Home namma chikmagalur chikamagalur ಮನೆಗೆ ನುಗ್ಗಿದ ಕಳ್ಳರಿಂದ ನಗದು ಹಾಗೂ ಕಾಫಿ ಬೀಜ ಕಳವು
chikamagalurCrime NewsHomeLatest Newsnamma chikmagalur

ಮನೆಗೆ ನುಗ್ಗಿದ ಕಳ್ಳರಿಂದ ನಗದು ಹಾಗೂ ಕಾಫಿ ಬೀಜ ಕಳವು

Share
Share

ಶೃಂಗೇರಿ: ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಮಲ್ನಾಡ್ ಗ್ರಾಮದ ಕುಂಬಾರಿಯಲ್ಲಿ ಬೀಗ ಹಾಕಿದ್ದ ಮನೆಗೆ ನುಗ್ಗಿದ ಕಳ್ಳರು ನಗದು ಹಾಗೂ ಕಾಫಿ ಬೀಜಗಳನ್ನು ಕಳವು ಮಾಡಿದ್ದಾರೆ.

ಜನವರಿ 28ರಂದು ಬೆಳಿಗ್ಗೆ ಗ್ರಾಮದ ನಿವಾಸಿ ರಘುಪತಿ ರಾವ್ ಅವರು ತಮ್ಮ ಮನೆಗೆ ಬೀಗ ಹಾಕಿ ತೀರ್ಥಹಳ್ಳಿಗೆ ತೆರಳಿದ್ದರು. ಈ ಸಂದರ್ಭವನ್ನು ಬಳಸಿಕೊಂಡ ದುಷ್ಕರ್ಮಿಗಳು ಮನೆಯ ಬೀಗ ಮುರಿದು ಒಳನುಗ್ಗಿದ್ದಾರೆ.

ರಘುಪತಿ ರಾವ್ ಅವರು ವಾಪಸ್ ಬಂದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದ್ದು, ಮನೆಯಲ್ಲಿದ್ದ ಸುಮಾರು 50,000 ರೂಪಾಯಿ ನಗದು ಹಾಗೂ ಎರಡು ಮೂಟೆ ಕಾಫಿ ಬೀಜಗಳನ್ನು ಕಳ್ಳರು ದೋಚಿದ್ದಾರೆ.

ಈ ಸಂಬಂಧ ಸಂತ್ರಸ್ತ ರಘುಪತಿ ರಾವ್ ನೀಡಿದ ದೂರಿನ ಮೇರೆಗೆ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳುವಾದ ಸ್ವತ್ತಿನ ಪತ್ತೆಗಾಗಿ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ.

Thieves break into house steal cash and coffee beans

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...