Home namma chikmagalur chikamagalur ಕಬಡ್ಡಿ ಪಂದ್ಯಾವಳಿದಲ್ಲಿ ಜ್ಞಾನ ಸಹಾದ್ರಿ ಶಂಕರಘಟ್ಟ ತಂಡ ಪ್ರಥಮ
chikamagalurHomeLatest Newsnamma chikmagalur

ಕಬಡ್ಡಿ ಪಂದ್ಯಾವಳಿದಲ್ಲಿ ಜ್ಞಾನ ಸಹಾದ್ರಿ ಶಂಕರಘಟ್ಟ ತಂಡ ಪ್ರಥಮ

Share
Share

ಚಿಕ್ಕಮಗಳೂರು: ಕುವೆಂಪು ವಿಶ್ವವಿದ್ಯಾಲಯದ ಸಹಯೋಗದಲ್ಲಿ ಶನಿವಾರ ಐಡಿ ಎಸ್‌ಜಿ ಕಾಲೇಜಿನಲ್ಲಿ ನಡೆದ ಅಂತರ ಕಾಲೇಜು ಕಬಡ್ಡಿ ಪಂದ್ಯಾವಳಿಯಲ್ಲಿ ಶಿವಮೊಗ್ಗದ ಕುವೆಂಪು ಯೂ ನಿವರ್ಸಿಟಿ ಜ್ಞಾನ ಸಹ್ಯಾದ್ರಿ ಶಂಕರಘಟ್ಟ ತಂಡವು ಪ್ರಥಮ ಸ್ಥಾನ ಗಳಿಸುವ ಮೂಲಕ ವಿಜಯಮಾಲೆ ಮುಡಿ ಗೇರಿಸಿಕೊಂಡಿತು.

ಸಾಗರದ ಎಲ್.ಬಿ ಮತ್ತು ಎಸ್.ಬಿ.ಎಸ್. ತಂಡ ದ್ವಿತೀಯ ಹಾಗೂ ಶಿವಮೊಗ್ಗ ಯು.ಸಿ.ಪಿ.ಇ. ಶಂ ಕರಘಟ್ಟ ತಂಡವು ತೃತೀಯ ಪಡೆದುಕೊಂಡಿತು. ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎನ್. ಡಿ.ವಿರೂಪಾಕ್ಷ ಹಾಗೂ ಐಡಿಎಸ್‌ಜಿ ಪ್ರಾಂಶುಪಾಲೆ ತಸನಿಮ್ ಕೌಸರ್ ಮನಿಯಾರ್ ವಿಜೇತ ತಂಡ ಗಳಿಗೆ ಬಹುಮಾನ ವಿತರಿಸಿದರು.

ವಿಧಾನ ಪರಿಷತ್ ಸದಸ್ಯ ಎಸ್.ಎಲ್ ಬೋಜೇಗೌಡ ಮಾತನಾಡಿ ಕ್ರೀಡೆಯನ್ನು ಪ್ರತಿನಿತ್ಯ ಅಭ್ಯಾಸ ಮಾಡುವುದರ ಜೊತೆಗೆ ಜಾಗರೂಕತೆಯಿಂದ ಆಟವಾಡಿ ತಮ್ಮ ಗುರಿ ಮುಟ್ಟಬೇಕೆಂದು ತಿಳಿಸಿ, ಇತ್ತೀಚಿನ ಒತ್ತಡದ ಬದುಕಿನಲ್ಲಿ ಮನುಷ್ಯನ ಮಾನಸಿಕ ಆರೋಗ್ಯ ಬಹಳ ಮುಖ್ಯವಾಗಿ ಬೇಕಾಗಿದೆ ದೇಹದ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯ ಕಾಪಾಡಿಕೊಳ್ಳಬೇಕು ಎಂದರು.

