Home namma chikmagalur chikamagalur ಗಣರಾಜ್ಯೋತ್ಸವ ದೇಶದ ಪ್ರಗತಿಗೆ ಸಂಕಲ್ಪ ಕೈಗೊಳ್ಳುವ ದಿನ
chikamagalurHomeLatest Newsnamma chikmagalur

ಗಣರಾಜ್ಯೋತ್ಸವ ದೇಶದ ಪ್ರಗತಿಗೆ ಸಂಕಲ್ಪ ಕೈಗೊಳ್ಳುವ ದಿನ

Share
Share

ಚಿಕ್ಕಮಗಳೂರು:  ಗಣರಾಜ್ಯೋತ್ಸವ ಕೇವಲ ಸಂಭ್ರಮದ ದಿನ ಮಾತ್ರವಲ್ಲ, ಪ್ರತಿ ಭಾರತೀಯನ ಪಾಲಿಗೆ ಆತ್ಮಾವಲೋಕನ ಮತ್ತು ದೇಶದ ಪ್ರಗತಿಗೆ ಸಂಕಲ್ಪ ಕೈಗೊಳ್ಳುವ ದಿನ ಎಂದು ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.

ಜಿಲ್ಲಾಡಳಿತದ ವತಿಯಿಂದ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಸೋಮವಾರ ನಡೆದ 77ನೇ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ, ಧ್ವಜ ವಂದನೆ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು, “ಭೂತ ಕಾಲದ ಪರಂಪರೆ, ವರ್ತಮಾನದ ಸಮಸ್ಯೆ ಮತ್ತು ಭವಿಷ್ಯತ್ತಿನ ಕನಸು ಎಂಬ ’ತ್ರಿಕಾಲ’ದ ಅರಿವು, ಸ್ಪಷ್ಟತೆ ಪ್ರತಿ ಪ್ರಜೆಗೂ ಮುಖ್ಯ. ಆ ತ್ರಿಕಾಲ ಜ್ಞಾನವೇ ಬದುಕಿನ ಯಶಸ್ಸು, ದೇಶದ ಸುಭಿಕ್ಷೆ ಮತ್ತು ಸಮೃದ್ಧಿಗೆ ದಾರಿ ದೀಪ,” ಎಂದರು.

“ಭಾರತವು ಸ್ವತಂತ್ರ ಪಡೆದ ಬಳಿಕ ಬ್ರಿಟೀಷರು, “ನೀವು ಸ್ವಾತಂತ್ರ್ಯವೇನೋ ಪಡೆದಿರಿ. ಆದರೆ, ನಿಮ್ಮ ಆಡಳಿತವನ್ನು ನೀವೇ ಹೇಗೆ ಮಾಡಿಕೊಳ್ಳುತ್ತೀರಿ ? ಇಷ್ಟೊಂದು ಭಾಷೆ ಇರುವ ಈ ದೊಡ್ಡ ದೇಶದಲ್ಲಿ ಸಂವಿಧಾನ ರಚನೆ ಅಸಾಧ್ಯ” ಎಂದು ಸವಾಲಿನ ಮಾತುಗಳನ್ನು ಆಡಿದ್ದರು. ಈ ಮಾತನ್ನು ಸ್ವೀಕರಿಸಿದ ಭಾರತೀಯ ನಾಯಕರು ಸಭೆ ಸೇರಿ ನಮ್ಮದೇ ಆದ ಸಂವಿಧಾನ ರಚನಗೆ ತೀರ್ಮಾನಿಸಿದ್ದರು. ಸಂವಿಧಾನ ರಚನೆಗೆ ರಾಜಪ್ರಭುತ್ವದ ಸಮಸ್ಯೆ, ಗಣರಾಜ್ಯ ವ್ಯವಸ್ಥೆಗೆ ಅಡ್ಡಗಾಲು ಹಾಕುವ ಪರಿಸ್ಥಿತಿ ಇದ್ದರೂ ಎಲ್ಲಾ ಭಾರತೀಯ ನಾಯಕರ ಪ್ರಯತ್ನದಿಂದಾಗಿ ಡಾ.ಬಿ.ಆರ್.ಅಂಬೇಡ್ಕರ್ ಅವರ ನೇತೃತ್ವದಲ್ಲಿ ಸಂವಿಧಾನ ಕರಡು ಸಮಿತಿ ರಚನೆಯಾಯಿತು,” ಎಂದು ಹೇಳಿದ ಸಚಿವರು, ಸಂವಿಧಾನ ಯಾವ ರೀತಿ ರಚನಯಾಯಿತು ಎಂಬ ಕುರಿತು ವಿವರಿಸಿದರು.

