Home Crime News ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು
Crime NewsHomeLatest Newsnamma chikmagalurTarikere

ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಕಳವು

Share
Share

ತರೀಕೆರೆ: ಮನೆಯೊಂದರ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಮತ್ತು ಬೆಳ್ಳಿಯ ಆಭರಣಗಳನ್ನು ಕಳವು ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ಪಟ್ಟಣದ ಕೋಟೆ ಕ್ಯಾಂಪ್ ನಲ್ಲಿ ನಡೆದಿದೆ.

ದೂರುದಾರರಾದ ಆಸ್ಮಾ ಪರ್ವೀನ್ ಅವರು ಕೆಲಸದ ನಿಮಿತ್ತ ಜ. 25 ರಂದು ಬೆಂಗಳೂರಿಗೆ ತೆರಳಿದ್ದರು. ಫೆ. 01 ರಂದು ಮನೆಗೆ ವಾಪಸ್ ಬಂದು ನೋಡಿದಾಗ, ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಕಳ್ಳರು ಯಾವುದೋ ಆಯುಧದಿಂದ ಬಾಗಿಲ ಬೀಗವನ್ನು ಮೀಟಿ ಒಳಗೆ ನುಗ್ಗಿದ್ದಾರೆ. ಮನೆಯ ಗಾಡೇಜ್ ನಲ್ಲಿದ್ದ ಲಾಕರ್ ಮುರಿದು ಅದರಲ್ಲಿದ್ದ ಸುಮಾರು 96,000 ರೂಪಾಯಿ ಬೆಲೆಬಾಳುವ 16 ಗ್ರಾಂ ಚಿನ್ನದ ಆಭರಣಗಳು ಹಾಗೂ 7,000 ರೂಪಾಯಿ ಮೌಲ್ಯದ 140 ಗ್ರಾಂ ಬೆಳ್ಳಿಯ ವಸ್ತುಗಳನ್ನು ದೋಚಿದ್ದಾರೆ.

ಕಳುವಾದ ಒಟ್ಟು ಆಭರಣಗಳ ಅಂದಾಜು ಮೌಲ್ಯ 1,03,000/- ರೂಪಾಯಿಗಳಾಗಿದ್ದು, ತರೀಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಗಳ ಪತ್ತೆಗೆ ತನಿಖೆ ಕೈಗೊಂಡಿದ್ದಾರೆ.

House lock broken jewellery worth lakhs stolen

Share

Leave a comment

Leave a Reply

Your email address will not be published. Required fields are marked *

Don't Miss

ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿದ ರೈತರ ಸ್ಥಿತಿ ಅವಲೋಕಿಸಿದ ಸಚಿವ ಜಾರ್ಜ್

ಚಿಕ್ಕಮಗಳೂರು: ಸಕಾಲದಲ್ಲಿ ಮಳೆಯಾಗದೆ ಸಂಕಷ್ಟಕ್ಕೆ ಸಿಲುಕಿರುವ ರೈತರು, ಒಣಗಿ ನಿಂತಿರುವ ಭೂಮಿ, ಮಳೆಯ ನಿರೀಕ್ಷೆಯಲ್ಲಿ ಬಿತ್ತನೆ ಮಾಡಿದ್ದ ಬೀಜಗಳು ಮೊಳಕೆ ಒಡೆಯದೆ ಬಿಸಿಲಿನ ಝಳಕ್ಕೆ ಸಿಲುಕಿ ಸುಟ್ಟುಹೋಗಿರುವುದನ್ನು ಜಿಲ್ಲಾ ಉಸ್ತುವಾರಿ ಸಚಿವ...

ಸಚಿವ ಕೆ.ಜೆ. ಜಾರ್ಜ್ ಬೆಂಗಾವಲು ವಾಹನ ಅಪಘಾತ

ಚಿಕ್ಕಮಗಳೂರು : ಅಜ್ಜಂಪುರ ಜಿಲ್ಲೆಯ ಬಯಲುಸೀಮೆ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ವೀಕ್ಷಣೆಗಾಗಿ ಪ್ರವಾಸದಲ್ಲಿದ್ದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರ ಬೆಂಗಾವಲು (Escort) ವಾಹನ ಅಪಘಾತಕ್ಕೀಡಾದ ಘಟನೆ ಅಜ್ಜಂಪುರ ಪಟ್ಟಣದಲ್ಲಿ...

Related Articles

ಪರಿಸರ ಸೂಕ್ಷ್ಮ ಪ್ರದೇಶ ಕರಡು ಅಧಿಸೂಚನೆ ಮಲೆನಾಡಿಗೆ ಕಂಟಕ

ಚಿಕ್ಕಮಗಳೂರು: ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯದ ೧೦ ಜಿಲ್ಲೆಗಳ ೨೦ ಸಾವಿರಕ್ಕೂ ಅಧಿಕ ಚದರ ಕಿಲೋ...

ಅಂಗಾಂಗ ದಾನ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿ

ಚಿಕ್ಕಮಗಳೂರು: ಅಂಗಾಂಗ ದಾನ ಮಾಡಿ ರೂಬೆನ್ ಮೊಸಸ್ ಕುಟುಂಬ ಸಮಾಜಕ್ಕೆ ಮಾದರಿಯಾಗಿದೆ ಎಂದು ನಗರಸಭೆ ಪೌರಾಯುಕ್ತ...

ವೈಜ್ಞಾನಿಕ ರೀತಿಯಲ್ಲಿ ಕಸ ವಿಲೇವಾರಿಗೆ ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ಕಸವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡುವಂತೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅಧಿಕಾರಿಗಳಿಗೆ ಸೂಚಿಸಿದರು. ಕೊಪ್ಪ...

ಫಸಲ್ ಬಿಮಾ ನೋಂದಣಿ ಹೆಚ್ಚಿಸಲು ಜಿಲ್ಲಾಧಿಕಾರಿ ನಿರ್ದೇಶನ

ಚಿಕ್ಕಮಗಳೂರು: ಫಸಲ್ ಬಿಮಾ ಯೋಜನೆಯಡಿ ನೋಂದಣಿ ಕಡಿಮೆಯಾಗಿದ್ದು, ತಕ್ಷಣ ಅಗತ್ಯ ಪ್ರಚಾರ ಕೈಗೊಂಡು ರೈತರ ಮನವೊಲಿಸಿ...