ಓದು ಇನ್ನಿತರೆ ಕೆಲಸಗಳಲ್ಲಿ ನಿರೀಕ್ಷಿತ ಫಲಿತಾಂಶ ಪಡೆಯಲು ಒತ್ತಡದಿಂದ ಹೊರ ಬರುವುದು ಮುಖ್ಯ ಎಂದ ಅವರು ಕ್ರೀಡಾ ಚಟುವಟಿಕೆಗಳಲ್ಲಿ ನಿರಂತರವಾಗಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಮಾನಸಿಕ ಒತ್ತಡಗಳಿಂದ ಹೊರಬಂದು ದೇಹದ ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡೆ ಸಹಕಾರಿಯಾಗಲಿದೆ ಎಂದರು.

ಕುವೆಂಪು ವಿಶ್ವವಿದ್ಯಾನಿಲಯದ ಕುಲಪತಿಗಳಾದ ಶರತ್ ಅನಂತ್ ಮೂರ್ತಿ ಮಾತನಾಡಿ ನಮ್ಮ ನಾಡಿನ ಕ್ರೀಡೆಗಳಲ್ಲಿ ಒಂದಾದ ಕಬ್ಬಡಿಯು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದಿದೆ, ಎಲ್ಲಾ ಆಟಗಳಿಗಿಂತ ಮುಂಚೂಣಿಯಲ್ಲಿರುವ ಕಬ್ಬಡಿ ಕ್ರೀಡೆಗೆ ಹೆಚ್ಚಿನ ಪ್ರೋತ್ಸಾಹ ದೋರೆಯುತ್ತಿರುವುದು ಸಂತೋಷದ ವಿಷಯವಾಗಿದೆ ಎಂದ ಅವರು ಕ್ರೀಡೆಯಲ್ಲಿ ಭಾಗವಹಿಸುತ್ತಿರುವ ಎಲ್ಲಾ ಕ್ರೀಡಾಪಟುಗಳಿಗೆ ಅಭಿನಂಧನೆ ಸಲ್ಲಿಸಿದರು.

ಬಳಿಕ ಕುವೆಂಪು ವಿಶ್ವವಿದ್ಯಾಲಯ ದೈಹಿಕ ಶಿಕ್ಷಣ ನಿರ್ದೇಶಕ ಡಾ. ಎನ್.ಡಿ.ವಿರೂಪಾಕ್ಷ ಮಾತನಾಡಿ ಎರಡು ದಿನಗಳ ಕಬಡ್ಡಿ ಪಂದ್ಯಾವಳಿ ಕಾಲೇಜು ಆಡಳಿತ ಅಚ್ಚುಕಟ್ಟಿನಿಂದ ಸುವ್ಯವಸ್ಥಿತವಾಗಿ ನಡೆಸಿದೆ. ಕಾ ರ್ಯಕ್ರಮ ನಡೆಸುವುದು ಸುಲಭದ ಮಾತಲ್ಲ. ಸಕಲ ಜವಾಬ್ದಾರಿಯುತ ಹಾಗೂ ಆಟಗಾರರಿಗೆ ಅನುಕೂಲ ವಾಗುವುದು ಮುಖ್ಯ. ಆ ನಿಟ್ಟಿನಲ್ಲಿ ಕಾಲೇಜು ಸಕಾತ್ಮಕವಾಗಿ ಸ್ಪಂದಿಸಿದೆ ಎಂದರು.

