ ಸುದೀಪ್ ವಿರುದ್ಧ ವಂಚನೆ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬೆಂಗಳೂರು ಪೊಲೀಸ್ ಕಮಿಷನ‌ರ್ ಕಚೇರಿಗೆ ಚಿಕ್ಕಮಗಳೂರು ಮೂಲದ ವ್ಯಕ್ತಿ ದೂರು ನೀಡಿದ್ದಾರೆ.
ಚಿಕ್ಕಮಗಳೂರಿನ ದೀಪಕ್ ಮಯೂರ್ ಪಟೇಲ್ ಎಂಬುವವರು ದೂರು ನೀಡಿದ್ದು, ಚಿತ್ರೀಕರಣದ ನೆಪದಲ್ಲಿ ತಮಗೆ ಲಕ್ಷಾಂತರ ರೂ. ನಷ್ಟವಾಗಿದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಸುದೀಪ್ ಅವರ ಸಹ ನಿರ್ಮಾಪಕರಾದ ಮಹೇಶ್ ಮತ್ತು ಗಡ್ಡ ವಿಜಿ ಅವರು ಈ ಹಿಂದೆ ಚಿತ್ರೀಕರಣಕ್ಕಾಗಿ ಬಂದಿದ್ದರು ಎಂದು ದೀಪಕ್ ತಮ್ಮ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಈ ಕುರಿತು 2026 ರಿಂದಲೂ ಅವರು ಹಲವು ಬಾರಿ ಚಿಕ್ಕಮಗಳೂರು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹಾಗೂ ಬೆಂಗಳೂರು ಕಮಿಷನರ್ ಅವರಿಗೆ ದೂರು ನೀಡುತ್ತಾ ಬಂದಿದ್ದು, ಈ ಪ್ರಕರಣವು ಈ ಹಿಂದೆ ನ್ಯಾಯಾಲಯದ ಮೆಟ್ಟಿಲು ಸಹ ಏರಿತ್ತು.
‘ವಾರಸ್ಥಾರ’ ಧಾರಾವಾಹಿ ಚಿತ್ರೀಕರಣಕ್ಕಾಗಿ ಎರಡು ವರ್ಷಗಳ ಕಾಲ ಅನುಮತಿ ಕೋರಿ ಬಂದಿದ್ದ ತಂಡವು, ಸುಮಾರು ನಾಲ್ಕು ತಿಂಗಳುಗಳ ಕಾಲ ಮಾತ್ರ ಚಿತ್ರೀಕರಣ ನಡೆಸಿತ್ತು. ಈ ಸಂದರ್ಭದಲ್ಲಿ ಕಲಾವಿದರ ವಾಸ್ತವ್ಯಕ್ಕಾಗಿ ತೋಟದಲ್ಲಿದ್ದ ಕಾಫಿ ಗಿಡಗಳು, ಸಿಲ್ವರ್ ಸೇರಿದಂತೆ ಬೆಲೆಬಾಳುವ ಮರಗಳನ್ನು ಕಡಿದು ಶೆಡ್ ನಿರ್ಮಾಣ ಮಾಡಲಾಗಿತ್ತು. ಇದರಿಂದ ತಮ್ಮ ತೋಟಕ್ಕೆ ವ್ಯಾಪಕ ಹಾನಿಯಾಗಿದೆ ಎಂದು ದೀಪಕ್ ಆರೋಪಿಸಿದ್ದಾರೆ.
ಆದರೆ, ನೋಟ್ ಬ್ಯಾನ್ ಆದ ಸಂದರ್ಭದಲ್ಲಿ ಚಿತ್ರೀಕರಣ ತಂಡವು ಇದ್ದಕ್ಕಿದ್ದಂತೆ ಬೆಂಗಳೂರಿಗೆ ವಾಪಸ್ ತೆರಳಿದ್ದು, ಸುಮಾರು 80 ಸಾವಿರ ರೂ. ಹಣವನ್ನು ಬಾಕಿ ಉಳಿಸಿಕೊಂಡಿದೆ. ಅಷ್ಟೇ ಅಲ್ಲದೆ, ಹಾನಿಗೊಳಗಾದ ತೋಟದ ಜಾಗವನ್ನು ಸರಿಪಡಿಸದೆ ಹಾಗೆಯೇ ಬಿಟ್ಟು ಹೋಗಲಾಗಿದೆ. ತಮಗಾದ ನಷ್ಟಕ್ಕೆ ಸೂಕ್ತ ಪರಿಹಾರ ಸಿಕ್ಕಿಲ್ಲ ಎಂಬ ಕಾರಣಕ್ಕೆ ದೀಪಕ್ ಅವರು ಇದೇ ಜ.16 ರಂದು ಬೆಂಗಳೂರು ಕಮಿಷನ‌ರ್ ಕಚೇರಿಗೆ ಮತ್ತೊಮ್ಮೆ ದೂರು ಸಲ್ಲಿಸಿದ್ದಾರೆ.
Sandalwood actor Kiccha Sudeep accused of fraud
Share