“1946ರ ನವೆಂಬರ್ 26ರಂದ ಸಂವಿಧಾನ ರಚನಾ ಕಾರ್ಯ ಪೂರ್ಣಗೊಂಡಿದ್ದು, ಆ ದಿನವನ್ನು ನಾವು ’ರಾಷ್ಟ್ರೀಯ ಸಂವಿಧಾನ ದಿನ’ ಎಂದು ಆಚರಿಸುತ್ತೇವೆ. 1950ರ ಜವರಿ 26 ರಂದು ಅಂದಿನ ರಾಷ್ಟ್ರಪತಿ ಬಾಬು ರಾಜೇಂದ್ರಪ್ರಸಾದ್ ಅವರು ಅಂಗೀಕರಿಸುವುದರೊಂದಿಗೆ ಭಾರತದ ಚರಿತ್ರೆಯಲ್ಲಿ ಹೊಸ ಅಧ್ಯಾಯವೇ ತೆರೆದುಕೊಂಡಿತು. ಭರತ ಭೂಮಿ ’ಗಣರಾಜ್ಯ’ವಾದ ಐತಿಹಾಸಿಕ ದಿನವನ್ನು ನಾವು ’ಗಣರಾಜ್ಯೋತ್ಸವ’ದ ದಿನವನ್ನಾಗಿ ಆಚರಿಸುತ್ತಾ ಬಂದಿದ್ದೇವೆ,” ಎಂದರು.

“ಭಾರತದ ವೈಶಿಷ್ಠ್ಯಗಳು ನೂರಾರು. ಶಾಂತಿ ನಮ್ಮ ಮಂತ್ರವಾದರೆ, ಸಹನೆ ನಮ್ಮ ಶಕ್ತಿ. ಸೌಹಾರ್ದತೆ ನಮ್ಮ ಹುಟ್ಟು ಗುಣ, ಕೂಡಿ ಬಾಳುವುದು ನಮ್ಮ ಪರಂಪರೆ, ಅನೇಕತೆಯಲ್ಲಿ ಏಕತೆ ನಮ್ಮ ವಿಶೇಷ, ಸಮನ್ವಯತೆ ನಮ್ಮ ಸಹಜತೆ, ಸರ್ವ ಧರ್ಮ ಸಮಭಾವ ನಮ್ಮ ಶ್ರೇಷ್ಠತೆ, ಸಕಲ ಜೀವಾತ್ಮಗಳನ್ನು ಪ್ರೀತಿಸುವುದು ನಮ್ಮ ಔದಾರ್ಯ,” ಎಂದು ಹೇಳಿದರು.

“ಸ್ವಾತಂತ್ರ್ಯಾನಂತರ ಭಾರತೀಯರು ಎದುರಿಸುತ್ತಿದ್ದ ಬಡತನ, ಅನಕ್ಷರತೆ, ನಿರುದ್ಯೋಗಗಳಂತಹ ಜ್ವಲಂತ ಸಮಸ್ಯೆಗಳನ್ನು ಸಮರ್ಥವಾಗಿ ಎದುರಿಸಿದ ಕಾಂಗ್ರೆಸ್ ಪಕ್ಷ, ಪಂಡಿತ್ ಜವಾಹರ್ ಲಾಲ್ ನೆಹರು ಅವರ ಸಾರಥ್ಯದಲ್ಲಿ ಪ್ರಗತಿಪರ ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿತು. ಬಳಿಕ ಪಂಚವಾರ್ಷಿಕ ಯೋಜನೆಗಳ ಮೂಲಕ ಕೈಗಾರಿಕಾ ಕ್ರಾಂತಿ, ಹಸಿರು ಕ್ರಾಂತಿ, ಕ್ಷೀರ ಕ್ರಾಂತಿ ಮುಂತಾದವುಗಳ ಜತೆಗೆ ಸಮರ್ಪಕ ಶಿಕ್ಷಣ, ಆರೋಗ್ಯ ವ್ಯವಸ್ಥೆಗಳನ್ನು ಕಲ್ಪಿಸಿ ರಾಷ್ಟ್ರ ನಿರ್ಮಾಣ ಕಾರ್ಯದಲ್ಲಿ ತನ್ನದೇ ಆದ ಕೊಡುಗೆಯನ್ನು ನೀಡಿತು,” ಎಂದರು,.