ಕ್ರೀಡಾ ಚಟುವಟಿಕೆ ಜೊತೆಗೆ ಶೈಕ್ಷಣಿಕ ಅರ್ಹತೆಯನ್ನು ವಿದ್ಯಾರ್ಥಿಗಳು ಹೊಂದಿರಬೇಕು. ಅರ್ಹತೆಯಿ ಲ್ಲದಿದ್ದರೆ ಸಮಾಜದಲ್ಲಿ ಬದುಕುವುದು ಕಷ್ಟವಾಗಲಿದೆ. ಉತ್ತರ ಭಾರತದ ಓರ್ವ ಕ್ರೀಡಾಪಟು ಕ್ರೀಡೆಯಲ್ಲಿ ಸಾಧನೆ ಮಾಡಿದ್ದರು. ಆದರೆ ಶೈಕ್ಷಣಿಕ ಅರ್ಹತೆ ಹೊಂದಿರದ ಕಾರಣ ಅವರ ಜೀವನ ಬೀದಿಗಾಡಿಗಳಲ್ಲಿ ವ್ಯಾಪಾರ ನಡೆಸುವಂತಾಗಿದೆ ಎಂದು ತಿಳಿಸಿದರು.

ಕ್ರೀಡೆ ಹಾಗೂ ವ್ಯಾಸಂಗದ ವೇಳೆ ವಿದ್ಯಾರ್ಥಿಗಳು ಸಮಯ ವ್ಯರ್ಥಗೊಳಿಸದಿರಿ. ಕ್ಷಣಕಾಲದ ಶ್ರೀಮ ಂತಿಕೆ, ವ್ಯಾಮೋಹಕ್ಕೆ ಒಳಗಾಗದೇ, ದೀರ್ಘಕಾಲದ ಜೀವನಕ್ಕೆ ಮೊದಲು ಆದ್ಯತೆ ನೀಡಬೇಕು. ಹರ್ಷದ ಕೂ ಳಿಗಿಂತ, ವರ್ಷದ ಕೂಳು ಮುಖ್ಯ. ಹಾಗಾಗಿ ಬದುಕನ್ನು ಆತ್ಮಸ್ಥೈರ್ಯದಿಂದ ಎದುರಿಸಬೇಕು ಎಂದರು.

ಕಾಲೇಜು ಅಧ್ಯಾಪಕ ಡಾ. ಕೆ.ಎನ್.ಲಕ್ಷ್ಮೀಕಾಂತ್ ಮಾತನಾಡಿ ಎರಡು ದಿನದಲ್ಲಿ ೨೮ ತಂಡಗಳು ತೀಪು ಗಾರರ ನಿರ್ಧಾರಕ್ಕೆ ಮರುಪ್ರಶ್ನಿಸದೇ ಹಾಗೂ ಕಪ್ಪುಚುಕ್ಕೆಯಿಲ್ಲದಂತೆ ಸುಲಲಿತವಾಗಿ ಪಂದ್ಯಾವಳಿ ಯಶಸ್ವಿ ಗೊಳಿಸಿದ್ದಾರೆ. ಕ್ರೀಕೇಟ್, ವಾಲಿಬಾಲ್ ಹೊರತಾಗಿ ಕಬಡ್ಡಿ ಏಷ್ಯಾ ಖಂಡದಲ್ಲೇ ಅತ್ಯಂತ ಪ್ರಚಲಿತವಿರುವ ಮೂರನೇ ಅತಿದೊಡ್ಡ ಕ್ರೀಡೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಐಡಿಎಸ್‌ಜಿ ಸರ್ಕಾರಿ ಕಾಲೇಜು ದೈಹಿಕ ಶಿಕ್ಷಕ ಕೆ.ಸಿ.ಕುಮಾರಸ್ವಾಮಿ, ಪ್ರಾಧ್ಯಾಪಕ ಎಸ್.ವಿ.ನಾಗರಾಜ್, ಕ್ರೀಡಾ ಸಮಿತಿ ಸದಸ್ಯರಾದ ಡಾ.ಎಸ್.ಮಹೇಶ್, ಡಾ.ಸೋಮಶೇಖರ್, ಡಾ.ಮೋಹ ನ್‌ಕುಮಾರ್, ಸುಧಾ, ದೈಹಿಕ ಶಿಕ್ಷಕ ರವೀಂದ್ರೇಗೌಡ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Gnana Sahadri Sankaraghatta team first in Kabaddi tournament

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...