Leave a comment

Leave a Reply

Your email address will not be published. Required fields are marked *

Don't Miss

ಚಿಕ್ಕಮಗಳೂರು ತಾಲೂಕು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರ್ಪಡೆಗೆ ಆಗ್ರಹ

ಚಿಕ್ಕಮಗಳೂರು: ಈ ಬಾರಿಯ ಮುಂಗಾರು ಅವಧಿಯಲ್ಲಿ ಚಿಕ್ಕಮಗಳೂರು ತಾಲೂಕಿನಲ್ಲಿ ತೀವ್ರ ಮಳೆ ಕೊರತೆಯಾಗಿದ್ದು, ಕೃಷಿ, ತೋಟಗಾರಿಕೆ, ಕುಡಿಯುವ ನೀರು ಹಾಗೂ ಜಾನುವಾರುಗಳಿಗೆ ಮೇವಿನ ಸಮಸ್ಯೆ ಎದುರಾಗುವ ಆತಂಕವಿದೆ. ಈ ಹಿನ್ನೆಲೆಯಲ್ಲಿ ಚಿಕ್ಕಮಗಳೂರು...

ಕಡೂರು ಬಸ್ ನಿಲ್ದಾಣದಲ್ಲಿ 50 ಗ್ರಾಂ ತೂಕದ ಚಿನ್ನದ ಸರ ಕಳ್ಳತನ

ಕಡೂರು: ಜನದಟ್ಟಣೆಯನ್ನೇ ಬಂಡವಾಳ ಮಾಡಿಕೊಂಡ ಕಳ್ಳರ ಗ್ಯಾಂಗ್ ಒಂದು, ಬಸ್ ಹತ್ತುವ ವೇಳೆ ಮಹಿಳೆಯ ಗಮನ ಬೇರೆಡೆ ಸೆಳೆದು ಕುತ್ತಿಗೆಯಲ್ಲಿದ್ದ ಬರೋಬ್ಬರಿ 50 ಗ್ರಾಂ ತೂಕದ ಚಿನ್ನದ ಸರವನ್ನು ಕ್ಷಣಾರ್ಧದಲ್ಲಿ ಎಗರಿಸಿ...

Related Articles

ಕೋಟ್ಯಂತರ ರೂಪಾಯಿ ವಂಚಿಸಿದ ನಕಲಿ ಲೇಡಿ ಪಿಎಸ್‌ಐ ಬಂಧನ

ಚಿಕ್ಕಮಗಳೂರು: ತಾನು ಬೆಂಗಳೂರಿನ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಎಂದು ನಂಬಿಸಿ, ಚಿನ್ನ, ಹಣ, ಮೊಬೈಲ್ ಹಾಗೂ ಕಾರು...

ನಲಪಾಡ್ ಹೇಳಿಕೆ ಖಂಡಿಸಿ ಜೆಡಿಎಸ್ ಅಲ್ಪಸಂಖ್ಯಾತ ಘಟಕ ಆಕ್ರೋಶ

ಚಿಕ್ಕಮಗಳೂರು: ಕೇಂದ್ರ ಸಚಿವ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಮತ್ತು ಜೆಡಿಎಸ್ ರಾಜ್ಯ ಯುವ ಘಟಕದ...

ಮಳಲೂರು ಏತ ನೀರಾವರಿ ಯೋಜನೆ ಸಮಸ್ಯೆ ಬಗೆಹರಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಮಳಲೂರು ಏತ ನೀರಾವರಿ ಅನುಷ್ಠಾನ ಮತ್ತು ಅರಸನ ನಾಲೆ ಪುನಶ್ಚೇತನ ಯೋಜನೆಗಳ ಕಾಮಗಾರಿಗಳಿಗೆ ಉಂಟಾಗಿರುವ...

2ಬಿ ಮೀಸಲಾತಿ ಮರುಸ್ಥಾಪನೆಗೆ ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಚಿಕ್ಕಮಗಳೂರು: ರಾಜ್ಯದಲ್ಲಿ ಮುಸ್ಲಿಂ ಸಮುದಾಯಕ್ಕೆ ನೀಡಲಾಗುತ್ತಿದ್ದ ಶೇ.4ರಷ್ಟು 2ಬಿ ಮೀಸಲಾತಿಯನ್ನು ಮರುಸ್ಥಾಪಿಸಲು ರಾಜ್ಯ ಸರ್ಕಾರ ಕೂಡಲೇ...