Home namma chikmagalur chikamagalur ನಗರಸಭೆಯಿಂದ ಬೆನಕ ಬಾರ್ ಆಂಡ್ ರೆಸ್ಟೋರೆಂಟ್ ಗೆ ಬೀಗ
chikamagalurCrime NewsHomeLatest Newsnamma chikmagalur

ನಗರಸಭೆಯಿಂದ ಬೆನಕ ಬಾರ್ ಆಂಡ್ ರೆಸ್ಟೋರೆಂಟ್ ಗೆ ಬೀಗ

Share
Share

ನಗರಸಭೆ ನಿಗದಿಪಡಿಸಿದ ಗಾಡಿಗೆ ಕಸ ನೀಡದೆ ಚರಂಡಿಗೆ ಹಾಕುತ್ತಿದ್ದ ನಗರದ ಬೆನಕ ಬಾರ್ ಆಂಡ್ ರೆಸ್ಟೋರೆಂಟ್ ಮಳಿಗೆ ಬಾಗಿಲಿಗೆ ನಗರಸಭೆ ಅಧಿಕಾರಿ, ಸಿಬ್ಬಂದಿ ಕಸ ತಂದು ಸುರಿದು ದಂಡ ಹಾಕಿದ್ದಾರೆ. ಅಲ್ಲದೆ, ವ್ಯಾಪಾರ ಪರವಾನಗಿ ಪಡೆಯದ ಇಂಡಿಯನ್ ಪೆಟ್ರೋಲ್ ಬಂಕ್‌ ಗೆ ಒಂದು ದಿನದೊಳಗೆ ಬಂಕ್ ಲೈಸನ್ಸ್ ನವೀಕರಣ ಮಾಡಿಕೊಳ್ಳುವಂತೆ ಗಡುವುನೀಡಿದ್ದಾರೆ.

ಬಾರ್ ಆಂಡ್ ರೆಸ್ಟೋರೆಂಟ್‌ನವರು ಖಾಲಿ ಬಾಟಲಿ ಮತ್ತು ಪ್ಲಾಸ್ಟಿಕ್ ತ್ಯಾಜ್ಯವನ್ನು ನಿತ್ಯ ಚರಂಡಿಗೆ ತಂದು ಸುರಿಯುತ್ತಿದ್ದರು. ಇದರಿಂದ ಸುತ್ತಮುತ್ತಲಿನ ವಾತಾವರಣ ಅನೈರ್ಮಲ್ಯದಿಂದ ಕೂಡಿತ್ತು. ಈ ಬಗ್ಗೆ ನಗರಸಭೆಯಿಂದ ಅನೇಕ ಬಾರಿ ಎಚ್ಚರಿಕೆ ನೀಡಲಾಗಿತ್ತು.

ಆದರೂ, ಮತ್ತೆ ಕಸ ಹಾಕುತ್ತಿದ್ದರಿಂದ ನಗರಸಭೆ ಅಧಿಕಾರಿ, ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಸುತ್ತಮುತ್ತ ಇದ್ದ ಕಸವನ್ನು ಒಟ್ಟುಗೂಡಿಸಿ ತಂದು ಮಳಿಗೆ ಬಾಗಿಲಿಗೆ ಸುರಿದರು. ಜತೆಗೆ 10 ಸಾವಿರ ರೂ. ದಂಡವನ್ನೂ ವಿಧಿಸಲಾಗಿದೆ ಎಂದು ನಗರಸಭೆ ಅಧ್ಯಕ್ಷರಾದ ಶೀಲಾ ದಿನೇಶ್ ತಿಳಿಸಿದ್ದಾರೆ.

ಬಾರ್ ಪಕ್ಕದಲ್ಲಿರುವ ಇಂಡಿಯನ್ ಪೆಟ್ರೋಲ್ ಬಂಕ್ ಕಳೆದ 6 ವರ್ಷದಿಂದ ಟ್ರೇಡ್ ಲೈಸನ್ಸ್‌ ರಿನಿವಲ್ ಮಾಡಿಕೊಂಡಿರಲಿಲ್ಲ.ಹೀಗಾಗಿ ಆ ಬಂಕ್ ಮುಚ್ಚಿಸಲಾಯಿತು. ನಂತರ ನಡೆದ ಮಾತುಕತೆಯಲ್ಲಿ ಒಂದು ದಿನಗೊಳಗೆ ಲೈಸೆನ್ಸ್ ರಿನಿವಲ್ ಮಾಡಿ ಕೊಳ್ಳುವುದಾಗಿ ತಿಳಿಸಿದ ನಂತರ ಬಾಗಿಲು ತೆರೆಯಲು ಅವಕಾಶ ನೀಡಿದ್ದೇವೆ.

ಶನಿವಾರ ಮಾಡಿಕೊಳ್ಳದಿದ್ದಲ್ಲಿ ಬಂಕ್ ಮುಂದೆ ಕಸದ ರಾಶಿ ಸುರಿದು ವಾಹನಗಳು ಬಾರದಂತೆ ತಡೆಯುತ್ತೇವೆ ಎಂದು ನಗರಸಭೆ ಸದಸ್ಯ ಕುಮಾರಗೌಡ, ಅಧಿಕಾರಿಗಳು ತಿಳಿಸಿದ್ದಾರೆ.

Benaka Bar and Restaurant closed by Municipal Council

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...