Home namma chikmagalur chikamagalur ಜಿಲ್ಲೆಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಆಧ್ಯತೆ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಸಂಚಾರ ದಟ್ಟಣೆ ನಿರ್ವಹಣೆಗೆ ಆಧ್ಯತೆ

Share
Share

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಅಪರಾಧ ಪ್ರಕರಣಗಳ ನಿಯಂತ್ರಣ ಹಾಗೂ ಸಂಚಾರ ದಟ್ಟಣೆ ನಿರ್ವಹಣೆಗೆ ಆಧ್ಯತೆ ನೀಡುವುದಾಗಿ ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾಹಿತಿ ತಂತ್ರಜ್ಞಾನದ ಜೊತೆಗೆ ಮಾಹಿತಿ ಬುದ್ಧಿಮತ್ತೆಯ ಕಣ್ಗಾವಲನ್ನಿರಿಸಿ ಕಾನೂನು ಸುವ್ಯವಸ್ಥೆ ಕಾಪಾಡಲಾಗುವುದು. ಪ್ರಥಮ ಮತ್ತು ಅತೀ ಹೆಚ್ಚಿನ ಆಧ್ಯತೆ ಕೋಮು ಸೌಹಾರ್ಧತೆ ಕಾಪಾಡುವುದಾಗಿದೆ. ಕೊಮು ಸಾಮರಸ್ಯ ಕದಡುವ ಪ್ರಯತ್ನ ಮಾಡುವವರು ಯಾರೇ ಆಗಿದ್ದರೂ ಅದನ್ನು ಕಟ್ಟು ನಿಟ್ಟಾಗಿ ನಿಯಂತ್ರಿಸುತ್ತೇವೆ. ಇದು ಕೇವಲ ಪೊಲೀಸ್ ಇಲಾಖೆ ಜವಾಬ್ದಾರಿ ಅಲ್ಲ. ಎಲ್ಲರ ಹೊಣೆಗಾರಿಕೆ ಇದೆ ಎಂದು ಹೇಳಿದರು.

ಇದರ ಜೊತೆಗೆ ನೈತಿಕ ಪೊಲೀಸ್‌ಗಿರಿ ಮತ್ತು ದ್ವೇಷ ಭಾಷಣ ಮಾಡುವುದನ್ನು ಸಹಿಸುವುದಿಲ್ಲ. ಈ ವಿಚಾರದಲ್ಲಿ ಪೊಲೀಸರು ಏನು ಕ್ರಮ ಕೈಗೊಳ್ಳಬೇಕು ಅದನ್ನು ಮಾಡುತ್ತದೆ. ಅದನ್ನು ಹೊರತು ಪಡಿಸಿ ಯಾರಾದರೂ ನೈತಿಕ ಪೊಲೀಸ್‌ಗಿರಿ ತೋರಿದರೆ ಪ್ರಕರಣ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು.

ಅಪರಾಧ ನಿಯಂತ್ರಣ ಸಂಬಂಧ ಜಿಲ್ಲೆಯ ಎಲ್ಲಾ ಠಾಣೆಗಳಿಗೆ ಸೂಚನೆಗಳನ್ನು ನೀಡಿದ್ದೇವೆ. ಅದರಲ್ಲೂ ಮಹಿಳೆಯರು ಮತ್ತು ಮಕ್ಕಳಿಗೆ ಸಂಬಂಧ ಪಟ್ಟ ಯಾವುದೇ ಪ್ರಕರಣಗಳು ದಾಖಲಾದರೂ ತಕ್ಷಣ ಸ್ಪಂದಿಸಿ ಕ್ರಮ ತೆಗೆದುಕೊಳ್ಳಬೇಕು. ಈ ವಿಚಾರದಲ್ಲಿ ವಿಳಂಭ ಮಾಡುವುದು ಒಳ್ಳೆಯ ಸಂಗತಿಯಲ್ಲ. ಈ ಬಗ್ಗೆ ಠಾಣೆ ಮಟ್ಟದಲ್ಲಿ ನಿಗಾ ವಹಿಸುತ್ತೇವೆ ಎಂದರು.

ಮಹಿಳೆ ಮತ್ತು ಮಕ್ಕಳಿಗೆ ಸಂಬಂಧಿಸಿದ ಪ್ರಕರಣಗಳನ್ನು ನಿರ್ವಹಣೆ ಮಾಡುವ ಕುರಿತಾಗಿ ಪ್ರತಿ ಠಾಣೆಯ ಸಿಬ್ಬಂದಿಗಳಿಗೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
ಸಂಘಟಿತ ಅಪರಾಧ ಮತ್ತು ರೌಡಿಯಿಸಂನಲ್ಲಿ ಭಾಗಿಯಾಗುವವರ ಬಗ್ಗೆ ಮಾಹಿತಿ ಪಡೆದು. ಮುಂದಿನ ಅಪರಾಧ ನಿಯಂತ್ರಣ ಸಭೆಯಲ್ಲಿ ಇಂತಹ ಮಂದಿ ಹಾಗೂ ಪ್ರಕರಣಗಳು ಎಷ್ಟಿವೆ ಎನ್ನುವ ಅಂಕಿ ಅಂಶ ಪಡೆದು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಚಿಕ್ಕಮಗಳೂರು ಜಿಲ್ಲೆಗೆ ಅತೀ ಹೆಚ್ಚು ಪ್ರವಾಸಿಗರು ಭೇಟಿ ನೀಡುತ್ತಾರೆ ಅವರಿಗೆ ಸೂಕ್ತ ರಕ್ಷಣೆ ನೀಡುವ ಜವಾಬ್ದಾರಿ ಪೊಲೀಸ್ ಇಲಾಖೆ ಸೇರಿ ಎಲ್ಲರ ಮೇಲಿದೆ. ಇದೇ ವೇಳೆ ಮಾದಕ ವಸ್ತು ಬಳಕೆ ಮತ್ತು ಮಾರಾಟ ನಿಯಂತ್ರಣಕ್ಕೂ ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ನಗರದಲ್ಲಿ ಸಂಚಾರ ದಟ್ಟಣೆ ನಿಯಂತ್ರಣ ಕುರಿತು ಜಿಲ್ಲಾಡಳಿತ ಹಾಗೂ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮತ್ತಿತರೆ ಸಿಬ್ಬಂದಿಗಳ ಜೊತೆ ಸಮಾಲೋಚನೆ ನಡೆಸಿ ಕ್ರಮ ಜರುಗಿಸಲಾಗುವುದು. ಈ ಸಂಬಂಧ ಒಂದು ತಿಂಗಳ ಕಾಲ ಸಾರ್ವಜನಿಕರಿಗೆ ವಾಹನ ಸಂಚಾರ ನಿಯಂತ್ರಣ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು. ಸೈಬರ್ ಅಪರಾಧಗಳ ನಿಯಂತ್ರಣ ಸಂಬಂಧ ನಮ್ಮ ಸಿಬ್ಬಂದಿಗಳಿಗೂ ಹೆಚ್ಚಿನ ತರಬೇತಿ ಅಗತ್ಯವಿದೆ ಅದನ್ನು ಒದಗಿಸಲಾಗುವುದು ಎಂದು ತಿಳಿಸಿದರು.

Traffic congestion management a priority in the district

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...