Home namma chikmagalur chikamagalur ಕಳೆದುಹೋದ ಮೊಬೈಲ್ ಪತ್ತೆ- ವಾರಸುದಾರರಿಗೆ ಫೋನ್ ಹಸ್ತಾಂತರಿಸಿದ ಪೊಲೀಸರು
chikamagalurLatest Newsnamma chikmagalur

ಕಳೆದುಹೋದ ಮೊಬೈಲ್ ಪತ್ತೆ- ವಾರಸುದಾರರಿಗೆ ಫೋನ್ ಹಸ್ತಾಂತರಿಸಿದ ಪೊಲೀಸರು

Share
Share

ಚಿಕ್ಕಮಗಳೂರು: ಕೇಂದ್ರ ಸರ್ಕಾರದ CEIR (Central Equipment Identity Register) ಪೋರ್ಟಲ್ ಬಳಸಿ ಪತ್ತೆ ಮಾಡಲಾದ ಮೊಬೈಲ್ ಫೋನ್‌ಗಳನ್ನು ಚಿಕ್ಕಮಗಳೂರು ನಗರ ಮತ್ತು ಲಕ್ಕವಳ್ಳಿ ಪೊಲೀಸ್ ಠಾಣೆಗಳಲ್ಲಿ ಆಯಾ ವಾರಸುದಾರರಿಗೆ ಅಧಿಕೃತವಾಗಿ ಹಿಂದಿರುಗಿಸಲಾಗಿದೆ.

ಮೊಬೈಲ್ ಕಳೆದುಕೊಂಡಿದ್ದ ಸಾರ್ವಜನಿಕರಿಗೆ ಈ ತಂತ್ರಜ್ಞಾನವು ದೊಡ್ಡ ಮಟ್ಟದ ನೆರವು ನೀಡುತ್ತಿದ್ದು, ಪೊಲೀಸರು ಯಶಸ್ವಿಯಾಗಿ ಮೊಬೈಲ್‌ಗಳನ್ನು ಪತ್ತೆ ಹಚ್ಚಿ ಮಾಲೀಕರಿಗೆ ಒಪ್ಪಿಸಿದ್ದಾರೆ.

ಸಾರ್ವಜನಿಕರು ತಮ್ಮ ಮೊಬೈಲ್ ಫೋನ್ ಕಳೆದುಕೊಂಡ ಸಂದರ್ಭದಲ್ಲಿ ತಕ್ಷಣವೇ ಎಚ್ಚೆತ್ತುಕೊಂಡು ಮೊಬೈಲ್ ದಾಖಲಾತಿಗಳು, ವೈಯಕ್ತಿಕ ಗುರುತಿನ ಚೀಟಿ ಮತ್ತು ಕೆ.ಎಸ್.ಪಿ ಮೊಬೈಲ್ ಆ್ಯಪ್ ಮೂಲಕ ಪಡೆದ ದೂರಿನ ಪ್ರತಿಯೊಂದಿಗೆ CEIR ವೆಬ್ ಪೋರ್ಟಲ್‌ನಲ್ಲಿ (https://www.ceir.gov.in) ಕಡ್ಡಾಯವಾಗಿ ವರದಿ ದಾಖಲಿಸುವಂತೆ ಪೊಲೀಸ್ ಇಲಾಖೆ ಮನವಿ ಮಾಡಿದೆ.

ಈ ಪೋರ್ಟಲ್‌ನಲ್ಲಿ ದೂರು ನೀಡುವುದರಿಂದ ಕಳೆದುಹೋದ ಮೊಬೈಲ್‌ಗಳನ್ನು ಬ್ಲಾಕ್ ಮಾಡಲು ಮತ್ತು ಸುಲಭವಾಗಿ ಪತ್ತೆಹಚ್ಚಲು ಸಾಧ್ಯವಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Police find lost mobile phone – hand over phone to heirs

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...