Home Crime News ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ
Crime NewsHomeLatest Newsnamma chikmagalurTarikere

ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ

Share
Share

ತರೀಕೆರೆ: ತಾಲ್ಲೂಕಿನ ಲಕ್ಕವಳ್ಳಿ ಹೋಬಳಿಯ ಬಾವಿಕೆರೆ ಗ್ರಾಮದಲ್ಲಿ ಹಾಡುಹಗಲೇ ಕಳ್ಳತನ ನಡೆದಿದ್ದು, ದಂಪತಿಗಳು ಕೆಲಸಕ್ಕೆ ಹೋದ ಸಮಯದಲ್ಲಿ ಕಳ್ಳರು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ನಗದನ್ನು ದೋಚಿದ್ದಾರೆ.

ಬಾವಿಕೆರೆ ಗ್ರಾಮದ ನಿವಾಸಿಗಳಾದ ನಗೀನಾ ಬಾನು ಮತ್ತು ಅವರ ಪತಿ ಮೊಹಮ್ಮದ್ ಖಾಲೀಂ ಮನೆಗೆ ಬೀಗ ಹಾಕಿಕೊಂಡು ಗ್ರಾಮದ ಪೆಟ್ರೋಲ್ ಬಂಕ್ ಎದುರಿರುವ ‘ಕೆ.ಜಿ.ಎನ್ ಚಿಕನ್ ಅಂಗಡಿ’ಗೆ ಕೆಲಸಕ್ಕೆ ಹೋಗಿದ್ದರು. ರಾತ್ರಿ 8 ಗಂಟೆಗೆ ವಾಪಸ್ ಬಂದಾಗ ಮನೆಯ ಮುಂಭಾಗದ ಬಾಗಿಲಿನ ಬೀಗ ಮುರಿದಿರುವುದು ಕಂಡುಬಂದಿದೆ.

ಮನೆಯೊಳಗೆ ಪರಿಶೀಲಿಸಿದಾಗ, ಗಾಡ್ರೆಜ್ ಬೀರುವಿನ ಲಾಕರ್ ಮುರಿದು ಸುಮಾರು 60,000 ರೂ. ಮೌಲ್ಯದ 6 ಗ್ರಾಂ ತೂಕದ ಎರಡು ಚಿನ್ನದ ಚೈನ್ ಹಾಗೂ ಕೋಳಿ ಮಾರಾಟ ಮಾಡಿ ಕೂಡಿಟ್ಟಿದ್ದ 80,000 ರೂ. ನಗದು ಹಣವನ್ನು ಕಳವು ಮಾಡಿರುವುದು ಬೆಳಕಿಗೆ ಬಂದಿದೆ.

ಒಟ್ಟು 1,40,000 ರೂ. ಮೌಲ್ಯದ ಸ್ವತ್ತುಗಳನ್ನು ಕಳ್ಳರು ದೋಚಿದ್ದಾರೆ. ಈ ಸಂಬಂಧ ನಗೀನಾ ಬಾನು ನೀಡಿದ ದೂರಿನ ಮೇರೆಗೆ ಲಕ್ಕವಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

Theft in broad daylight in Bavikere village

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...