ಪಂಚ ಗ್ಯಾರಂಟಿಗಳಡಿ ಜಿಲ್ಲೆಯಲ್ಲಿ 2,184 ಕೋಟಿ ರೂ. ಪಾವತಿ:
“2023ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರುಗಳ ನೇತೃತ್ವದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ “ಪಂಚ ಗ್ಯಾರಂಟಿ” ಯೋಜನೆಗಳನ್ನು ಜಾರಿಗೊಳಿಸಿದ್ದೇ ಅಲ್ಲದೆ, ಅದನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಂಚ ಗ್ಯಾರಂಟಿ ಯೋಜನೆಗಳಾದ “ಗೃಹ ಲಕ್ಷ್ಮಿ” ಯೋಜನೆಯಡಿ 1,215 ಕೋಟಿ ರೂ., “ಗೃಹ ಜ್ಯೋತಿ” ಯೋಜನೆಯಡಿ 318 ಕೋಟಿ ರೂ., “ಅನ್ನಭಾಗ್ಯ” ಯೋಜನೆಯಡಿ 416 ಕೋಟಿ ರೂ., “ಶಕ್ತಿ” ಯೋಜನೆಯಡಿ 223 ಕೋಟಿ ರೂ. ಮತ್ತು “ಯುವನಿಧಿ” ಯೋಜನೆಯಡಿ 12 ಕೋಟಿ ರೂ. ಸೇರಿ ಒಟ್ಟು 2,184 ಕೋಟಿಗಳನ್ನು ಡಿಬಿಟಿ ಮೂಲಕ ನೇರವಾಗಿ ಫಲಾನುಭವಿಗಳ ಖಾತೆಗೆ ವರ್ಗಾವಣೆ ಮಾಡಲಾಗಿದೆ,” ಎಂದು ಮಾಹಿತಿ ನೀಡಿದರು.

ಶಾಸಕ ಎಚ್‌.ಡಿ. ತಮ್ಮಯ್ಯ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ವಿಧಾನಪರಿಷತ್‌ ಉಪ ಸಭಾಪತಿ ಎಂ.ಕೆ. ಪ್ರಾಣೇಶ್‌, ಸದಸ್ಯರಾದ ಎಸ್‌.ಎಲ್‌. ಭೋಜೇಗೌಡ, ಸಿ.ಟಿ. ರವಿ, ಕೆಪೆಕ್‌ ಅಧ್ಯಕ್ಷ ಬಿ.ಎಚ್‌. ಹರೀಶ್‌, ಕಾಡಾ ಅಧ್ಯಕ್ಷ ಡಾ. ಅಂಶುಮಂತ್‌, ಜಿಲ್ಲಾಧಿಕಾರಿ ಎನ್‌.ಎಂ. ನಾಗರಾಜ್‌, ಜಿಲ್ಲಾ ರಕ್ಷಣಾಧಿಕಾರಿ ಜಿತೇಂದ್ರ ಕುಮಾರ್‌ ದಯಾಮ, ಜಿಲ್ಲಾ ಪಂಚಾಯ್ತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್‌.ಎಸ್. ಕೀರ್ತನಾ, ನಗರಸಭೆ ಅಧ್ಯಕ್ಷೆ ಶೀಲಾ ದಿನೇಶ್‌, ಸಿಡಿಎ ಅಧ್ಯಕ್ಷ ನಯಾಜ್‌ ಅಹಮದ್‌ ಮತ್ತಿತರರು ಪಾಲ್ಗೊಂಡಿದ್ದರು.

Republic Day is a day to make a commitment for the progress of the country.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...