Home namma chikmagalur chikamagalur ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಪಿಎಚ್‌ಡಿ ಪದವಿ
chikamagalurHomeLatest Newsnamma chikmagalur

ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿಗೆ ಪಿಎಚ್‌ಡಿ ಪದವಿ

Share
Share
ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತ ಗಂಗೋತ್ರಿಯ 21ನೇ ವಾರ್ಷಿಕ ಘಟಿಕೋತ್ಸವದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರು ರಾಜ್ಯಪಾಲ ತಾವರ ಚಂದ್ ಗೆಹ್ಲೋಟ್ ಅವರಿಂದ ಪಿಎಚ್‌ಡಿ ಪದವಿ ಸ್ವೀಕರಿಸಿದರು.
ಸಿ.ಟಿ.ರವಿ ಮುಕ್ತ ಗಂಗೋತ್ರಿಯಲ್ಲಿ ರಾಜ್ಯಶಾಸ್ತ್ರ ಪ್ರಾಧ್ಯಾಪಕರಾದ ಡಾ।ಕೆ.ಜೆ. ಸುರೇಶ್ ಅವರ ಮಾರ್ಗದರ್ಶನದಲ್ಲಿ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಎಂಬ ವಿಷಯದಲ್ಲಿ ಅಧ್ಯಯನ ನಡೆಸಿ, ಮಹಾಪ್ರಬಂಧ ಮಂಡಿಸಿದ್ದರು.
ಓದುವುದು ನನ್ನ ಪ್ರಮುಖ ಆಸಕ್ತಿ. ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ, ಮುಕ್ತಗಂಗೋತ್ರಿ ಅಡಿಯಲ್ಲಿ ರಾಜಕೀಯ ಶಾಸ್ತ್ರದ ಪ್ರಾಧ್ಯಾಪಕರಾದ ಡಾ।ಕೆ.ಜೆ.ಸುರೇಶ್ ಅವರ ಮಾರ್ಗದರ್ಶನದಲ್ಲಿ “ಭಾರತದಲ್ಲಿ ಸಮ್ಮಿಶ್ರ ಸರ್ಕಾರಗಳ ಸಮಸ್ಯೆಗಳು ಹಾಗೂ ಸವಾಲುಗಳ ಒಂದು ಅಧ್ಯಯನ” ಎಂಬ ಪ್ರಬಂಧವನ್ನು ನಿರಂತರವಾದ 4 ವರ್ಷಗಳ ಅಧ್ಯಯನದೊಂದಿಗೆ 2023 ರಲ್ಲಿ ಪೂರ್ಣಗೊಳಿಸಿ, ಮಂಡಿಸಿದ್ದೇನೆ.
ಅಧ್ಯಯನದ ಸಂದರ್ಭದಲ್ಲಿ ತಿದ್ದಿ, ತೀಡಿ ಅತ್ಯುತ್ತಮವಾಗಿ ಮಾರ್ಗದರ್ಶನ ಮಾಡಿದ ಡಾ।ಕೆ.ಜೆ ಸುರೇಶ್ ಅವರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದಿದ್ದಾರೆ.
ಯುಪಿಎ ಮತ್ತು ಎನ್‌ಡಿಎ ಒಕ್ಕೂಟಗಳ ಮೈತ್ರಿಕೂಟ ಸರ್ಕಾರಗಳನ್ನು ತುಲನಾತ್ಮಕವಾಗಿ ಅಧ್ಯಯನ ಮಾಡಿದ್ದು, ಮಹಾ ಪ್ರಬಂಧ ರಚಿಸಿದ್ದೇನೆ ಎಂದಿರುವ ಅವರು, ರಾಜಕೀಯ ಕಾರ್ಯದೊತ್ತಡಗಳ ನಡುವೆ ಪಿಎಚ್‌ಡಿ ಅಧ್ಯಯನ ಕೊಂಚ ನಿಧಾನವಾಗಿತ್ತು. ಆದರೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ಮುಕ್ತನಾದ ಬಳಿಕ ಕೊಂಚ ಹೆಚ್ಚಿನ ಸಮಯ ಲಭಿಸಿತು. ಇದನ್ನು ಬಳಸಿಕೊಂಡು ಪಿಎಚ್‌ಡಿ ಅಧ್ಯಯನ ಪೂರ್ಣಗೊಳಿಸಿದೆ ಎಂದು ತಿಳಿಸಿದ್ದಾರೆ.
Legislative Council member C.T. Ravi receives PhD degree
Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...