Home namma chikmagalur chikamagalur ನಿಷ್ಠಾವಂತ ಕಾರ್ಯಕರ್ತರನ್ನು ಆಯ್ಕೆ ಮಾಡಲು ನಿರ್ಧಾರ
chikamagalurHomeLatest Newsnamma chikmagalur

ನಿಷ್ಠಾವಂತ ಕಾರ್ಯಕರ್ತರನ್ನು ಆಯ್ಕೆ ಮಾಡಲು ನಿರ್ಧಾರ

Share
Share

ಚಿಕ್ಕಮಗಳೂರು: ಕೆಪಿಸಿಸಿ ನಿರ್ದೇಶನದ ಮೇರೆಗೆ ಬ್ಲಾಕ್ ಕಾಂಗ್ರೆಸ್ ಸಮಿತಿಗೆ ಮಾದ್ಯಮ ವಕ್ತಾರರನ್ನು ಆಯ್ಕೆ ಮಾಡಲು ಸಾಮರ್ಥ್ಯವುಳ್ಳ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಪಕ್ಷದ ತತ್ವ ಸಿದ್ದಾಂತ, ಚಾತುರ್ಯ ಹಾಗೂ ನಿ?ವಂತರಾಗಿರುವ ಕಾರ್ಯಕರ್ತರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ವೀಕ್ಷಕರಾಗಿ ಸೂರ್ಯ ಮುಕುಂದರಾವ್ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಆಯೋಜಿಸಿದ್ಧ ಜಿಲ್ಲಾ ೧೨ ಬ್ಲಾಕ್ ಕಾಂಗ್ರೆ ಸ್ ಸಮಿತಿಗೆ ಮಾಧ್ಯಮ ವಕ್ತಾರ ನೇಮಕ ಸಂಬಂಧ ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಆಕಾಂಕ್ಷೆ ಹೊಂದಿರುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಪಿ.ಅಂಶುಮಂತ್ ಅಭ್ಯರ್ಥಿಗಳು ಮುಕ್ತ್ತ ಮನಸ್ಸುನಿಂದ ಮಾತಾಡುವ, ಸುದ್ದಿ ಗೋಷ್ಠಿಯಲ್ಲಿ, ಪತ್ರಿಕೆ ಹೇಳಿಕೆಯ ಹಾಗೂ ಟಿವಿ ಮಾಧ್ಯಮಗಳಲ್ಲೂ ಚರ್ಚೆ ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಜನವಿರೋಧಿ ನೀತಿಗಳನ್ನು ಖಂಡಿಸುವ, ಸೈದ್ಧಾಂತಿಕವಾಗಿ ಪಕ್ಷದ ಮಾನದಂಡ ಪ್ರಕಾರ ಕಾರ್ಯನಿರ್ವಹಣೆ ಮಾಡುವ ಕಾರ್ಯಕರ್ತರನ್ನು ನೇಮಕ ಮಾ ಡಲಾಗುವುದು ಎಂದು ಹೇಳಿದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಂ.ಸಿ.ಶಿವಾನಂದ ಸ್ವಾಮಿ ಸಭೆಯ ಉದ್ದೇಶ ಮತ್ತು ಮಹತ್ವ ತಿಳಿಸಿ ಸಭೆಯಲ್ಲಿ ಭಾಗವಹಿಸಿದ ಆಕಾಂಕ್ಷೆ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಸಂಗ್ರಹಿಸಿ ವರಿ?ರ ಸಮಿತಿಗೆ ವೀಕ್ಷಕರ ಮೂಲಕ ಸಲ್ಲಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತಾರರಾದ ರವೀಶ್, ಹೆಚ್.ಹೆಚ್.ದೇವರಾಜ್, ಜಿಲ್ಲಾ ಮಾದ್ಯಮ ವಕ್ತಾರ ಎಲ್.ಟಿ.ಹೇಮಣ್ಣ ಮುಖಂಡರುಗಳಾದ ಅನಂತ್, ಶೃಂಗೇರಿ ಅಶೋಕ್, ನಗರ ಕಾಂಗ್ರೆಸ್ ಸಮಿತಿ ಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಕಾರ್ಯ ಕರ್ತರು ಭಾಗವಹಿಸಿದ್ದರು.

Decision to select loyal workers

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...